ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸೇರಿದ ಪರಮೇಶ್ವರ

ನವದೆಹಲಿ, ನವೆಂಬರ್ 18; ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯನ್ನು ಪುನರ್ ರಚನೆ ಮಾಡಿದೆ. ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ. ಟಿ. ಆಂಟನಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಗುರುವಾರ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯನ್ನು ಪುನರ್ ರಚನೆ ಮಾಡಿದೆ. 5 ಸದಸ್ಯರ ಸಮಿತಿಯನ್ನು ರಚನೆ ಮಾಡಲಾಗಿದ್ದು, ಮಾಜಿ ಸಚಿವರ ಅಂಬಿಕಾ ಸೋನಿ ಸಹ ಸಮಿತಿಯಲ್ಲಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಪಾಲನಾ ಸಮಿತಿಯನ್ನು ಪುನರ್ ರಚನೆ ಮಾಡಲಾಗಿದೆ. ತಾರೀಖ್ ಅನ್ವರ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

G Parameshwara Appointed As Member Of Congress disciplinary committee

ದೆಹಲಿಯ ಮಾಜಿ ಸಂಸದ ಜೈ ಪ್ರಕಾಶ್ ಅಗರ್‌ವಾಲ್, ಕರ್ನಾಟಕ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಮಿತಿಯ ಸದಸ್ಯರಾಗಿದ್ದಾರೆ.

ಡಾ. ಜಿ. ಪರಮೇಶ್ವರ ಪರಿಚಯ; ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಸೇರಿದ್ದಾರೆ.

ಪರಮೇಶ್ವರ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಗಳಾಗಿದ್ದಾಗ ರೇಷ್ಮೆ ಸಚಿವರಾಗಿ, ಎಸ್‌.ಎಂ.ಕೃಷ್ಣ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸುದೀರ್ಘ ಅವಧಿಯ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ ಹೆಗ್ಗೆಳಿಕೆಯೂ ಅವರದ್ದು.

ದಲಿತ ಜನಾಂಗಕ್ಕೆ ಸೇರಿದ ಪರಮೇಶ್ವರ ಸಚಿವರಾಗಿ ಕೆಲಸ ಮಾಡಿದ್ದಾರೆ. 1989ರಲ್ಲಿ ಕೊರಟಗೆರೆ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. ವೀರಪ್ಪ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಕೆಲಸ ಮಾಡಿದ್ದಾರೆ.

1999ರಲ್ಲಿ ಶಾಸಕರಾಗಿ ಮರು ಆಯ್ಕೆಯಾದರು. ಎಸ್‌. ಎಂ. ಕೃಷ್ಣ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದರು. 2013ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಸೋತರು. ಆಗ ಪಕ್ಷ ಅಧಿಕಾರಕ್ಕೆ ಬಂದು. ಪರಮೇಶ್ವರ ಕೆಪಿಸಿಸಿ ಅಧ್ಯಕ್ಷರಾಗಿದ್ದರು.

2014ರ ಜುಲೈ 1 ರಂದು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಸಿದ್ದರಾಮಯ್ಯ ಸಂಪುಟ ಸೇರಿದರು. 2018ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಗೆಲುವು ಸಾಧಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+