ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಇಂಫಾಲದಲ್ಲಿ ಹಲವಾರು ಮನೆಗಳಿಗೆ ಬೆಂಕಿ- ಸೇನೆ ಜೊತೆಯೂ ಸಂಘರ್ಷ

ಇಂಫಾಲ್‌, ಜೂನ್‌ 15: ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಭದ್ರತಾ ಪಡೆಗಳು ಮತ್ತು ದುಷ್ಕರ್ಮಿಗಳ ನಡುವೆ ಘರ್ಷಣೆಗಳು ವರದಿಯಾಗಿವೆ. ಈ ಮೂಲಕ ಈಶಾನ್ಯ ರಾಜ್ಯದಲ್ಲಿ ಹೊಸದಾಗಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ರಾಜಧಾನಿ ಇಂಫಾಲ್ ನಗರದಲ್ಲಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಮೆನ್ಲೋಕ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದರು ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ. ಇದಾದ ಬಳಿಕ ಹಲವಾರು ಮನೆಗಳಿಗೆ ಗುಂಪೊಂದು ಬೆಂಕಿ ಹಚ್ಚಲು ಆರಂಭಿಸಿದೆ.

Fresh Violence in Manipur: Mob Sets houses on Fire in Imphal And Clashes with Security Force

ಉದ್ರಿಕ್ತರನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಇಂಫಾಲ್‌ನ ನ್ಯೂ ಚೆಕಾನ್‌ನಲ್ಲಿ ಬಲಪ್ರಯೋಗ ಮಾಡಿವೆ. ಈ ವೇಲೆ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲಹ ಪೀಡಿತ ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ನಂತರ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಕಾರ್ಯಚಾರಣೆ ಆರಂಭಿಸಿವೆ. ಕಾರ್ಯಚರಣೆ ತೀವ್ರಗೊಂಡಿದ್ದರಿಂದ ಹೊಸದಾಗಿ ಹಿಂಸಾಚಾರ ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

ಸೈನ್ಯ ಮತ್ತು ಅಸ್ಸಾಂ ರೈಫಲ್ಸ್ ಸೈನಿಕರು ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಿವೆ. 'ಇತ್ತೀಚಿನ ಹಿಂಸಾಚಾರದ ನಂತರ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನಿಂದ ಪ್ರದೇಶದ ಮೇಲೆ ಪ್ರಾಬಲ್ಯ ಹೊಂದುವ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ' ಎಂದು ಭಾರತೀಯ ಸೇನೆ ಟ್ವೀಟ್‌ನಲ್ಲಿ ತಿಳಿಸಿದೆ.

Fresh Violence in Manipur: Mob Sets houses on Fire in Imphal And Clashes with Security Force

ಮಣಿಪುರದಲ್ಲಿ ಒಂದು ತಿಂಗಳ ಹಿಂದೆ ಭುಗಿಲೆದ್ದ ಮೈತೆಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 310 ಜನರು ಗಾಯಗೊಂಡಿದ್ದಾರೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯ ಪ್ರತಿಭಟಿಸಲು ಆರಂಭಿಸಿತು. ಈ ಹಿನ್ನೆಲೆಯಲ್ಲಿ ಗುಡ್ಡಗಾಡು ಜಿಲ್ಲೆಗಳಲ್ಲಿ 'ಬುಡಕಟ್ಟು ಐಕ್ಯತಾ ಮೆರವಣಿಗೆ' ಆಯೋಜಿಸಲಾಗಿತ್ತು. ಆ ನಂತರ ಮೇ 3 ರಂದು ಮೊದಲು ಘರ್ಷಣೆಗಳು ಪ್ರಾರಂಭವಾದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+