ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Gali Janardhana Reddy : ರಾಜಸ್ಥಾನದ ಪವಿತ್ರ ಅಜ್ಮೀರ್ ಷರೀಫ್ ದರ್ಗಾಕ್ಕೆ ಭೇಟಿ ನೀಡಿದ ಜನಾರ್ದನ ರೆಡ್ಡಿ

|
Google Oneindia Kannada News

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಹೊಸ ಪಕ್ಷ ಕಟ್ಟಿದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಇಂದು ರಾಜಸ್ಥಾನದ ಪವಿತ್ರ ಅಜ್ಮೀರ್ ಷರೀಫ್ ದರ್ಗಾಕ್ಕೆ ಭೇಟಿ ನೀಡಿದರು. ತಾವು ಸ್ಥಾಪಿಸಿದ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ'ದ ಒಳಿತಿಗಾಗಿ ಪ್ರಾರ್ಥನೆ ಮಾಡಿದರು. ಜೊತೆಗೆ ಈ ಬಾರಿ ಅವರು ಗಂಗಾವತಿಯಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಜೊತೆಗೆ ಕಲ್ಯಾಣ ಕರ್ನಾಟಕದ ಭಾಗದ ಎಲ್ಲ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.

ಪಕ್ಷದ ಬಲವರ್ಧನೆಗಾಗಿ ವಿವಿಧ ಸಮಾಜಗಳ ಜೊತೆಗೆ ಎಲ್ಲಾ ಪಕ್ಷಗಳ ಅತೃಪ್ತ ಮುಖಂಡರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿವಾಸಕ್ಕೆ ಭೆಟಿ ನೀಡಲಾಗುತ್ತಿದೆ. ಇದರಿಂದ ಕೆಆರ್‌ಪಿಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಪಕ್ಷದ ಕಾರ್ಯಕರ್ತರು ಸೇರ್ಪಡೆ ಆಗುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಕೆಲ ನಾಯಕರು ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ತರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅವರು ಬೆಂಗಳೂರು ಹಾಗೂ ದೆಹಲಿಯಲ್ಲಿ ಕೆಲ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ ಎನ್ನುವಚ ಮಾತುಗಳು ಕೇಳಿ ಬರುತ್ತಿವೆ.

ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನನ್ನ ಉದ್ದೇಶ: ಜನಾರ್ದನ ರೆಡ್ಡಿನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನನ್ನ ಉದ್ದೇಶ: ಜನಾರ್ದನ ರೆಡ್ಡಿ

ಮುಂಬರುವ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್​ಪಿಪಿ)ದ 40 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ, ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ.

Gali Janardhana Reddy visits Ajmer Sharif Dargah in Rajasthan ahead of Karnataka Assembly Elections

ಈ ಬಗ್ಗೆ ಶುಕ್ರವಾರ ಗಂಗಾವತಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜನಾರ್ದನ ರೆಡ್ಡಿ, ನಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಕಲ್ಯಾಣ ಕರ್ನಾಟಕದಲ್ಲಿ ಮಾತ್ರವಲ್ಲ, ಇಡೀ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಬ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.

ಅಭ್ಯರ್ಥಿಗಳ ವರ್ಚಸ್ಸು ಮತ್ತು ಗೆಲ್ಲುವ ಸಾಧ್ಯತೆಯನ್ನು ಗಮನದಲ್ಲಿಟ್ಟಕೊಂಡು ಪಕ್ಷದ ಟಿಕೆಟ್ ನೀಡಲಾಗುವುದು. ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದ ಅವರು, ಕೆಆರ್​ಪಿಪಿ ಅಭ್ಯರ್ಥಿಗಳು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಮುಂದಿನ ಕೆಲವೇ ದಿನಗಳಲ್ಲಿ ನಮ್ಮ ಅಭ್ಯರ್ಥಿಗಳು ಎಲ್ಲೆಲ್ಲಿ ಗೆಲ್ಲಬಹುದು ಎನ್ನುವುದನ್ನು ಪರಿಗಣನೆಗೆ ತೆಗೆದುಕೊಂಡು 40 ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದೇವೆ. ನಮ್ಮ ಉದ್ದೇಶ ಚುನಾವಣೆಯಲ್ಲಿ ಬೇರೆ ಪಕ್ಷಗಳನ್ನು ಸೋಲಿಸುವುದಲ್ಲ, ನಮ್ಮ ಅಭ್ಯರ್ಥಿಗಳನ್ನು ಗೆಲುವಿನ ದಡ ಸೇರಿಸುವುದಾಗಿದೆ. ಈಗಾಗಲೇ ರಾಜ್ಯದ 30ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಸಮೀಕ್ಷೆ ಮಾಡಿಸುತ್ತಿದ್ದೇವೆ. ಸಮೀಕ್ಷೆ ಫಲಿತಾಂಶ ನೋಡಿಕೊಂಡು ಟಿಕೆಟ್ ಘೋಷಣೆ ಮಾಡಲಿದ್ದೇವೆ ಎಂದರು.

English summary
Karnataka Assembly Elections: Gali Janardhana Reddy visits Ajmer Sharif Dargah in Rajasthan ahead of Karnataka Assembly Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X