ಅಂಚೆ ಕಚೇರಿಯಲ್ಲಿ ಪಾಸ್ಪೋರ್ಟ್: ಕರ್ನಾಟಕದ 5 ನಗರಗಳಲ್ಲಿ ಪಡೆಯಿರಿ
ಬೆಂಗಳೂರು, ಫೆಬ್ರವರಿ 20: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ನಲ್ಲಿ ಘೋಷಿಸಿದಂತೆ, ವಿದೇಶಾಂಗ ವ್ಯವಹಾರ ಇಲಾಖೆಯ ಮಹತ್ವದ ಯೋಜನೆಗೆ ಚಾಲನೆ ಸಿಕ್ಕಿದೆ. ದೇಶದ ಪ್ರಮುಖ ನಗರಗಳ ಅಂಚೆ ಕಚೇರಿಗಳಲ್ಲಿ ಮುಂದಿನ ತಿಂಗಳಿನಿಂದ ಸಾರ್ವಜನಿಕರು ಪಾಸ್ ಪೋರ್ಟ್ ಗಾಗಿ ಅರ್ಜಿ ಸಲ್ಲಿಸಬಹುದು. ಈ ಪಟ್ಟಿಯಲ್ಲಿ ಕರ್ನಾಟಕದ ಐದು ನಗರಗಳಿವೆ.
ದೇಶದ ಪ್ರಮುಖ ನಗರಗಳಲ್ಲಿರುವ ಪಾಸ್‍ಪೋರ್ಟ್ ಕಚೇರಿ, ಸೇವಾ ಕೇಂದ್ರಗಳಲ್ಲಿನ ಅಧಿಕ ಹೊರೆ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಜಾರ್ಖಂಡ್, ರಾಜಸ್ಥಾನ ಮತ್ತು ಇತರೆ ರಾಜ್ಯಗಳಲ್ಲಿ ಮೊದಲನೇ ಹಂತದಲ್ಲಿ ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ. ನಂತರ ದೇಶದ ಪ್ರಮುಖ ಪಟ್ಟಣಗಳಲ್ಲೂ ಇದನ್ನು ಕಾರ್ಯಗತಗೊಳಿಸಲಾಗುತ್ತದೆ.

ಕರ್ನಾಟಕದಲ್ಲಿಬೆಳಗಾವಿ, ದಾವಣಗೆರೆ, ಹಾಸನ, ಕಲಬುರಗಿ, ಮೈಸೂರು ನಗರಗಳಲ್ಲಿ ಮೊದಲಿಗೆ ಈ ಯೋಜನೆ ಜಾರಿಗೊಳ್ಳಲಿದೆ (ಪಿಟಿಐ)












Click it and Unblock the Notifications