4 ರಾಜ್ಯಗಳ ಉಪ ಚುನಾವಣೆ: ಎಲ್ಲ 5 ಕ್ಷೇತ್ರಗಳಲ್ಲಿ ಬಿಜೆಪಿ ಹಿನ್ನಡೆ
ಕೋಲ್ಕತಾ, ಏಪ್ರಿಲ್ 16: ಪಶ್ಚಿಮ ಬಂಗಾಳದ ಅಸನ್ಸೋಲ್‌ನ ಒಂದು ಲೋಕಸಭಾ ಸ್ಥಾನ ಮತ್ತು ಪಶ್ಚಿಮ ಬಂಗಾಳದ ಬ್ಯಾಲಿಗುಂಗೆ, ಬಿಹಾರದ ಬೋಚಹಾನ್, ಮಹಾರಾಷ್ಟ್ರದ ಕೊಲ್ಹಾಪುರ ಉತ್ತರ ಮತ್ತು ಛತ್ತೀಸ್‌ಗಢದ ಖೈರಾಘರ್ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗಳ ಮತ ಎಣಿಕೆ ಭರದಿಂದ ಸಾಗುತ್ತಿದೆ.
ನಾಲ್ಕು ರಾಜ್ಯಗಳ ಐದು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಯ 6 ಸುತ್ತುಗಳ ನಂತರ, ಟಿಎಂಸಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರು ತಮ್ಮ ಹತ್ತಿರದ ಬಿಜೆಪಿ ಸ್ಪರ್ಧಿ ಅಗ್ನಿಮಿತ್ರ ಪೌಲ್ ಅವರಿಗಿಂತ 62,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಪಶ್ಚಿಮ ಬಂಗಾಳದ ಬ್ಯಾಲಿಗುಂಗೆ ವಿಧಾನಸಭೆ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಟಿಎಂಸಿ ಪಕ್ಷದ ಅಭ್ಯರ್ಥಿ ಬಾಬುಲ್ ಸುಪ್ರಿಯೊ ಎಂಟನೇ ಸುತ್ತಿನ ಮತ ಎಣಿಕೆಯ ನಂತರ 8,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಹಾರದ ಬೋಚಹಾನ್‌ನಲ್ಲಿ ಆರ್‌ಜೆಡಿ ಅಭ್ಯರ್ಥಿ ಅಮರ್ ಪಾಸ್ವಾನ್ ಮುನ್ನಡೆ ಸಾಧಿಸಿದ್ದು, ಬಿಜೆಪಿಯ ಬೇಬಿ ಕುಮಾರಿ ನಂತರದ ಸ್ಥಾನದಲ್ಲಿದ್ದು ಪೈಪೋಟಿ ನೀಡುತ್ತಿದ್ದಾರೆ.
ಬಿಹಾರದ ಮುಜಾಫರ್‌ಪುರದ ಬೋಚಹಾನ್ ವಿಧಾನಸಭಾ ಸ್ಥಾನಕ್ಕೆ ಉಪಚುನಾವಣೆಯು ಬಾಲಿವುಡ್ ಕೇಶ ವಿನ್ಯಾಸಕ-ರಾಜಕಾರಣಿ ಮುಖೇಶ್ ಸಹಾನಿ ಅವರ ವಿಕಾಸಶೀಲ ಇನ್ಸಾನ್ ಪಾರ್ಟಿ (ವಿಐಪಿ) ಟಿಕೆಟ್‌ನಲ್ಲಿ ಗೆದ್ದಿದ್ದ ಶಾಸಕ ಮುಸಾಫಿರ್ ಪಾಸ್ವಾನ್ ಅವರ ನಿಧನದಿಂದ ಸ್ಥಾನ ಖಾಲಿಯಾಗಿತ್ತು.
ಛತ್ತೀಸ್‌ಗಢದ ಖೈರಗಢ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣಾ ಆಯೋಗದ ಅಧಿಕೃತ ಆರಂಭಿಕ ಟ್ರೆಂಡ್‌ಗಳ ಪ್ರಕಾರ, ಉಪಚುನಾವಣೆಯ ಎಣಿಕೆ ನಡೆಯುತ್ತಿದ್ದು, ಛತ್ತೀಸ್‌ಗಢದ ಖೈರಗಢ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications