ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಉಚಿತ!

|
Google Oneindia Kannada News

ನವದೆಹಲಿ, ಜುಲೈ 13: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಜುಲೈ 15ರಿಂದ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದಾಗಿ ಘೋಷಿಸಿದೆ.

ಕೋವಿಡ್-19 ಬೂಸ್ಟರ್ ಡೋಸ್ ವಿತರಣೆಗೆ ಉತ್ತೇಜನ ನೀಡುವ ಉದ್ದೇಶದ ಹಿನ್ನೆಲೆ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಉಚಿತ ಬೂಸ್ಟರ್ ಡೋಸ್ ಲಸಿಕೆ ವಿತರಣೆಯ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ.

Infographics: ಜುಲೈ 12ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ Infographics: ಜುಲೈ 12ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ಭಾರತವು ಸ್ವಾತಂತ್ರ್ಯೋತ್ಸವದ 75ನೇ ವರ್ಷದಲ್ಲಿ ಇರುವ ಹಿನ್ನೆಲೆ ಈ ಸುಸಂದರ್ಭವನ್ನು ಸ್ಮರಿಸಿಕೊಳ್ಳುವ ಉದ್ದೇಶದಿಂದ ಜುಲೈ 15 ರಿಂದ ಮುಂದಿನ 75 ದಿನಗಳವರೆಗೂ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋವಿಡ್-19 ಬೂಸ್ಟರ್ ಡೋಸ್ ಅನ್ನು ನೀಡಲಾಗುವುದು ಎಂದು ತಿಳಿಸಿದರು.

ಕೊರೊನಾ ವೈರಸ್ ಮುನ್ನೆಚ್ಚರಿಕೆ ಲಸಿಕೆ ಫುಲ್ ಫ್ರೀ

ಕೊರೊನಾ ವೈರಸ್ ಮುನ್ನೆಚ್ಚರಿಕೆ ಲಸಿಕೆ ಫುಲ್ ಫ್ರೀ

ದೇಶದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಈ ಹಿನ್ನೆಲೆ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಬೂಸ್ಟರ್ ಡೋಸ್ ಅನ್ನು ಉಚಿತವಾಗಿ ವಿತರಿಸುವುದಕ್ಕೆ ನಿರ್ಧರಿಸಲಾಗಿದೆ. ಜುಲೈ 15 ರಿಂದ ಮುಂದಿನ 75 ದಿನಗಳವರೆಗೂ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ವೈರಸ್ ಲಸಿಕೆಯನ್ನು ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಭಾರತದಲ್ಲಿ ಬೂಸ್ಟರ್ ಡೋಸ್ ತೆಗೆದುಕೊಂಡವರ ಸಂಖ್ಯೆ

ಭಾರತದಲ್ಲಿ ಬೂಸ್ಟರ್ ಡೋಸ್ ತೆಗೆದುಕೊಂಡವರ ಸಂಖ್ಯೆ

ದೇಶದಲ್ಲಿ 18 ರಿಂದ 59 ವಯೋಮಾನದ 77 ಕೋಟಿ ಜನಸಂಖ್ಯೆಯಲ್ಲಿ ಶೇ.1ಕ್ಕಿಂತಲೂ ಕಡಿಮೆ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಾಗ್ಯೂ, 60 ವರ್ಷ ಮೇಲ್ಪಟ್ಟ ಅಂದಾಜು 16 ಕೋಟಿ ಜನರಲ್ಲಿ ಶೇ.26ರಷ್ಟು ಮಂದಿ ಬೂಸ್ಟರ್ ಡೋಸ್ ತೆಗೆದುಕೊಂಡಿದ್ದಾರೆ. ಅದೇ ರೀತಿ ಶೇ.16ರಷ್ಟು ಆರೋಗ್ಯ ಕಾರ್ಯಕರ್ತರು ಮತ್ತು ಮೊದಲ ಶ್ರೇಣಿ ಕಾರ್ಯಕರ್ತರು ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಅನುಮತಿ ನೀಡುದ್ದು ಯಾವಾಗ?

ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಅನುಮತಿ ನೀಡುದ್ದು ಯಾವಾಗ?

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಘೋಷಿಸಿತ್ತು. ಮೊದಲ ಎರಡು ಅಲೆಗಳ ನಂತರ ಆರಂಭಿಸಲಾದ ಲಸಿಕೆ ವಿತರಣೆ ಅಭಿಯಾನದಿಂದ ಸಾವಿನ ಪ್ರಕರಣಗಳು ಮತ್ತು ತೀವ್ರ ಅಸ್ವಸ್ಥತೆಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಎರಡು ಡೋಸ್ ಲಸಿಕೆ ಪಡೆದುಕೊಂಡವರು ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೂ ಅನುಮತಿ ನೀಡಲಾಗಿದೆ. ಈ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಾವು ಎರಡನೇ ಡೋಸ್ ಪಡೆದುಕೊಂಡು 9 ತಿಂಗಳು ಕಳೆದಿದ್ದರೆ ಮೂರನೇ ಡೋಸ್ ಲಸಿಕೆಯನ್ನೂ ಪಡೆದುಕೊಳ್ಳಬಹುದು.

ಎಷ್ಟು ಹಂತಗಳಲ್ಲಿ ಕೊರೊನಾ ವೈರಸ್ ಲಸಿಕೆ ವಿತರಣೆ

ಎಷ್ಟು ಹಂತಗಳಲ್ಲಿ ಕೊರೊನಾ ವೈರಸ್ ಲಸಿಕೆ ವಿತರಣೆ

ಕಳೆದ 2021ರ ಜನವರಿ 16ರಂದು ಮೊದಲ ಬಾರಿಗೆ ಕೋವಿಡ್-19 ಲಸಿಕೆಯ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಫೆಬ್ರವರಿ 2ರಂದು ಎರಡನೇ ಹಂತದಲ್ಲಿ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಿಸಲಾಯಿತು. ಮಾರ್ಚ್ 1ರಿಂದ ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥತೆಯನ್ನು ಹೊಂದಿರುವವರಿಗೆ ಕೋವಿಡ್-19 ಲಸಿಕೆ ವಿತರಿಸಲು ಶುರು ಮಾಡಲಾಯಿತು. ತದನಂತರ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಿಸಲು ಅನುಮತಿ ನೀಡಲಾಗಿತ್ತು. ಮೇ 1ರ ನಂತರದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಿಸುವುದಕ್ಕೆ ಅನುಮತಿಸಲಾಗಿತ್ತು.

ಕಳೆದ 2022ರ ಜನವರಿ 3ರಂದು 15 ರಿಂದ 18 ವಯೋಮಾನದವರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೆ ಕೇಂದ್ರ ಸರ್ಕಾರವು ಅನುಮೋದನೆಯನ್ನು ನೀಡಿತು. ಇದರ ಬೆನ್ನಲ್ಲೇ ಮಾರ್ಚ್ 16ರಂದು 12 ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ವಿತರಿಸುವುದಕ್ಕೆ ಅನುಮತಿ ನೀಡಲಾಯಿತು. ಹೀಗೆ ಹಂತ-ಹಂತವಾಗಿ ಲಸಿಕೆ ವಿತರಣೆಗೆ ದೇಶದಲ್ಲಿ ಅನುಮತಿ ನೀಡಲಾಗಿದೆ.

Recommended Video

Rohit Sharma ಹೊಡೆದ ಬಿಗ್ ಸಿಕ್ಸರ್ ಗೆ ಪುಟ್ಟ ಹುಡುಗಿಗೆ ಗಾಯ! ಇಲ್ನೋಡಿ ವಿಡಿಯೋ | *Cricket | OneIndia Kannada

English summary
On the occasion of India's 75 years of independence, from 15th July 2022 till the next 75 days, citizens above 18 years of age will be given booster doses free of cost says Union Minister Anurag Thakur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X