ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 20ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪುನರಾರಂಭ

|
Google Oneindia Kannada News

ನವದೆಹಲಿ, ಏಪ್ರಿಲ್ 18: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಏಪ್ರಿಲ್ 20ರಿಂದಲೇ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Recommended Video

FasTag creates Drama , Toll Plaza employee breaks car glass

ಲಾಕ್‌ಡೌನ್‌ನಿಂದಾಗಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು, ಏಪ್ರಿಲ್ 20ರ ಬಳಿಕ ಲಾಕ್‌ಡೌನ್ ನಿಯಮವನ್ನು ಸಡಿಲಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಟೋಲ್ ಹೆಸರಿನಲ್ಲಿ ಹೆದ್ದಾರಿಯಲ್ಲಿ ಹಗಲು ದರೋಡೆ; ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳುಟೋಲ್ ಹೆಸರಿನಲ್ಲಿ ಹೆದ್ದಾರಿಯಲ್ಲಿ ಹಗಲು ದರೋಡೆ; ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾ ನಡೆಸುತ್ತಿರುವವರಿಗೆ ಪತ್ರ ಬರೆದಿದ್ದು, ಎಂದಿನಂತೆ ವಾಹನಗಳ ಶುಲ್ಕವನ್ನು ಪಡೆಯುವಂತೆ ಹೇಳಿದೆ.

From April 20 NHAI To Resume Toll Collection On National Highways

ಮಾರ್ಚ್ 24ರಿಂದ ಲಾಕ್‌ಡೌನ್ ಜಾರಿಯಾದ ಬಳಿಕ ಅಗತ್ಯ ವಾಹನಗಳು ಮಾತ್ರ ಟೋಲ್‌ ಮೂಲಕ ಚಲಿಸುತ್ತಿದ್ದವು. ಇದೀಗ ಲಾಕ್‌ಡೌನ್ ನಿಯಮ ಸಡಿಲಗೊಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿರುವುದರಿಂದ ಟೋಲ್ ಸಂಗ್ರಹವನ್ನು ಪುನರಾರಂಭಿಸುವುದುದಾಗಿ ಎನ್ಎಚ್‌ಎಐ ತಿಳಿಸಿದೆ.

ಅಗತ್ಯ ಸೇವಾ ಸರಕು ವಾಹನಗಳು ತುರ್ತಾಗಿ ಸ್ಥಳಗಳನ್ನು ತಲುಪಬೇಕಿರುವುದರಿಂದ ಟೋಲ್‌ಗಳನ್ನು ಮುಕ್ತಗೊಳಿಸಲಾಗಿದೆ ಎಂದು ಕೇಂದ್ರ ಸಾರಿಗೆ ಮಾಹಿತಿ ನೀಡಿತ್ತು.

ಆದರೆ ಟೋಲ್ ಶುಲ್ಕ ರದ್ದತಿ ತಾತ್ಕಾಲಿಕವಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದ ಮೇಲೆ ಮತ್ತೆ ಟೋಲ್ ಶುಲ್ಕ ಕೇಂದ್ರಗಳನ್ನು ಪ್ರಾರಂಭಿಸುವುದಾಗಿಯೂ ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿತ್ತು.

ಒಟ್ಟಿನಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಒಂದೊಂದೇ ಇಲಾಖೆಗಳು ಅಧಿಕೃತವಾಗಿ ಧುಮುಕಿದ್ದವು. ಸಂಕಷ್ಟದ ಸಮಯದಲ್ಲಿ ನಾಗರಿಕರಿಗೆ ಹಲವು ವಿನಾಯ್ತಿಗಳನ್ನು ನೀಡುವ ಮೂಲಕ ನೆರವಿಗೆ ಧಾವಿಸಿದ್ದವು.

English summary
Toll collections will resume from April 20 onwards following the Centre announced relaxation in several restrictions from lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X