ವಿದ್ಯಾರ್ಥಿಗಳ ರಕ್ಷಣೆಗೆ ಮಾರ್ಗದರ್ಶಿ: ಸುಪ್ರೀಂ ಕೋರ್ಟ್ ಸೂಚನೆ

Posted By:
Subscribe to Oneindia Kannada

ನವದೆಹಲಿ, ಏಪ್ರಿಲ್ 17: ವಿದ್ಯಾರ್ಥಿಗಳ ರಕ್ಷಣೆ ಮತ್ತು ಭದ್ರತೆಗಾಗಿ ಆರು ತಿಂಗಳ ಒಳಗೆ ಪರಿಣಾಮಕಾರಿ ನೀತಿ ಹಾಗೂ ಮಾರ್ಗದರ್ಶಿಯನ್ನು ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

ಗುರುಗ್ರಾಮದ ರಿಯಾನ್ ಇಂಟರ್‌ನ್ಯಾಷನಲ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪ್ರದ್ಯಮನ್, ಕಳೆದ ವರ್ಷ ಶಾಲೆಯ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದ. ಈ ಸಂಬಂಧ ಆ ವಿದ್ಯಾರ್ಥಿಯ ತಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಕತುವಾ ಪ್ರಕರಣ ಜಮ್ಮು-ಕಾಶ್ಮೀರದಿಂದ ವರ್ಗಾಯಿಸಿ: ಸುಪ್ರೀಂಗೆ ಮನವಿ

ಕತ್ತು ಸೀಳಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಶಾಲೆಯ ಬಾತ್‌ರೂಂನಲ್ಲಿ ದೊರೆತಿತ್ತು. ಇದು ದೇಶದಾದ್ಯಂತ ವ್ಯಾಪಕ ಚರ್ಚೆಗೆ ಒಳಗಾಗಿತ್ತು. ಅದರ ಬೆನ್ನಲ್ಲೇ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಪ್ರಶ್ನೆಗಳು ಹುಟ್ಟಿಕೊಂಡಿದ್ದವು.

Frame guidelines for safety of students: SC asks HRD Ministry

ಮಕ್ಕಳ ಸುರಕ್ಷತೆ ಸಂಬಂಧ ಸೂಕ್ತ ನಿಯಮಾವಳಿಗಳನ್ನು ರಚಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.

ಪ್ರದ್ಯುಮನ್‌ನ ತಂದೆ ಸಲ್ಲಿಸಿರುವ ಪಿಐಎಲ್‌ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್, ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Supreme Court on Tuesday asked the Ministry of Human Resource Development to frame policy and guidelines for safety and security of students within six months.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