ತೆಲಂಗಾಣ ಮಾಜಿ ಸಿಎಂ ಪುತ್ರ ಕೆ.ಟಿ ರಾಮರಾವ್‌ ಯಾವುದೇ ಕ್ಷಣದಲ್ಲಿ ಬಂಧನ!

ತೆಲಂಗಾಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ತೆಲಂಗಾಣದ ಭಾರತ್‌ ರಾಷ್ಟ್ರ ಸಮಿತಿ ನಾಯಕ ಹಾಗೂ ಮಾಜಿ ಸಚಿವ ಕೆ.ಟಿ ರಾಮರಾವ್‌ (ಕೆಟಿಆರ್), ಹರೀಶ್ ರಾವ್ ಹಾಗೂ ಆರ್‌.ಎಸ್ ಪ್ರವೀಣ್ ಕುಮಾರ್ ಸೇರಿದಂತೆ ಪಕ್ಷದ ಆರು ಪ್ರಮುಖ ನಾಯಕರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅಖಂಡ ಆಂಧ್ರಪ್ರದೇಶ ವಿಭನೆಯಾಗಿ ತೆಲಂಗಾಣ ರಾಜ್ಯ ರಚನೆಯಾದ ಮೇಲೆ ತೆಲಂಗಾಣದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಪಕ್ಷದ ಹಿಂದಿನ ಹೆಸರು) ಅಧಿಕಾರ ನಡೆಸಿತ್ತು. ಆದರೆ ಕಳೆದ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಇದರ ಬೆನ್ನಲ್ಲೇ ಭಾರತ್‌ ರಾಷ್ಟ್ರ ಸಮಿತಿಯ ನಾಯಕರ ಮೇಲೆ ಹಲವು ಗಂಭೀರ ಆರೋಪಗಳು ಕೇಳಿ ಬರುತ್ತಿವೆ.

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದಿದ್ದ ಫಾರ್ಮುಲಾ ಇ - ರೇಸ್‌ಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ, ಶಾಸಕ ಕೆ.ಟಿ. ರಾಮರಾವ್ ಅವರ ವಿರುದ್ಧ ತನಿಖೆ ಚುರುಕುಗೊಂಡಿದೆ. ಈಚೆಗೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್‌ ಜಾರಿ ಮಾಡಿತ್ತು. ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಚೇರಿಯಲ್ಲಿ ಈ ಸಂಬಂಧ ವಿಚಾರಣೆ ನಡೆದಿದೆ. ಫಾರ್ಮುಲಾ ಇ ರೇಸ್ ನಡೆಸುವುದಕ್ಕೆ ಅನಧಿಕೃತವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಇವರ ಮೇಲಿದ್ದು ಅಧಿಕಾರದಿಂದ ಕೆಳಗೆ ಇಳಿದ ಮೇಲೆ ಸಂಕಷ್ಟ ಎದುರಾಗಿದೆ.

Former Telangana CMs Son KT Rama Rao Could Be Arrested at Any Moment

ಸೋಮವಾರವಷ್ಟೇ ಪಕ್ಷದ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ಬಂಧಿಸಲಾಗಿತ್ತು. ಇದಾದ ಮೇಲೆ ಇಂದು ಕೆಟಿಆರ್ ಅವರ ನಿವಾಸದ ಹೊರಗೆ ಭಾರೀ ಪೊಲೀಸ್ ಬಂದೋಬಸ್ತ್‌ ಏರ್ಪಪಡಿಸಲಾಗಿದೆ.

ಆರೋಪ ನಿರಾಕರಿಸಿರುವ ಕೆಟಿಆರ್: ಇನ್ನು ಈ ಆರೋಪಗಳನ್ನು ಕೆಟಿಆರ್ ಅವರು ನಿರಾಕರಿಸಿದ್ದು, ಕಾಂಗ್ರೆಸ್‌ ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಿದೆ. ಇದು ಕಾಂಗ್ರೆಸ್‌ನ ಸಣ್ಣತನ ಹಾಗೂ ಕಾನೂನಿನ ಸ್ಪಷ್ಟ ದುರುಪಯೋಗ ಎಂದು ಹೇಳಿದ್ದಾರೆ. ಕೆಟಿಆರ್ ಅವರ ವಿರುದ್ಧ ಮಾಡಲಾಗಿರುವ ಆರೋಪಗಳಿಗೆ ಯಾವುದೇ ಸಾಕ್ಷಿಗಳು ಇಲ್ಲ. ಈ ರೀತಿ ಇದ್ದರೂ ಅಧಿಕಾರಿಗಳು ಸತತ ಏಳು ಗಂಟೆಗಳ ಕಾಲ ಕೇಳಿದ ಪ್ರಶ್ನೆಗಳನ್ನೇ ಪದೇ ಪದೇ ಕೇಳಿದ್ದಾರೆ ಎಂದು ಅವರು ದೂರಿದ್ದಾರೆ. ಇನ್ನು ಕೆಟಿಆರ್ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಮಗ. ಈ ಕಾರಣಕ್ಕೆ ತೆಲಂಗಾಣದಲ್ಲಿ ಇದು ರಾಜಕೀಯ ಹೈಡ್ರಾಮಾಗೆ ಕಾರಣವಾಗಿದೆ.

Former Telangana CMs Son KT Rama Rao Could Be Arrested at Any Moment

80 ಬಾರಿ ಒಂದೇ ಪ್ರಶ್ನೆ: ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅನವಶ್ಯಕವಾಗಿ ನನ್ನನ್ನು ಪ್ರಶ್ನೆ ಮಾಡುತ್ತಿದೆ. ಅವರ ಬಳಿ ನನ್ನ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಅಲ್ಲದೆ ಇದೊಂದು ಕಾನೂನಿನ ಸ್ಪಷ್ಟ ದುರುಪಯೋಗ ಅಂತಲೂ ಹೇಳಿದ್ದಾರೆ. ಅಲ್ಲದೆ ಅಂದಾಜು 80ಕ್ಕೂ ಹೆಚ್ಚು ಬಾರಿ ಒಂದೇ ಪ್ರಶ್ನೆಗಳನ್ನು ನನಗೆ ಕೇಳಲಾಗಿತ್ತು. ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾವೂ ಹೋರಾಟ ನಡೆಸುತ್ತಿರುವುದು ಹಾಗೂ ಅವರ ತಪ್ಪುಗಳನ್ನು ಜನರ ಮುಂದೆ ಇರಿಸುತ್ತಿರುವುದೇ ಇದಕ್ಕೆ ಕಾರಣ ಎಂದು ತೆಲಂಗಾಣದ ಭಾರತ್‌ ರಾಷ್ಟ್ರ ಸಮಿತಿ ಪಕ್ಷದ ನಾಯಕರು ಆರೋಪಿಸಿದ್ದಾರೆ. ಈ ನಡುವೆ ಯಾವುದೇ ಕ್ಷಣದಲ್ಲಾರೂ ಕೆಟಿಆರ್‌ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+