• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾಜಿ ರಕ್ಷಣಾ ಸಚಿವ ಜಸ್ವಂತ್ ಸಿಂಗ್ ನಿಧನ

|

ನವದೆಹಲಿ, ಸೆಪ್ಟೆಂಬರ್ 27 : ಧೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಕ್ಷಣಾ ಸಚಿವ, ಹಿರಿಯ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ವಿಧಿವಶರಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಹಿರಿಯ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಭಾನುವಾರ ದೆಹಲಿಯಲ್ಲಿ 82 ವರ್ಷದ ಜಸ್ವಂತ್ ಸಿಂಗ್ ನಿಧನ ಹೊಂದಿದರು. 1980 ರಿಂದ 2014ರ ತನಕ ಲೋಕಸಭೆ ಅಥವ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದ ಜಸ್ವಂತ್ ಸಿಂಗ್ ಅತಿ ಹೆಚ್ಚು ಕಾಲ ಕಾರ್ಯ ನಿರ್ವಹಣೆ ಮಾಡಿದ ಜನಪ್ರತಿನಿಧಿ ಎಂಬ ಹೆಗ್ಗಳಿಕೆ ಹೊಂದಿದ್ದರು.

ರಾಜಸ್ಥಾನದಲ್ಲಿ ಬಿಜೆಪಿಗೆ ಹಿನ್ನಡೆ, ಪಕ್ಷ ತೊರೆದ ಜಸ್ವಂತ್ ಸಿಂಗ್ ಪುತ್ರ

1938ರ ಜನವರಿ 3ರಂದು ಜಸ್ವಂತ್ ಸಿಂಗ್ ಜನಿಸಿದ್ದರು. ಭಾರತದ ರಕ್ಷಣಾ ಸಚಿವರಾಗಿ ಜಸ್ವಂತ್ ಸಿಂಗ್ ಕಾರ್ಯ ನಿರ್ವಹಣೆ ಮಾಡಿದ್ದರು. ಬಿಜೆಪಿಯ ಸಂಸ್ಥಾಪಕದಲ್ಲಿ ಜಸ್ವಂತ್ ಸಿಂಗ್ ಸಹ ಒಬ್ಬರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ರಾಜಸ್ಥಾನ : ಕಾಂಗ್ರೆಸ್ ಸೇರಿದ ಜಸ್ವಂತ್ ಪುತ್ರ, ಬಿಜೆಪಿಗೆ ಭಾರಿ ಹಿನ್ನಡೆ

ಜಸ್ವಂತ್ ಸಿಂಗ್ ಧೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನೆಯಲ್ಲಿ ಜಾರಿ ಬಿದ್ದಿದ್ದ ಅವರು ಕೋಮಾಕ್ಕೆ ಜಾರಿದ್ದರು.

ಸಂತಾಪ ಸೂಚಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಜಸ್ವಂತ್ ಸಿಂಗ್ ಪುತ್ರ ಮನ್ವೇಂದ್ರ ಸಿಂಗ್‌ಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ಆನಾರೋಗ್ಯ ಪೀಡಿತರಾಗಿದ್ದರು.

ಸಾಮಾಜಿಕ ನಿಲುವು ಹೊಂದಿದ್ದರು

ಜಸ್ವಂತ್ ಸಿಂಗ್ ಅವರನ್ನು ಸಾಮಾಜಿಕ ಮತ್ತು ರಾಜಕೀಯ ನಿಲುವಳಿಗಾಗಿ ನೆನಪು ಮಾಡಿಕೊಳ್ಳಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಸಂಘಟನೆಗೂ ಅವರು ಕೊಡುಗೆ ನೀಡಿದ್ದಾರೆ ಎಂದು ಸಂತಾಪ ಸೂಚಿಸಿದ್ದಾರೆ.

ರಕ್ಷಣಾ ಖಾತೆ ನಿಭಾಯಿಸಿದ್ದರು

ದೇಶಕ್ಕಾಗಿ ಜಸ್ವಂತ್ ಸಿಂಗ್ ಅಪಾರ ಸೇವೆ ಸಲ್ಲಿಸಿದ್ದಾರೆ. ಅಟಲ್ ಜೀ ಸರ್ಕಾರದಲ್ಲಿ ಅವರು ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ಖಾತೆಯನ್ನು ನಿಭಾಯಿಸಿದ್ದರು ಎಂದು ಮೋದಿ ನೆನೆಪು ಮಾಡಿಕೊಂಡಿದ್ದಾರೆ.

ರಾಜನಾಥ್ ಸಿಂಗ್ ಸಂತಾಪ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

English summary
Former union minister Jaswant Singh passed away. He was 82.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X