ಪೆಟ್ರೋಲ್, ಡೀಸೆಲ್ ಬೆಲೆ ಏರಿಸದಿದ್ದರೆ ಅದೇ ದೊಡ್ಡ ಸುದ್ದಿ; ರಾಹುಲ್

ನವದೆಹಲಿ, ಜೂನ್ 18: ದೇಶದಲ್ಲಿ ಇಂಧನ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಕುರಿತು ಪ್ರಧಾನಿ ಮೋದಿ ನೇತೃತ್ವದ ಆಡಳಿತವನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಈಗ ದೇಶದಲ್ಲಿ ಇಂಧನ ಬೆಲೆ ಏರಿಕೆ ಮಾಡಿಲ್ಲವಾದರೆ ದೊಡ್ಡ ಸುದ್ದಿ ಎನಿಸಿಕೊಳ್ಳುತ್ತದೆ" ಎಂದು ಹೇಳಿದ್ದಾರೆ.

ಶುಕ್ರವಾರ ಇಂಧನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, "ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿಲ್ಲ ಎಂದರೆ ಆಶ್ಚರ್ಯ ಪಡುವಂಥ ಪರಿಸ್ಥಿತಿ ಮೋದಿ ಸರ್ಕಾರದಲ್ಲಿದೆ. ಬೆಲೆ ಏರಿಕೆ ಮಾಡಿಲ್ಲ ಎನ್ನುವುದೇ ದೊಡ್ಡ ಸುದ್ದಿಯಾಗುತ್ತದೆ. ಇದು ಮೋದಿ ಸರ್ಕಾರದ ಅಭಿವೃದ್ಧಿ," ಎಂದು ಟೀಕೆ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, "ಜನರು ಕೊರೊನಾ ಕಾರಣವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಮಯದಲ್ಲಿ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಮೋದಿ ಸರ್ಕಾರ ನಿರಂತರವಾಗಿ ಇಂಧನ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ. ಜನರಿಗೆ ಈ ಬವಣೆ ತಪ್ಪುವುದು ಯಾವಾಗ" ಎಂದು ಪ್ರಶ್ನಿಸಿದ್ದರು.

Fuel Prices Not Hiked Is Bigger News Says Rahul Gandhi

ದೇಶದಲ್ಲಿ ಕಳೆದ ತಿಂಗಳಿನಿಂದಲೂ ಇಂಧನ ಬೆಲೆ ನಿರಂತರ ಏರಿಕೆ ಕಂಡಿದ್ದು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.

ಮೇ 4ರಿಂದ ಇಲ್ಲಿ ತನಕ ಒಟ್ಟಾರೆ 27ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಜೂನ್ 18ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 26 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 30ಪೈಸೆಯಷ್ಟು ಏರಿಕೆಯಾಗಿದೆ. ಸುಮಾರು 7 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ಪ್ರತಿ ಲೀಟರ್ ದಾಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 102.82 ರೂ ಪ್ರತಿ ಲೀಟರ್, ಡೀಸೆಲ್ 94.84 ರೂ ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಲಡಾಕ್ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+