ಪೆಟ್ರೋಲ್ ಬೆಲೆ ಏರಿಕೆ: ಟ್ವಿಟ್ಟರ್‌ನಲ್ಲಿ ಕೇಂದ್ರದ ವಿರುದ್ಧ ಆಕ್ರೋಶ
ನವದೆಹಲಿ, ಮೇ 25: ಕರ್ನಾಟಕ ವಿಧಾನಸಭೆ ಮುಗಿಯುತ್ತಿದ್ದಂತೆಯೇ ಪೆಟ್ರೋಲ್ ಮತ್ತು ಡೀಸೆಲ್ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
12 ದಿನದಲ್ಲಿ 12 ಬಾರಿ ತೈಲ ದರ ಹೆಚ್ಚಳವಾಗಿದೆ. ಈ ಅವಧಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 11 ರೂ.ನಷ್ಟು ಏರಿಕೆ ಕಂಡಿದ್ದರೆ, ಡೀಸೆಲ್ ದರ ಲೀಟರ್‌ಗೆ 7.27ನಷ್ಟು ತುಟ್ಟಿಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದುಬಾರಿಯಾಗುತ್ತಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿಯೇತರ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿವೆ. ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ಆದರೂ ತೈಲ ಬೆಲೆ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗುತ್ತದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
|
ಜಿಎಸ್‌ಟಿಯಲ್ಲಿ ತನ್ನಿ
ಪೆಟ್ರೋಲ್ ಮತ್ತು ಡೀಸೆಲ್‌ಅನ್ನು ಜಿಎಸ್‌ಟಿ ಅಡಿಯಲ್ಲಿ ತರುವುದರಿಂದ ಬೆಲೆ ಇಳಿಕೆಯಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ. ಅದನ್ನು ಮಾಡಲು ಕೇಂದ್ರದಲ್ಲಿರುವ ಅವರದೇ ಪಕ್ಷದಲ್ಲಿರುವ ಸರ್ಕಾರಕ್ಕೆ ಅವರು ಹೇಳಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
|
ಜನಸಾಮಾನ್ಯರಲ್ಲಿ ಆಕ್ರೋಶ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಎಲ್ಲ ವಸ್ತುಗಳ ದರ ಹೆಚ್ಚುತ್ತಲೇ ಇದೆ. ಅದೇ ರೀತಿ ಜನಸಾಮಾನ್ಯರ ಹತಾಶೆ ಮತ್ತು ಆಕ್ರೋಶ ಕೂಡ ಹೆಚ್ಚುತ್ತಿದೆ.
ಸುತ್ತಮುತ್ತಲಿನ ಎಲ್ಲವುಗಳ ಮೌಲ್ಯ ಏರಿಕೆಯಾಗುತ್ತಿದೆ. ನೀವು ಹೇಳಿಕೊಳ್ಳುವ 56 ಇಂಚನ್ನು ಕೂಡ ಏರಿಸಿಕೊಳ್ಳುವಿರಾ? ಎಂದು ಪ್ರಕಾಶ್ ರೈ #justasking ಹ್ಯಾಷ್ ಟ್ಯಾಗ್ ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
|
ಜನಸಾಮಾನ್ಯರಿಗೊಂದು, ಭಕ್ತರಿಗೊಂದು
ನಾವು ವಿಭಿನ್ನವಾದ ಪೆಟ್ರೋಲ್ ದರ ಹೊಂದಬಹುದೇ? ಜನಸಾಮಾನ್ಯರಿಗೆ ಲೀಟರ್‌ಗೆ 50 ರೂ. ಮತ್ತು ಮೋದಿ ಭಕ್ತರಿಗೆ ಲೀಟರ್‌ಗೆ 100 ರೂ. ಎಂದು #justasking ಹ್ಯಾಷ್ ಟ್ಯಾಗ್ ಬಳಸಿ ಗುಜರಾತ್‌ನ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಲೇವಡಿ ಮಾಡಿದ್ದಾರೆ.
|
ಸಂಬಳ ಪೆಟ್ರೋಲ್ ದರವಾಗಲಿ
ನನ್ನ ಸಂಬಳವೂ ಪೆಟ್ರೋಲ್‌ನಂತೆ ಆಗಲಿ ಎಂದು ಬಯಸುತ್ತೇನೆ. ಪ್ರತಿದಿನ ನಾನು ಬೆಳಿಗ್ಗೆ ಎದ್ದಾಗ ಅದು ಏರಿಕೆಯಾಗಿರುವುದು ಗೊತ್ತಾಗಬೇಕು ಎಂದು ಸೌರಭ್ ಸಿಂಘಿ ಎಂಬುವವರು ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications