ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಕೇಂದ್ರ ಸಚಿವ, ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ನಿಧನ

|
Google Oneindia Kannada News

ನವದೆಹಲಿ, ಮೇ 6: ರಾಷ್ಟ್ರೀಯ ಲೋಕ ದಳ(ಆರ್‌ಎಲ್‌ಡಿ) ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರು ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅಜಿತ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.

ಅಜಿತ್ ಸಿಂಗ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಜಯಂತ್ ಸಿಂಗ್ ಅವರು ಖಚಿತಪಡಿಸಿದ್ದು, ಕೋವಿಡ್ 19 ವಿರುದ್ಧ ಹೋರಾಟ ಮುಂದುವರೆಯಲಿದೆ, ಎಲ್ಲರೂ ಮನೆಯಲ್ಲಿದ್ದು, ಸುರಕ್ಷಿತ ನಿಯಮಗಳನ್ನು ಪಾಲಿಸಿ ಎಂದಿದ್ದಾರೆ.

Former Union minister and RLD chief Ajit Singh passes away

ಹಲವಾರು ಗಣ್ಯರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಒಮರ್ ಅಬ್ದುಲ್ಲಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್, ಜೆಪಿ ನಡ್ಡಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಬಾಗ್ ಪೇಟ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಏಳು ಬಾರಿ ಆಯ್ಕೆಯಾಗಿದ್ದರು. ಕೇಂದ್ರ ನಾಗರಿಕ ವಿಮಾನಯಾನ, ಕೃಷಿ, ಅಹಾರ ಸಂಸ್ಕರಣೆ ಹಾಗೂ ಮುಂತಾದ ಖಾತೆಗಳನ್ನು ನಿಭಾಯಿಸಿದ್ದರು.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. 1939ರ ಫೆಬ್ರವರಿ 12ರಂದು ಜನಿಸಿದ ಅಜಿತ್ ಸಿಂಗ್ ಅವರು ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ ಪ್ರಭಾವಿ ಪಕ್ಷ ಎನಿಸಿಕೊಂಡಿರುವ ರಾಷ್ಟ್ರೀಯ ಲೋಕ ದಳ ಸ್ಥಾಪಕರು. ಏಪ್ರಿಲ್ 20ರಂದು ಕೋವಿಡ್ 19 ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ

English summary
Rashtriya Lok Dal (RLD) chief and former Union minister Chaudhary Ajit Singh passed away on May 6 at the age of 82 after battling COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X