ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಮನನೊಂದು ಆತ್ಮಹತ್ಯೆ

ಮಧ್ಯಪ್ರದೇಶ, ಜು.21: ಅಪ್ರಾಪ್ತ ಬಾಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮನನೊಂದು ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಸಾಗರದಲ್ಲಿ ಶುಕ್ರವಾರ ನಡೆದಿದೆ.

ಮೂವರು ವ್ಯಕ್ತಿಗಳಿಂದ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾಗಿದ್ದಳು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣಳ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕಳವಳ ವ್ಯಕ್ತಪಡಿಸಿದ್ದು, ಇದಕ್ಕೂ ಮುನ್ನ ಅತ್ಯಾಚಾರ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಸ್ಥಾಪಿಸುವಂತೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರಿಗೆ ಮನವಿ ಮಾಡಿದ್ದಾರೆ.

Gang raped girl commit suicide in Madhyapradesh

ಅತ್ಯಾಚಾರ ಪ್ರಕರಣಗಳ ಸಂದರ್ಭದಲ್ಲಿ ಅವುಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ. ಈ ಕುರಿತಾಗಿ ಮಧ್ಯಪ್ರದೇಶದ ವಿಧಾನಸಭೆಯು ಕಳೆದ ವರ್ಷ ಡಿಸೆಂಬರ್‌ನಲ್ಲಿ 12 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಮಸೂದೆ ಅನುಮೋದಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+