ಶಿಕ್ಷಕಿಗೆ 'I Love You' ಎಂದ ಕಿಡಿಗೇಡಿ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು

ಲಕ್ನೋ, ನವೆಂಬರ್‌ 28: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಮಹಿಳಾ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಶಿಕ್ಷಕಿ ಮೇಲೆ ಅಶ್ಲೀಲ ಕಾಮೆಂಟ್‌ಗಳನ್ನು ರವಾನಿಸಿದ ಎರಡು ವಿಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಕಿಥೌರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಧನಾ ಇನಾಯತ್‌ಪುರ ಗ್ರಾಮದ ಶಾಲೆಯಲ್ಲಿ ಬಂಧಿತ ವಿದ್ಯಾರ್ಥಿಗಳು ಓದುತ್ತಿದ್ದಾರೆ.

Four students held for harassing teacher in UP school

27 ವರ್ಷದ ಶಿಕ್ಷಕಿ ಭಾನುವಾರ ಲಿಖಿತ ದೂರಿನ್ನು ಸಲ್ಲಿಸಿದ್ದರು. 12 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ದೀರ್ಘಕಾಲದವರೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

'ಶಿಕ್ಷಕಿ ವಿರುದ್ಧ ವಿದ್ಯಾರ್ಥಿಗಳು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆ ಅವರನ್ನು ಹಲವು ಬಾರಿ ಬೆದರಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ' ಎಂದು ಕಿಥೌರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅರವಿಂದ್ ಮೋಹನ್ ಶರ್ಮಾ ಹೇಳಿದ್ದಾರೆ.

ಜೂನ್ 24 ರಂದು ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ನನಗೆ 'ಐ ಲವ್ ಯೂ' ಎಂದು ಹೇಳಿದರು. ಅದರ ವಿಡಿಯೊವನ್ನು ರೆಕಾರ್ಡ್ ಮಾಡಿದರು. ಆಗ ನನ್ನ ಸಂಯಮ ಮಿತಿ ಮೀರಿತ್ತು ಎಂದು ಶಿಕ್ಷಕಿ ಆರೋಪಿಸಿದ್ದಾರೆ.

Four students held for harassing teacher in UP school

ವಿದ್ಯಾರ್ಥಿಗಳು ವಿಡಿಯೊ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರು ಎಂದು ಶಿಕ್ಷಕಿ ತಿಳಿಸಿದ್ದಾರೆ.

'ಇದಲ್ಲದೆ, ತರಗತಿಯೊಳಗೆ ಅವರು ನನ್ನ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿದ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡದ್ದಾರೆ' ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸುಮಾರು 16 ವರ್ಷ ವಯಸ್ಸಿನ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+