ಎಲ್ಲ ಉಚಿತ ಕೊಡುತ್ತಿದ್ದರೆ ಶ್ರೀಲಂಕಾದ ಗತಿ ಭಾರತಕ್ಕೆ; ಪ್ರಧಾನಿ ಸಭೆಯಲ್ಲಿ ಅಧಿಕಾರಿಗಳ ಕಳವಳ

ನವದೆಹಲಿ, ಏಪ್ರಿಲ್ 5: ಹಲವಾರು ರಾಜ್ಯಗಳು ಹೀಗೇ ಉಚಿತ ಜನಪರ ಯೋಜನೆಗಳನ್ನು ಜಾರಿ ಮಾಡುತ್ತಿದ್ದರೆ, ಆ ರಾಜ್ಯಗಳು ಕೂಡಾ ಶ್ರೀಲಂಕಾ ಮಾದರಿಯಲ್ಲಿ ಆರ್ಥಿಕ ಅಧಃಪತನಕ್ಕೆ ಇಳಿಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಭೆಯಲ್ಲಿ ಕೆಲ ಹಿರಿಯ ಅಧಿಕಾರಿಗಳ ಕಳವಳ ವ್ಯಕ್ತಪಡಿಸಿದ್ದಾರೆ.

ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಕಚೇರಿಯಲ್ಲಿ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಸುದೀರ್ಘ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದರು.

ಈ ವೇಳೆ ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ಸರ್ಕಾರದ ನೀತಿಗಳಲ್ಲಿನ ಲೋಪದೋಷಗಳನ್ನು ಸೂಚಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಕೆಲ ಅಧಿಕಾರಿಗಳು ಮಾತನಾಡಿ, ಇತ್ತೀಚೆಗೆ ನಡೆದ ಚುನಾವಣೆಗೆ ಒಳಪಟ್ಟರಾಜ್ಯಗಳೂ ಸೇರಿ ಕೆಲವು ರಾಜ್ಯಗಳ ಉಚಿತ ಯೋಜನೆಗಳು ಆರ್ಥಿಕ ಸುಸ್ಥಿರತೆಯನ್ನು ಕಾಯ್ದುಕೊಳ್ಳುವಂಥವಲ್ಲ. ಇವು ಭಾರತವನ್ನು ಶ್ರೀಲಂಕಾ ಹಾದಿಗೆ ಕೊಂಡೊಯ್ಯಬಹುದು ಎಂದು ದೂರು ಹೇಳಿದರು. ಎಲ್ಲಾ ಸಲಹೆಗಳನ್ನು ಪ್ರಧಾನಿ ಮೋದಿ ಅವರು ಮುಕ್ತ ಮನಸ್ಸಿನಿಂದ ಆಲಿಸಿದರು ಎಂದು ಮೂಲಗಳು ತಿಳಿಸಿವೆ.

Free Schemes Will Cause Economic Crisis In India Similar To Sri Lanka: Officials Said To PM Modi

ಶ್ರೀಲಂಕಾ ಸದ್ಯ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಇಂಧನ, ಅಡುಗೆ ಅನಿಲ, ವಿದ್ಯುತ್‌ ಮತ್ತು ಅಗತ್ಯ ವಸ್ತುಗಳ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿನ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ವಿವಿಧ ಯೋಜನೆಗಳನ್ನು ಘೋಷಿಸಿವೆ. ರಾಜ್ಯಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ನೀಡಿದ ಅನುದಾನಕ್ಕಿಂತಲೂ ಹೆಚ್ಚಿನ ಅನುದಾನವನ್ನು ಉಚಿತ ಯೋಜನೆಗಳಿಗೆ ಮೀಸಲಿಡುತ್ತಿವೆ. ಹಲವಾರು ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಅವು ಒಕ್ಕೂಟದ ಸದಸ್ಯರಾಗಿರದಿದ್ದರೆ ದಿವಾಳಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಅಧಿಕಾರಿಗಳು, ಇತ್ತೀಚೆಗೆ ಚುನಾವಣೆ ನಡೆದ ರಾಜ್ಯಗಳು ಸೇರಿದಂತೆ ಜನರ ಮೆಚ್ಚುಗೆಗೆ ಪಾತ್ರವಾಗಲು ರಾಜ್ಯ ಸರ್ಕಾರಗಳು ಉಚಿತ ಯೋಜನೆಗಳನ್ನು ಪ್ರಕಟಿಸುತ್ತಿವೆ. ಈ ಯೋಜನೆಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಮೇಲೆ ದೀರ್ಘಾವಧಿಯಲ್ಲಿ ಪ್ರಮುಖ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ತಿಳಿಸಿದರು.

ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಭರವಸೆ ನೀಡುವ ಜನಪರ ಯೋಜನೆಗಳ ಪ್ರವೃತ್ತಿ ಮುಂದುವರಿದರೆ ಕೆಲವು ರಾಜ್ಯಗಳು ಹಣದ ಕೊರತೆಯಿರುವ ಶ್ರೀಲಂಕಾ ಅಥವಾ ಗ್ರೀಸ್‌ನಂತೆಯೇ ದಿವಾಳಿಯಾಗಬಹುದು ಎಂದು ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಮತ್ತು ಕ್ಯಾಬಿನೆಟ್‌ ಕಾರ್ಯದರ್ಶಿ ರಾಜೀವ್‌ ಗೌಬಾ ಸೇರಿದಂತೆ ಕೇಂದ್ರ ಸರ್ಕಾರದ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+