ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಜಪೇಯಿ ಆರೋಗ್ಯದಲ್ಲಿ ಏರುಪೇರು: ಏಮ್ಸ್‌ಗೆ ದಾಖಲು

|
Google Oneindia Kannada News

Recommended Video

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಗೆ ದಾಖಲು | Oneindia Kannada

ನವದೆಹಲಿ, ಜೂನ್ 11: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಜಪೇಯಿ ಅವರ ಆರೋಗ್ಯದಲ್ಲಿ ವಯೋಸಹಜ ಸಮಸ್ಯೆಗಳು ಕಾಣಿಸಿಕೊಂಡಿವೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚನೆ ನೀಡಿದ್ದರು.

ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಪರಿಚಯಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಪರಿಚಯ

ಪ್ರತಿ ಬಾರಿ ನಡೆಸಲಾಗುವ ಆರೋಗ್ಯ ತಪಾಸಣೆಯ ಸಲುವಾಗಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರ ಮೇಲ್ವಿಚಾರಣೆಯಲ್ಲಿ ವಾಜಪೇಯಿ ಅವರ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

former pm Atal Bihari Vajpayee admitted to hospital

93 ವರ್ಷ ವಯಸ್ಸಿನ ವಾಜಪೇಯಿ ಅವರು ಸುಮಾರು ಹತ್ತು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

2001ರಲ್ಲಿ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅವರು ನಡೆದಾಡಲು ಕಷ್ಟಪಡುವಂತಾಗಿತ್ತು. 2009ರಲ್ಲಿ ಅವರು ಪಾರ್ಶ್ವವಾಯುವಿಗೆ ತುತ್ತಾದ ಬಳಿಕ ಮಾತನಾಡುವುದು ಸಹ ಅಸಾಧ್ಯವಾಗಿದೆ.

ಸದಾ ಗಾಲಿಕುರ್ಚಿಯಲ್ಲಿಯೇ ಸಹಾಯಕರ ನೆರವಿನಿಂದ ಓಡಾಡುವ ಸ್ಥಿತಿಗೆ ತಲುಪಿರುವ ವಾಜಪೇಯಿ ಅವರು, ತಮ್ಮ ಆತ್ಮೀಯರನ್ನು ಸಹ ಗುರುತಿಸುವಲ್ಲಿ ವಿಫಲರಾಗುತ್ತಿದ್ದಾರೆ.

ಡೆಮೆನ್ಷಿಯಾ ಮತ್ತು ದೀರ್ಘಕಾಲದ ಮಧುಮೇಹದಿಂದ ಅವರು ಬಳಲುತ್ತಿದ್ದಾರೆ. ಇತ್ತೀಚಿನ ಕೆಲವು ವರ್ಷಗಳಿಂದ ಅವರು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಏಮ್ಸ್‌ನಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗುವುದರ ಹೊರತುಪಡಿಸಿ ಅವರು ಮನೆಯಿಂದ ಹೊರಗೆ ಬರುತ್ತಿಲ್ಲ.

English summary
Former Prime Minister Atal Bihari Vajpayee admitted to All India Institutes of Medical Sciences (AIIMS)due to health issues on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X