ವಾಜಪೇಯಿಗೆ ಮೂತ್ರನಾಳ ಸೋಂಕು, ಆರೋಗ್ಯ ಸ್ಥಿರ: ಏಮ್ಸ್ ಆಸ್ಪತ್ರೆ

ನವ ದೆಹಲಿ, ಜೂನ್ 11: ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆ ಸೇರಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದು, ಅವರು ನಾಳೆ ಡಿಸ್‌ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಕೇಂದ್ರ ಮಂತ್ರಿ ಹರ್ಷ ವರ್ಧನ್ ಹೇಳಿದ್ದಾರೆ.

93 ವರ್ಷದ ಮಾಜಿ ಪ್ರಧಾನಿ ವಾಜಪೇಯಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರಾದ ಕಾರಣ ಅವರನ್ನು ಇಂದು ಮಧ್ಯಾಹ್ನ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Former PM Vajpayees health condition stable

ವಾಜಪೇಯಿ ಅವರಿಗೆ ಮೂತ್ರದ ಸೋಂಕು ಆಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರ ತಂಡ ಹೇಳಿದೆ. ಡಾ.ರಣದೀಪ್ ಅವರು ವಾಜಪೇಯಿ ಅವರ ಚಿಕಿತ್ಸೆ ಮಾಡುತ್ತಿರುವ ವೈದ್ಯರ ತಂಡದ ನೇತೃತ್ವ ವಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿಯ ಪ್ರಮುಖ ಮುಖಂಡರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಟಲ್‌ ಅವರ ಆರೋಗ್ಯ ವಿಚಾರಿಸಿದರು. ಮೋದಿ ಅವರು ಸುಮಾರು 50 ನಿಮಿಷಗಳ ಕಾಲ ಆಸ್ಪತ್ರೆಯಲ್ಲೇ ಇದ್ದು ವಾಜಪೇಯಿ ಅವರ ಕುಟುಂಬ ಸದಸ್ಯರು, ವೈದ್ಯರೊಂದಿಗೆ ಚರ್ಚೆ ನಡೆಸಿದರು.

ಎಲ್‌.ಕೆ.ಅಡ್ವಾಣಿ, ರಾಜನಾಥ ಸಿಂಗ್, ಅಮಿತ್ ಶಾ ಹಲವು ಕೇಂದ್ರ ಮಂತ್ರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಸಹ ಆಸ್ಪತ್ರೆಗೆ ಆಗಮಿಸಿ ಅಟಲ್‌ಜೀ ಅವರ ಆರೋಗ್ಯ ವಿಚಾರಿಸಿದರು.

93 ವರ್ಷ ವಯಸ್ಸಿನ ಅಟಲ್‌ ಬಿಹಾರಿ ವಾಜಪೇಯಿ ಅವರು ಹಲವು ವರ್ಷದಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತಿದ್ದಾರೆ. ಅವರು ಸಕ್ರಿಯ ರಾಜಕಾರಣದಿಂದ ದೂರವಾಗಿಯೂ ಹಲವು ವರ್ಷಗಳೇ ಸಂಧಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+