ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಸಿಕ್ಕ ಸಿಕ್ಕ ಮನೆಗಳಿಗೆ ಬೆಂಕಿ ಇಡುತ್ತಿರುವ ಉದ್ರಿಕ್ತರು

ಇಂಫಾಲ್‌ನಲ್ಲಿ ದುಷ್ಕರ್ಮಿಗಳು ಸಿಕ್ಕಸಿಕ್ಕ ಮನೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಮಣಿಪುರವು ಸೋಮವಾರ ಹಿಂಸಾಚಾರದ ಹೊಸ ಘಟನೆಗಳಿಗೆ ಸಾಕ್ಷಿಯಾಗಿದೆ. ಸರ್ಕಾರವು ರಾಜ್ಯದಲ್ಲಿ ಮೇ 26 ರವರೆಗೆ ಇಂಟರ್ನೆಟ್ ಅಮಾನತುಗೊಳಿಸುವಿಕೆಯನ್ನು ವಿಸ್ತರಿಸಿದೆ. ಕರ್ಫ್ಯೂ ಸಡಿಲಿಕೆಯ ಅವಧಿಯನ್ನು ಬೆಳಿಗ್ಗೆ 5 ರಿಂದ ಮಧ್ಯಾಹ್ನ 1 ರವರೆಗೆ, ಮತ್ತು ಸಂಜೆ 5 ರಿಂದ 4 ರವರೆಗೆ ಕಡಿತಗೊಳಿಸಲಾಗಿದೆ.

ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಇಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟಿಸಲು ಮೇ 3 ರಂದು ಗುಡ್ಡಗಾಡು ಪ್ರದೇಶದ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಲಾಗಿತ್ತು. ಆ ನಂತರ ಮಣಿಪುರದಲ್ಲಿ ಘರ್ಷಣೆಗಳು ನಡೆಯುತ್ತಿವೆ.

ಹಿಂಸಾಚಾರದ ಮೊದಲು ಕುಕಿ ಗ್ರಾಮಸ್ಥರನ್ನು ಮೀಸಲು ಅರಣ್ಯ ಭೂಮಿಯಿಂದ ಹೊರಹಾಕುವ ಪ್ರಯತ್ನ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಅಲ್ಲಿಂದ ಸಣ್ಣ ಪ್ರತಿಭಟನೆಗಳು ನಡೆಯುತ್ತಲೇ ಬಂದವು.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟು ಜನರು ಮೈಟೆಯಿಸ್ ಜನಾಂಗಕ್ಕೆ ಸೇರಿದವರು. ಅವರು ಇಂಫಾಲ ಸುತ್ತಲಿನ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು - ನಾಗಾಗಳು ಮತ್ತು ಕುಕಿಗಳು. ಜನಸಂಖ್ಯೆಯ ಮತ್ತೊಂದು ಒಟ್ಟು 40 ಪ್ರತಿಶತವನ್ನು ಹೊಂದಿದ್ದಾರೆ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

Fresh Violence in Manipur

ಇವರ ನಡುವೆ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳು 70 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿವೆ. ಈಶಾನ್ಯ ರಾಜ್ಯವನ್ನು ಸಹಜ ಸ್ಥಿತಿಗೆ ತರಲು ಸುಮಾರು 10,000 ಸೈನ್ಯ ಮತ್ತು ಪ್ಯಾರಾ-ಮಿಲಿಟರಿ ಸಿಬ್ಬಂದಿಯನ್ನು ನಿಯೋಜಿಸಬೇಕಾಗಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ಕುಕಿಗಳನ್ನು ಕಾಡುಗಳಿಂದ ಮತ್ತು ಬೆಟ್ಟಗಳಲ್ಲಿರುವ ತಮ್ಮ ಮನೆಗಳಿಂದ ಹೊರಹಾಕುವ ಗುರಿಯೊಂದಿಗೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಡ್ರಗ್ಸ್ ವಿರುದ್ಧದ ಯುದ್ಧವೂ ಸಹ ಕುಕಿಗಳನ್ನು ಹೊರಹಾಕುವ ತಂತ್ರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Fresh Violence in Manipur

ಸೇನೆ ಮತ್ತು ಅರೆಸೇನಾ ಪಡೆಗಳು ರಾಜ್ಯದಲ್ಲಿ ಮೊಕ್ಕಾಂ ಹೂಡಿದ್ದು, ನಿಯಮಿತ ಗಸ್ತು ಏರ್ಪಡಿಸಿ ನಾಗರಿಕರಿಗೆ ಸಹಾಯ ಮಾಡುತ್ತಿವೆ. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದು, ಎರಡೂ ಸಮುದಾಯಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+