ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 5 ತಿಂಗಳಿನಲ್ಲಿ ಶೇ.5ರಷ್ಟು ಪ್ರಜೆಗಳಿಗಷ್ಟೇ ಕೊರೊನಾವೈರಸ್ ಲಸಿಕೆ!

|
Google Oneindia Kannada News

ನವದೆಹಲಿ, ಜೂನ್ 18: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 5 ತಿಂಗಳೇ ಕಳೆದು ಹೋಗಿದೆ. ಇಷ್ಟು ಅವಧಿಯಲ್ಲಿ ದೇಶದ ವಯಸ್ಕರ ಜನಸಂಖ್ಯೆಯ ಶೇ.5ರಷ್ಟು ಫಲಾನುಭವಿಗಳಿಗೆ ಮಾತ್ರ ಸಂಪೂರ್ಣವಾಗಿ ಕೊವಿಡ್-19 ಲಸಿಕೆ ನೀಡಲಾಗಿದೆ.

ಶುಕ್ರವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಮಾಹಿತಿ ನೀಡಿತು. ದೇಶದಲ್ಲಿನ 94 ಕೋಟಿ ವಯಸ್ಕರ ಪೈಕಿ 5.04 ಕೋಟಿ ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

5W-1H: ಕೊರೊನಾವೈರಸ್ 3ನೇ ಅಲೆ ಬಗ್ಗೆ ನಿಮಗೆ ತಿಳಿಯದ ಸುದ್ದಿ! 5W-1H: ಕೊರೊನಾವೈರಸ್ 3ನೇ ಅಲೆ ಬಗ್ಗೆ ನಿಮಗೆ ತಿಳಿಯದ ಸುದ್ದಿ!

ದೇಶದಲ್ಲಿ ಈವರೆಗೂ 27,20,72,645 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಒಟ್ಟು ಜನಸಂಖ್ಯೆಯ ನಾಲ್ಕನೇ ಒಂದು ಭಾಗದ ಜನರು ಕನಿಷ್ಠ ಒಂದು ಡೋಸ್ ಕೊವಿಡ್-19 ಲಸಿಕೆಯನ್ನು ಪಡೆದುಕೊಂಡಿದೆ. ಜಗತ್ತಿನಲ್ಲಿ ಎರಡೂ ಡೋಸ್ ಲಸಿಕೆ ವಿತರಿಸಿದ ಜನಸಂಖ್ಯೆಯನ್ನು ಗಮನಿಸಿದಾಗ ಭಾರತ 81ನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಜಗತ್ತಿನ 80 ದೇಶಗಳು ಭಾರತಕ್ಕಿಂತ ಮುಂದಿವೆ.

40 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ನೀಡುವ ಗುರಿ

40 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ನೀಡುವ ಗುರಿ

ಜೂನ್ ತಿಂಗಳ ಇದುವರೆಗಿನ ಅಂಕಿ-ಅಂಶಗಳನ್ನು ಗಮನಿಸಿದಾಗ ಸರಾಸರಿ 30.57 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಜೂನ್ ತಿಂಗಳಿನಲ್ಲಿ ಪ್ರತಿನಿತ್ಯ 40 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಈ ತಿಂಗಳಿನಲ್ಲಿ ಅತಿಹೆಚ್ಚು ಎಂದರೆ ಜೂನ್ 14ರಂದು 38.20 ಲಕ್ಷ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿತ್ತು. ಆದರೆ ಏಪ್ರಿಲ್ ತಿಂಗಳಿನಿಂದ ಈವರೆಗೂ 40 ಲಕ್ಷದ ಗುರಿಯನ್ನು ತಲುಪುವುದಕ್ಕೆ ಆಗುತ್ತಿಲ್ಲ.

ದೇಶದಲ್ಲಿ ಇಳಿಮುಖವಾಗುತ್ತಿರುವ ಲಸಿಕೆ ವಿತರಣೆ

ದೇಶದಲ್ಲಿ ಇಳಿಮುಖವಾಗುತ್ತಿರುವ ಲಸಿಕೆ ವಿತರಣೆ

ಭಾರತದಲ್ಲಿ "ಕಳೆದ ಜೂನ್ 14ರಂದು 38.20 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿತ್ತು. ಅಂದಿನಿಂದ ಜೂನ್ 18ರವರೆಗೂ ಕೊವಿಡ್-19 ಲಸಿಕೆ ವಿತರಣೆ ಸಂಖ್ಯೆ 30 ಲಕ್ಷದ ಗಡಿಗೆ ತಲುಪಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಲಸಿಕೆ ವಿತರಣೆ ವೇಗ ಇಳಿಮುಖವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಇದು ಉತ್ತಮ ಬೆಳವಣಿಗೆಯಲ್ಲ," ಎಂದು ವೈದ್ಯಕೀಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್ ವೇಳೆಗೆ ಕೇಂದ್ರದ ಎದುರಿಗೆ ಬೃಹತ್ ಗುರಿ

