ವೀಕ್ಷಕರ ಸಾಲಲ್ಲಿ ಕೂತು ಮೋದಿ ಮಾತಿಗೆ ತಲೆಯಾಡಿಸಿದ ಅಮರ್ ಸಿಂಗ್!
ಲಕ್ನೋ, ಜುಲೈ 30: ಒಂದಾನೊಂದು ಕಾಲದಲ್ಲಿ ಸಮಾಜವಾದಿ ಪಕ್ಷದ ಪ್ರಮುಖ ಮುಖಂಡರಲ್ಲೊಬ್ಬರಾಗಿದ್ದ ಅಮರ್ ಸಿಂಗ್ ಬಿಜೆಪಿ ಸೇರುತ್ತಾರಾ? ಈ ವದಂತಿ ಹಲವು ದಿನಗಳಿಂದ ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ನೀಡುವಂಥ ಘಟನೆಗಳೂ ನಡೆಯುತ್ತಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನರೇಂದ್ರ ಮೋದಿ ಅವರು ಉದ್ಯಮಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲಿ ಅಮರ್ ಸಿಂಗ್ ಅವರೂ ಹಾಜರಿದ್ದರು. "ಯಾರಿಗೆ ಯಾವುದೇ ಕೆಲಸವನ್ನು ಜನರೆದುರಲ್ಲಿ ಮಾಡುವುದಕ್ಕೆ ಧೈರ್ಯವಿಲ್ಲವೋ ಅಂಥವರು ಎಲ್ಲವನ್ನೂ ಪರದೆಯ ಹಿಂದೆ ಮಾಡುತ್ತಾರೆ. ಈ ಕುರಿತು ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ನಿಮಗೆ ಮಾಹಿತಿ ನೀಡುತ್ತಾರೆ. ಅವರು ಇಲ್ಲಿಯೇ ಕುಳಿತಿದ್ದಾರೆ" ಎಂದು ಪ್ರಧಾನಿ ಮೋದಿ ಹೇಳಿದರು. ಇದರಿಂದ ಸಭೆಯಲ್ಲಿದ್ದ ಎಲ್ಲರೂ ಒಮ್ಮೆ ನಕ್ಕರು. ಅಮರ್ ಸಿಂಗ್ ಅವರೂ ನಕ್ಕು ಪ್ರತಿಕ್ರಿಯಿಸಿದರು.
ಈ ಸಭೆ ನಡೆದ ಒಂದು ಗಂಟೆಯ ನಂತರ ಅಮರ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಬ್ಬರ ನಡುವೆ ನಡೆದ ಮಾತುಕತೆಯ ವಿವರ ಲಭ್ಯವಾಗಿಲ್ಲವಾದರೂ, 2019 ರ ಲೋಕಸಭಾ ಚುನಾವಣೆಗೂ ಮುನ್ನ ಈ ಭೇಟಿ ಮಹತ್ವದ್ದೆನ್ನಿಸಿದೆ. ಅಮರ್ ಸಿಂಗ್ ಉತ್ತರ ಪ್ರದೇಶದ ಪ್ರಭಾವೀ ನಾಯಕರಲ್ಲೊಬ್ಬರು. ಅವರು ಬಿಜೆಪಿ ಪಕ್ಷ ಸೇರಿದ್ದೇ ಆದಲ್ಲಿ ಎಸ್ಪಿ ಸೇರಿದಂತೆ ಇನ್ನಿತರ ವಿರೋಧಪಕ್ಷಗಳಿಗೆ ನಷ್ಟ ಗ್ಯಾರಂಟಿ! ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳಿರುವುದರಿಂದ ಈ ರಾಜ್ಯ ಬಹಳ ಮಹತ್ವದ್ದೆನ್ನಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications