ಮಧ್ಯ ಪ್ರದೇಶ: 4 ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ಸತ್ನಾ, ಜುಲೈ 03: ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಅ,ಮಾನವೀಯ ಘಟನೆ ನಡೆದಿದ್ದು. ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದಾಳೆ.

ಭಾನುವಾರದಂದು ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು ಆಕೆಯ ಸ್ಥಿತಿ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ವಿಮಾನದ ಮೂಲಕ ತುರ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸ್ಥಳೀಯ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ 28 ವರ್ಷದ ಮಹೇಂದ್ರ ಸಿಂಗ್ ಗೋಂಡ್‌ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದ್ದು ಆತನನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

four-year-old girl who was raped in Satna district

ಆರೋಪಿಯು ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ಹೇಳಿದ್ದಾರೆ. ಆರೋಪಿ ಮಹೇಂದ್ರ ಸಿಂಗ್‌ಗೆ ಬಾಲಕಿಯ ತಂದೆ ಪರಿಚಯದವಾರಿದ್ದರು. ಘಟನೆ ನಡೆದ ರಾತ್ರಿ ಕೂಡ ಆತ ಬಾಲಕಿಯ ತಂದೆಯೊಡನೆ ಮಾತನಾಡಿದ್ದ ಎನ್ನಲಾಗಿದೆ.

ಮನೆಯ ಆವರಣದಲ್ಲಿ ಮಲಗಿದ್ದ ಬಾಲಕಿಯನ್ನು ಅಪಹರಿಸಿದ ಮಹೇಂದ್ರ ಸಿಂಗ್ ಗ್ರಾಮದ ಹೊರ ಭಾಗದ ಕಾಡೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ, ಅಲ್ಲೆ ಮರದ ಕೆಳಗೆ ಬಿಟ್ಟುಬಂದಿದ್ದ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಬೆಳಿಗ್ಗೆ ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದರು. ಗ್ರಾಮಸ್ಥರೇ ಮಹೇಂದ್ರ ಸಿಂಗ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+