ಮಣಿಪುರ ವೈರಲ್ ವಿಡಿಯೋ : ನಾಲ್ವರು ಬಂಧಿತ ಆರೋಪಿಗಳು 11 ದಿನ ಪೊಲೀಸ್ ಕಸ್ಟಡಿಗೆ

ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಮೇ 4 ರಂದು ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ನಂತರ ಮೆರವಣಿಗೆ ಮಾಡಿ ಹಲ್ಲೆ ನಡೆಸಿದ ಗುಂಪಿನಲ್ಲಿದ್ದ ನಾಲ್ವರು ಬಂಧಿತ ಆರೋಪಿಗಳನ್ನು ಶುಕ್ರವಾರ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಮಣಿಪುರ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಮಹಿಳೆಯ ಮೇಲಿನ ದೌರ್ಜನ್ಯದ ಅಮಾನವೀಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದರು. ಕನಿಷ್ಠ ಎಂಟು ಜನರನ್ನು ವಿಡಿಯೋದಲ್ಲಿ ಗುರುತಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

manipur-viral-video

ಭೀಕರ ಘಟನೆ ನಡೆದು 77 ದಿನಗಳ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ, ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಸಾಕ್ಷಿಗಳ ಕೊರತೆಯಿಂದ ಇದುವರೆಗೂ ಯಾವ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಮುಖ ಆರೋಪಿಯ ಮನೆಗೆ ಬೆಂಕಿ

ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಕಾಣಿಸಿಕೊಂಡ ಪ್ರಮುಖ ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಗುರುವಾರ ಸುಟ್ಟುಹಾಕಲಾಗಿದೆ. ಆಕ್ರೋಶಗೊಂಡ ಮಹಿಳೆಯರ ಗುಂಪು ಈ ಕೆಲಸ ಮಾಡಿದೆ.

ವರದಿಯ ಪ್ರಕಾರ, ಈ ಮನೆಯು ಪ್ರಮುಖ ಆರೋಪಿ ಹುಯಿರೆಮ್ ಹೆರೋಡಾಸ್ ಮೈತೈಗೆ ಸೇರಿದೆ. ಮನೆಗೆ ಬೆಂಕಿ ಹಚ್ಚಿರುವು ವಿಡಿಯೋ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಮಹಿಳೆಯರೇ ಹೆಚ್ಚಾಗಿ ಇರುವುದನ್ನು ನೋಡಬಹುದು.

ವೈರಲ್ ವಿಡಿಯೋ ಬಗ್ಗೆ ಸಿಂ ಬಿರೇನ್ ಸಿಂಗ್ ಹೇಳಿದ್ದೇನು?

ವಿಡಿಯೋ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಘಟನೆಯನ್ನು ಖಂಡಿಸಿದ್ದಾರೆ. ಮಣಿಪುರ ರಾಜ್ಯದ ಜನತೆ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

"ಮಣಿಪುರ ಜನತೆ ಮಹಿಳೆಯರನ್ನು ತಮ್ಮ ತಾಯಿ ಎಂದು ಪರಿಗಣಿಸುತ್ತಾರೆ. ವೈರಲ್ ಆಗಿರುವ ಮತ್ತು ರಾಜ್ಯದ ಪ್ರತಿಷ್ಠೆಗೆ ಕಳಂಕ ತಂದ ವೀಡಿಯೊ, ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಜನರು ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಶಿಕ್ಷಿಸಲು ಸರಕಾರವನ್ನು ಬೆಂಬಲಿಸಲು ಈ ಪ್ರತಿಭಟನೆ ನಡೆಸಲಾಗುತ್ತಿದೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+