ಡಿಸೆಂಬರ್ ವೇಳೆಗೆ ಕೇಂದ್ರದ ಎದುರಿಗೆ ಬೃಹತ್ ಗುರಿ

"ಕೊರೊನಾವೈರಸ್ ಲಸಿಕೆ ವಿತರಣೆ ವಿಷಯದಲ್ಲಿ ಕೇಂದ್ರ ಸರ್ಕಾರವು ದೊಡ್ಡ ಗುರಿಯನ್ನು ಹೊಂದಿದೆ. ಡಿಸೆಂಬರ್ ತಿಂಗಳಾಂತ್ಯದ ವೇಳೆಗೆ ಪ್ರತಿನಿತ್ಯ 70 ರಿಂದ 75 ಲಕ್ಷ ಜನರಿಗೆ ಕೊವಿಡ್-19 ಲಸಿಕೆ ವಿತರಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಇಂದಿನ ಲಸಿಕೆ ವಿತರಣೆ ವೇಗವೇ ಮುಂದುವರಿದರೆ ಅಂದುಕೊಂಡ ಗುರಿ ತಲುಪುವುದಕ್ಕೆ ಸಾಧ್ಯವಾಗುವುದಿಲ್ಲ. ಅಲ್ಲದೇ, ಮುಂದಿನ ದಿನಗಳಲ್ಲಿ ಲಸಿಕೆಯ ಕೊರತೆಯಿಂದಾಗಿ ಅಂದುಕೊಂಡಿದ್ದನ್ನು ಸಾಧಿಸುವುದಕ್ಕೆ ಕಷ್ಟಸಾಧ್ಯವಾಗುತ್ತದೆ," ಎಂದು ಹೆಸರು ಹೇಳಲು ಇಚ್ಛಿಸದ ರಾಷ್ಟ್ರೀಯ ಕೊವಿಡ್-19 ನಿಯಂತ್ರಣ ಕಾರ್ಯಪಡೆಯ ಸದಸ್ಯರೊಬ್ಬರು ಹೇಳಿದ್ದಾರೆ.

ಕೊವಿಡ್-19 ಲಸಿಕೆ ಲಭ್ಯತೆ ಪ್ರಮಾಣ

ಕೊವಿಡ್-19 ಲಸಿಕೆ ಲಭ್ಯತೆ ಪ್ರಮಾಣ

ಕೊರೊನಾವೈರಸ್ ಲಸಿಕೆ ವಿತರಣೆ ವೇಗವನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರವು ಕರೆ ನೀಡಿರುವ ಬೆನ್ನಲ್ಲೇ ಲಸಿಕೆಯ ಲಭ್ಯತೆ ಪ್ರಮಾಣ ಹೆಚ್ಚಾಗಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದ್ದಲ್ಲಿ ಜೂನ್ ತಿಂಗಳಿನಲ್ಲಿ ಶೇ.50ರಷ್ಟು ಲಸಿಕೆ ಲಭ್ಯತೆ ಹೆಚ್ಚಿದೆ. 10 ಕೋಟಿ ಕೊವಿಶೀಲ್ಡ್, 90 ಲಕ್ಷ ಕೊವ್ಯಾಕ್ಸಿನ್, ಇದರ ಜೊತೆಗೆ ಜೂನ್ ತಿಂಗಳಿನಲ್ಲಿ ಸುಮಾರು 1 ಕೋಟಿ ಡೋಸ್ ಸ್ಪುಟ್ನಿಕ್-ವಿ ಲಸಿಕೆ ಲಭ್ಯವಾಗಲಿದೆ.

27.20 ಕೋಟಿ ಫಲಾನುಭವಿಗಳಿಗೆ ಕೊವಿಡ್ ಲಸಿಕೆ .

27.20 ಕೋಟಿ ಫಲಾನುಭವಿಗಳಿಗೆ ಕೊವಿಡ್ ಲಸಿಕೆ .

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 154 ದಿನಗಳಲ್ಲಿ 27,20,72,645 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 29,84,172 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 26,24,028 ಜನರಿಗೆ ಮೊದಲ ಡೋಸ್ ಹಾಗೂ 3,60,144 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

ಭಾರತದಲ್ಲಿ 15 ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಭಾರತದಲ್ಲಿ ಮೇ 1ರಿಂದ ಈವರೆಗೂ 5,15,68,603 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 11,40,679 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

1,01,02,747 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 70,46,810 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,70,37,592 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 89,91,830 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,89,56,180 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,25,01,203 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,39,46,759 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,07,80,242 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
Fully Coronavirus Vaccinated Countries In World: India Found In 81st Place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X