ಛತ್ತೀಸ್ಗಢದಲ್ಲಿ ಎನ್ಕೌಂಟರ್: ನಾಲ್ವರು ಉಗ್ರರ ಹತ್ಯೆ
ಸುಕ್ಮಾ, ಆಗಸ್ಟ್ 12: ಛತ್ತೀಸ್ಗಢದಲ್ಲಿ ಇಂದು ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹತ್ಯೆಗೈದಿದೆ.
ಮೂಲಗಳ ಪ್ರಕಾರ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅಲ್ಲಿಯೇ ಅಡಗಿ ಕುಳಿತಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ವೇಳೆ ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಹಾಗೆಯೇ ಹಲವು ನಕ್ಸಲರು ಪರಾರಿಯಾಗಿದ್ದಾರೆ.

ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯ ಹೊರವಲಯದ ಜಗರಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಘಟನೆಯಲ್ಲಿ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಗಳ ಸಿಬ್ಬಂದಿಗಳು ತೊಡಗಿದ್ದರು ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಬಸ್ತಾರ್ ) ಸುಂದರ್ ರಾಜ್ ಪಿ ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ನಾಲ್ಕು ಪುರುಷ ನಕ್ಸಲರ ಮೃತದೇಹಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ಮುಂದುವರೆದಿದೆ.
ಇಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕೂಡ ಎನ್ಕೌಂಟರ್ ನಡೆದಿದ್ದು, ಓರ್ವ ಯೋಧ ಹುತಾತ್ಮರಾಗಿದ್ದು, ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications