Accident News: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, 15 ಮಂದಿಗೆ ಗಂಭೀರ ಗಾಯ
Accident News: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲಿದೆ. ಇದೀಗ ಪಿಕಪ್ ವ್ಯಾನ್ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 15 ಜನರು ಗಾಯಗೊಂಡಿರುವ ಘಟನೆ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗುಜರಾತ್‌ನ ಪಠಾಣ್ ಜಿಲ್ಲೆಯ ರಾಧನ್‌ಪುರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ ನಡೆದಿದೆ. ಮೋತಿ ಪಿಪ್ಲಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಅಕ್ಟೋಬರ್ 5) ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಸಂತ್ ನಾಯ್ ಮಾಹಿತಿ ನೀಡಿದ್ದಾರೆ ಅಂತಾ ವರದಿಯಾಗಿದೆ.

ಲಕ್ಷ್ಮಣ್ ದೇಸಾಯಿ, ಯಶ್ ಉಂಚೋಸನ್, ಕನು ರಾವಲ್ ಮತ್ತು ನಾಸಿಬ್ ಖಾನ್ ಅಪಘಾತದಲ್ಲಿ ಮೃತಪಟ್ಟವಾರಗುದ್ದಾರೆ ಅಂತಾ ರಾಧನ್‌ಪುರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ರಸ್ತೆ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಒಂದು ಬದಿಯಲ್ಲಿ ಸಂಚಾರ ನಿರ್ಬಂಧಿಸಲ್ಪಟ್ಟ ಸ್ಥಳದಲ್ಲಿ ಸುಮಾರು 15 ಪ್ರಯಾಣಿಕರಿದ್ದ ಪಿಕಪ್ ವ್ಯಾನ್ ಓವರ್‌ಟೇಕ್ ಮಾಡುವ ವೇಳೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವ್ಯಾನ್ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
ವ್ಯಾನ್‌ನಲ್ಲಿದ್ದ ಇಬ್ಬರು ಮತ್ತು ಬೈಕ್ ಸವಾರರಿಬ್ಬರು ಒಟ್ಟು ನಾಲ್ವರು ಈ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೂ 15 ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರ ಆಗಿದೆ. ಅವರೆಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಂತಹ ರಸ್ತೆ ಅಪಘಾತಗಳು ಇದೇ ಮೊದಲೇನಲ್ಲ, ಈ ಹಿಂದೆಯೂ ಸಂಭವಿಸಿವೆ. ಇದಕ್ಕೆ ಕಡಿವಾಣ ಹಾಕುವ ಕೆಲಸ ನಡೆಯುತ್ತಿದೆ ಆದರೂ, ಯಾರೋ ಮಾಡುವ ಯಡವಟ್ಟಿನಿಂದ ಇಂತಹ ಪ್ರಕರಣಗಳು ಹೆಚ್ಚಾಗುತ್ತಲಿವೆ.
ಇಬ್ಬರು ಸಾವು: ಇನ್ನೋವಾ ಕಾರು ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಇನ್ನೋವಾ ಕಾರು ಹಾಗೂ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಇನ್ನೋವಾ ಕಾರು ಹಾಗೂ ಟಂಟಂ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಎಂಬುವವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಎಂಬುವರು ಗಾಯಾಳುಗಳಾಗಿದ್ದು, ಇವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮತ್ತು ಗಾಯಾಳುಗಳು ನವನಗರದ 45ನೇ ಸೆಕ್ಟರ್ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆ ಸ್ಥಳಕ್ಕೆ ಆಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಊಟಕ್ಕೆಂದು ಹತ್ತಿರದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ಹೋಗಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಹೀಗೆ ಅಪಘಾತ ಪ್ರಕರಾಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿವೆ.












Click it and Unblock the Notifications