ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮೇಘಾಲಯ: ಬಿಜೆಪಿಗೆ ಸೇರ್ಪಡೆಗೊಂಡ ನಾಲ್ವರು ಶಾಸಕರು

|
Google Oneindia Kannada News

ನವದೆಹಲಿ, ಡಿ. 14: ಮುಂದಿನ ವರ್ಷ ಚುನಾವಣೆ ನಡೆಯಲಿರುವ ಮೇಘಾಲಯದಲ್ಲಿ ರಾಜಕೀಯ ಲೆಕ್ಕಾಚಾರಗಳು ಈಗಾಗಲೇ ಆರಂಭವಾಗಿವೆ. ತೃಣಮೂಲ ಕಾಂಗ್ರೆಸ್ ಶಾಸಕ ಎಚ್‌ಎಂ ಶಾಂಗ್‌ಪ್ಲಿಯಾಂಗ್ ಮತ್ತು ಇತರ ಮೂವರು ಹಾಲಿ ಶಾಸಕರು ಬುಧವಾರ ಮೇಘಾಲಯ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಇರುವ ಸಮಯದಲ್ಲಿಯೇ ಈ ಘಟನೆ ನಡೆದಿರುವುದು ಜನರಲ್ಲಿ ಆಶ್ಚರ್ಯ ತಂದಿದೆ.

ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರ ಸಭೆ; ರಹಸ್ಯ ಬಿಚ್ಚಿಟ್ಟ ಬಿಜೆಪಿ!ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರ ಸಭೆ; ರಹಸ್ಯ ಬಿಚ್ಚಿಟ್ಟ ಬಿಜೆಪಿ!

2023ರ ಮೇಘಾಲಯ ವಿಧಾನಸಭೆ ಚುನಾವಣೆಗೆ ಮುನ್ನ ಟಿಎಂಸಿಯ ಎಚ್‌ಎಂ ಶಾಂಗ್‌ಪ್ಲಿಯಾಂಗ್, ನ್ಯಾಷನಲ್ ಪೀಪಲ್ಸ್ ಪಾರ್ಟಿ ಶಾಸಕರಾದ ಫೆರ್ಲಿನ್ ಸಂಗ್ಮಾ, ಬೆನೆಡಿಕ್ ಮರಕ್ ಮತ್ತು ಸ್ವತಂತ್ರ ಶಾಸಕ ಸ್ಯಾಮ್ಯುಯೆಲ್ ಸಂಗ್ಮಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Four Sitting MLAs From Meghalaya Joins BJP

ಶಾಂಗ್‌ಪ್ಲಿಯಾಂಗ್, ಫೆರ್ಲಿನ್ ಸಾಂಗ್‌ಮನ್ ಮತ್ತು ಬೆನೆಡಿಕ್ ಮರಾಕ್ ಅವರು ಕಳೆದ ತಿಂಗಳು ಸ್ಪೀಕರ್ ಮೆಟ್ಬಾ ಲಿಂಗ್ಡೋಹ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಪ್ರಸ್ತುತ ಈಶಾನ್ಯ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಪಿಪಿ ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನ ಮಿತ್ರಪಕ್ಷವಾದ ಬಿಜೆಪಿಗೆ ನಾಲ್ವರು ಸೇರ್ಪಡೆಯಾಗಿದ್ದಾರೆ.

ಈ ಹಿಂದೆಯೇ ಈ ನಾಲ್ವರು ಹಾಲಿ ಶಾಸಕರು ತಮ್ಮ ತಮ್ಮ ಪಕ್ಷಗಳ ಸದಸ್ಯತ್ವವನ್ನು ತೊರೆದು ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದವು.

ಇತ್ತ, ಮಂಗಳವಾರ ಶಿಲ್ಲಾಂಗ್‌ನಲ್ಲಿ ಟಿಎಂಸಿ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ನೇತೃತ್ವದ ಕೇಂದ್ರವು ಮೇಘಾಲಯ ಮತ್ತು ಇತರ ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದರು.

"ಕೇಂದ್ರ ಸರ್ಕಾರವು ಮೇಘಾಲಯ ಮತ್ತು ಇತರ ಈಶಾನ್ಯ ರಾಜ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ನಾವು ಬದಲಾವಣೆಯನ್ನು ತರುತ್ತೇವೆ. ಈ ಗುಡ್ಡಗಾಡು ರಾಜ್ಯದಲ್ಲಿ ಅಭಿವೃದ್ಧಿ ತರುತ್ತೇವೆ" ಎಂದು ಭರವಸೆ ನೀಡಿದ್ದರು.

English summary
Four sitting MLAs from Meghalaya including Trinamool Congress MLA joins BJP at the party headquarters in New Delhi. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X