Free LPG Cylinder: ಉಚಿತ ಎಲ್‌ಪಿಜಿ ಸಿಲಿಂಡರ್ ಬಗ್ಗೆ ಬಿಗ್ ಅಪ್‌ಡೇಟ್
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ದೇಶದ ಎಲ್ಲ ಮಹಿಳೆಯರಿಗೆ ಎಲ್‌ಪಿಜಿ ಸಿಲಿಂಡರ್ ಸಂಪರ್ಕ ನೀಡುವ ಮೂಲಕ ಕ್ರಾಂತಿ ಮಾಡುತ್ತಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಸಿಲಿಂಡರ್‌ಗಳನ್ನು ನೀಡಲಾಗುತ್ತಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲವನ್ನು ಪೂರೈಕೆ ಮಾಡುವ ಗುರಿ ಹೊಂದಿದೆ. ಇದು ಯಾವ ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ? ಈ ಸೇವೆ ಪಡೆದುಕೊಳ್ಳುವುದು ಹೇಗೆ? ಎನ್ನುವ ವಿವರ ಇಲ್ಲಿದೆ.
ಈ ಹಿಂದೆ ಅಡುಗೆಗಾಗಿ ಮನೆಗಳಲ್ಲಿ ಒಲೆ ಬಳಕೆ ಮಾಡಲಾಗುತ್ತಿತ್ತು. ಈ ಸಾಂಪ್ರದಾಯಿಕ ಅಡುಗೆ ವಿಧಾನದಿಂದ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮವೂ ಬೀರುತ್ತಿತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರವು ಪ್ರತಿ ಕುಟುಂಬಕ್ಕೆ ಎಲ್‌ಪಿಜಿ ಸಿಲಿಂಡರ್ ಸೇವೆ ಒದಗಿಸುವ ಗುರಿ ಹಾಕಿಕೊಂಡಿದೆ. ಅಲ್ಲದೆ ಸಬ್ಸಿಡಿ ಮೂಲಕ ಎಲ್‌ಪಿಜಿ ಸಿಲಿಂಡರ್ ಅನ್ನು ಮನೆ ಬಾಗಿಲಿಗೆ ಪೂರೈಕೆಯೂ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲೇ ಶುರು ಮಾಡಲಾಯಿತು.

ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯವಾಗುವಂತೆ ಮಾಡುವುದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪ್ರಮುಖ ಉದ್ದೇಶವಾಗಿದೆ.ಮೋದಿ ಸರ್ಕಾರದ ಈ ಮಹತ್ವದ ಯೋಜನೆಯಲ್ಲಿ ಇದುವರೆಗೂ ದೇಶಾದ್ಯಂತ ಒಂದು ಕೋಟಿಗೂ ಹೆಚ್ಚಿನ ಮಹಿಳೆಯರು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ 14.2 ಕೆಜಿ ದೇಶೀಯ ಅಡುಗೆ ಅನಿಲ ಸಿಲಿಂಡರ್ (ವರ್ಷಕ್ಕೆ ಒಂಬತ್ತು) ಅನ್ನು 300 ರೂ.ಗಳಲ್ಲಿ ನೀಡಲಾಗುತ್ತದೆ.
ಮಹಿಳೆಯರು ಮತ್ತು ಮಕ್ಕಳಿಗೆ ಶುದ್ಧ ಅಡುಗೆ ಇಂಧನವಾದ ಎಲ್‌ಪಿಜಿ ಒದಗಿಸುವ ಮೂಲಕ ಅವರ ಆರೋಗ್ಯವನ್ನು ಕಾಪಾಡುವುದು ಈ ಯೋಜನೆಯ ಗುರಿ. ಇದರಿಂದಾಗಿ ಅವರು ಹೊಗೆಯಾಡುವ ಅಡುಗೆಮನೆಗಳಲ್ಲಿ ಮಹಿಳೆಯರು ತಮ್ಮ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಬೇಕಾಗಿಲ್ಲ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ 2016ರ ಮೇ 1ರಂದು ಉತ್ತರ ಪ್ರದೇಶದಲ್ಲಿ ಪ್ರಾರಂಭಿಸಿದರು. ಈ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ 5 ಕೋಟಿ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸುವ ಗುರಿ ಹೊಂದಿತ್ತು.

ಭಾರತ ಸರ್ಕಾರದ ಒಂದು ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಅತ್ಯಂತ ಕಡಿಮೆ ಬೆಲೆಗೆ ಅಡುಗೆ ಅನಿಲವನ್ನು ಪೂರೈಸುವುದು ಈ ಯೋಜನೆಯ ಮುಖ್ಯ ಉದ್ದೇಶ. 14.5 ಕೆ.ಜಿ ತೂಕದ 12 ಇಂಧನ ಸಿಲಿಂಡರ್‌ಗಳಿಗೆ ವರ್ಷಕ್ಕೆ 200 ರೂಪಾಯಿ ಸಬ್ಸಿಡಿ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿತ್ತು. 2023-24ರ ಹಣಕಾಸು ವರ್ಷಕ್ಕೆ 7,680 ರೂಪಾಯಿ ಕೋಟಿ ಭರಿಸಲಾಗಿತ್ತು. ಈ ಯೋಜನೆಯ ಗ್ರಾಹಕರ ಸರಾಸರಿ ಬಳಕೆಯು 2021-22ರಲ್ಲಿ ಶೇ 20ರಷ್ಟು ಹೆಚ್ಚಾಗಿತ್ತು.












Click it and Unblock the Notifications