ಭಾರತದ ರಾಜಕೀಯದಲ್ಲಿ ಗಾಂಧಿ ಕುಟುಂಬ ಅತ್ಯಂತ ಭ್ರಷ್ಟ ಕುಟುಂಬ
ನವದೆಹಲಿ, ಡಿಸೆಂಬರ್ 27: ಗಾಂಧಿ ಕುಟುಂಬವನ್ನು ಬಿಜೆಪಿ ಕಡು ಪಾಪಿ ಕುಟುಂಬ ಮತ್ತು ಭಾರತೀಯ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ ಎಂದು ಬಿಜೆಪಿ ಕರೆದಿದೆ.
ರಾಜಸ್ಥಾನ ಹೈಕೋರ್ಟ್ ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ರದ್ದುಗೊಳಿಸುವಂತೆ ರಾಬರ್ಟ್ ವಾದ್ರಾ ಮನವಿ ಮಾಡಿರುವ ಬೆನ್ನಲ್ಲೇ ಬಿಜೆಪಿ ಈ ಟೀಕೆ ಮಾಡಿದೆ.
ಹರಿಯಾಣ ಮತ್ತು ರಾಜಸ್ಥಾನದಲ್ಲಿ ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ರಾಹುಲ್ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳ ಬಗ್ಗೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಮೌನ ಮುರಿದು ಮಾತನಾಡಬೇಕು ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

ವಾದ್ರಾ ವಿರುದ್ಧದ ಭ್ರಷ್ಟಾಚಾರ ಆರೋಪಗಳು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಆಗಾಗ್ಗೆ ಹೇಳುತ್ತಿದೆ. ಆದರೆ ರಾಬರ್ಟ್ ವಾದ್ರಾ ಮತ್ತು ಅವರ ತಾಯಿಯೊಂದಿಗೆ ನಂಟು ಹೊಂದಿರುವ ಕಂಪನಿಯು (ಸ್ಕೈಲೈಟ್ ಹಾಸ್ಪಿಟಾಲಿಟಿ) ಬಿಕಾನೆರ್‌ನಲ್ಲಿ ಭೂಮಿ ಖರೀದಿಸಿದ ಬಗ್ಗೆ ಜಾರಿ ನಿರ್ದೇಶನಾಲಯದ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ಕಳೆದ ವಾರ ತಿರಸ್ಕರಿಸಿತ್ತು.
ಇದು ಭಾರತದ ಕಟ್ಟರ್ ಪಾಪಿ ಪರಿವಾರ. ಭ್ರಷ್ಟಾಚಾರ ಮಾಡಿ ರಾಬರ್ಟ್ ವಾದ್ರಾಗೆ ಭೂಮಿಯನ್ನು ಹಸ್ತಾಂತರಿಸುವುದೊಂದೇ ಇದರ ಕೆಲಸವಾಗಿದೆ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಆರೋಪಿಸಿದ್ದಾರೆ. ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ರದ್ದುಗೊಳಿಸುವಂತೆ ರಾಬರ್ಟ್ ವಾದ್ರಾ ಸಲ್ಲಿಸಿದ್ದ ಮನವಿಯನ್ನು ರಾಜಸ್ಥಾನ ಹೈಕೋರ್ಟ್ ತಿರಸ್ಕರಿಸಿದ್ದನ್ನು ಉಲ್ಲೇಖಿಸಿ ಬಿಜೆಪಿ ಇಂದು ಗಾಂಧಿ ಕುಟುಂಬವನ್ನು ಕಟ್ಟರ್ ಪಾಪಿ ಪರಿವಾರ ಮತ್ತು ಭಾರತದ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ ಎಂದು ಕರೆದಿದೆ.
ಭಾರತೀಯ ರಾಜಕೀಯದಲ್ಲಿ ಅವರದು ಅತ್ಯಂತ ಭ್ರಷ್ಟ ಕುಟುಂಬವಾಗಿದೆ. ಕುಟುಂಬದ ಮೂವರು ಸದಸ್ಯರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಹೊಂದಿರುವ ಕೇಂದ್ರ ಸರ್ಕಾರಕ್ಕೆ ಇದು ಗಂಭೀರವಾದ ಕಳವಳಕಾರಿ ಸಂಗತಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ವಿರುದ್ಧವೂ ಆವರು ಹರಿಹಾಯ್ದರು.












Click it and Unblock the Notifications