ಉಚಿತ ಬಸ್ ಪ್ರಯಾಣ: ಇದು ಕೇಜ್ರಿವಾಲ್ ಐಡಿಯಾ ಎಂದ ರಾಘವ್ ಚಡ್ಡಾ
ನವದೆಹಲಿ, ಜೂನ್ 12: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿ ಮಾಡಿದ ನಂತರ ತನ್ನ ಮತ್ತೊಂದು ಭರವಸೆಯನ್ನು ಪೂರೈಸಿದೆ ಎಂಬ ರಾಹುಲ್ ಗಾಂಧಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ಭಾರತದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ದೇಶದ ಸಣ್ಣ ಪಕ್ಷದ ಐಡಿಯಾಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ರಾಘವ್ ಚಡ್ಡಾ ಅವರು ಟ್ವಿಟ್ಟರ್‌ನಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಯೋಜನೆಗಳನ್ನು ಈ ಮೊದಲು ಆಮ್ ಆದ್ಮಿ ಪಕ್ಷವು ಕೇಜ್ರಿವಾಲ್ ಕಿ ಗ್ಯಾರಂಟಿ ಎಂದು ಪರಿಚಯಿಸಿತ್ತು. ಇದು ಕೇಜ್ರಿವಾಲ್ ಎಫೆಕ್ಟ್. ಭಾರತದ ಅತ್ಯಂತ ಹಳೆಯ ರಾಜಕೀಯ ಪಕ್ಷವು ಭಾರತದ ಕಿರಿಯರಿಂದ ಟಿಪ್ಪಣಿಗಳನ್ನು ತೆಗೆದುಕೊಳ್ಳುತ್ತಿದೆ. ಕೇಜ್ರಿವಾಲ್ ಕಿ ಗ್ಯಾರಂಟಿ ಅನ್ನು ಈ ಮೊದಲು ಎಎಪಿ ಪರಿಚಯಿಸಿತ್ತು. ಈಗ ಈ ಯೋಜನೆಯನ್ನು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಇಂದು ಮುಂಜಾನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕ್ರಮವು ಮಹಿಳೆಯರನ್ನು ಸಬಲೀಕರಣಗೊಳಿಸುತ್ತದೆ ಮತ್ತು ಅವರ ಉಳಿತಾಯವನ್ನು ಹೆಚ್ಚಿಸುತ್ತದೆ. ಕರ್ನಾಟಕದ ಪ್ರತಿ ಮಹಿಳೆಗೆ ಇಂದಿನಿಂದ ಉಚಿತ ಬಸ್ ಪ್ರಯಾಣ. ಕಾಂಗ್ರೆಸ್‌ನ ಮತ್ತೊಂದು ಭರವಸೆ ಈಡೇರಿದೆ. ಮಹಿಳೆಯರ ಸಬಲೀಕರಣ ಮತ್ತು ಆರ್ಥಿಕ ಉಳಿತಾಯ ನಮ್ಮ ಜವಾಬ್ದಾರಿ, ಅವರ ಹಕ್ಕು, ಕಾಂಗ್ರೆಸ್ ಸರ್ಕಾರ ಈಡೇರಿಸಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಈಡೇರಿಸುವುದಾಗಿ ಭರವಸೆ ನೀಡಿದ್ದ ಐದು ಪ್ರಮುಖ ಗ್ಯಾರಂಟಿಗಳು ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ (ಗೃಹ ಜ್ಯೋತಿ), ಪ್ರತಿ ಕುಟುಂಬದ ಯಜಮಾನಿಗೆ ₹ 2,000 ಮಾಸಿಕ ನೆರವು (ಗೃಹ ಲಕ್ಷ್ಮಿ), ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಆಹಾರ ಧಾನ್ಯ(ಅನ್ನ ಭಾಗ್ಯ), ಎರಡು ವರ್ಷಗಳವರೆಗೆ ನಿರುದ್ಯೋಗಿ ಪದವೀಧರ ಯುವಕರಿಗೆ ಪ್ರತಿ ತಿಂಗಳು ₹ 3,000 ಮತ್ತು ನಿರುದ್ಯೋಗಿ ಡಿಪ್ಲೊಮಾ ಹೊಂದಿರುವವರಿಗೆ ₹ 1,500 (ಇಬ್ಬರೂ 18-25 ವರ್ಷ ವಯಸ್ಸಿನವರು ಯುವ ನಿಧಿ) ಮತ್ತು ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ (ಉಚಿತ ಪ್ರಯಾಣ ಶಕ್ತಿ) ಆಗಿದೆ.












Click it and Unblock the Notifications