Get Updates
Get notified of breaking news, exclusive insights, and must-see stories!

BMC Elections: ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ ಭರ್ಜರಿ ಗೆಲುವು

ಮುಂಬೈ: ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಶ್ರೀಕಾಂತ್ ಪಂಗಾರ್ಕರ್ ಅವರು ಬೃಹನ್ ಮುಂಬೈ ಮಹಾನಗರ ಪಾಲಿಕೆ 2026 ಜಲ್ನಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಬಹುಮತಗಳಿಂದ ಇತರ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸಿ ಜಲ್ನಾ ದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾರೆ. ಫಲಿತಾಂಶ ಹೊರ ಬೀಳುತ್ತಿದ್ದಂತೆ ತಮ್ಮ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.

ಮಹಾರಾಷ್ಟ್ರದ ಬಿಎಂಸಿ ಚುನಾವಣೆ ಫಲಿತಾಂಶವು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಜಲ್ನಾದಲ್ಲಿ ಗೆದ್ದಿರುವ ಈ ಶ್ರೀಕಾಂತ್ ಅವರು 2017 ರಲ್ಲಿ ಕರ್ನಾಟಕದ ಬೆಂಗಳೂರಿನ ಆರ್‌ಆರ್. ನಗರದಲ್ಲಿ ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಯಾಗಿದ್ದರು. ಅವರು ಜಲ್ನಾದಲ್ಲಿ ಬಿಜೆಪಿ ಹಾಗೂ ಇತರ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸಿದರು. ಒಟ್ಟು 2,621 ಮತಗಳ ಅಂತರದಿಂದ ಗೆದ್ದು ಬೀಗಿದರು.

Gauri Lankesh Case Accused Shrikant Pangarkar Wins Jalna Civic Election as Independent

ಶ್ರೀಕಾಂತ್ ಅವರಿದ್ದ ವಾರ್ಡ್‌ನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ ಸ್ಪರ್ಧೆಯು ಸ್ವತಂತ್ರರು ಮತ್ತು ಪ್ರತಿಸ್ಪರ್ಧಿ ಪಕ್ಷಗಳ ಅಭ್ಯರ್ಥಿಗಳ ನಡುವೆ ನಡೆಯಿತು. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣವು ವಿಚಾರಣೆಯಲ್ಲಿದ್ದಾಗಲೂ ಶ್ರೀಕಾಂತ್ ಪಂಗಾರ್ಕರ್ ಅವರು ಬಿಎಂಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಗಮನ ಸೆಳೆಯಿತು.

2017 ರಂದು ಕರ್ನಾಟಕದ ಬೆಂಗಳೂರಿನಲ್ಲಿ ಅವರ ಮನೆಯ ಹೊರಗೆ ಪತ್ರಕರ್ತೆ ಮತ್ತು ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ತೆ ಮಾಡಲಾಗಿತ್ತು. ಈ ಹತ್ಯೆಯು ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಘಿದೆ. ಭಿನ್ನಾಭಿಪ್ರಾಯ ಮತ್ತು ರಾಜಕೀಯ ಅಸಹಿಷ್ಣುತೆಯ ಬಗ್ಗೆ ಚರ್ಚೆಗಳು ಭುಗಿಲೆದ್ದವು. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿದ್ದರು. ಶ್ರೀಕಾಂತ್ ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಯಿತು. ಅವರಿಗೆ ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು.

ವಿಜೇತ ಶ್ರೀಕಾಂತ್ ಪಂಗಾರ್ಕರ್ ಅವರು ಇದೇ ಜಲ್ನಾ ಪುರಸಭೆಯಲ್ಲಿ ಕಾರ್ಪೊರೇಟರ್ ಆಗಿ 2001 ಮತ್ತು 2006 ರ ನಡುವೆ ಕೆಲಸ ಮಾಡಿದ್ದರು. ಅವರು ಅವಿಭಜಿತ ಶಿವಸೇನೆಯಿಂದ ಆಯ್ಕೆ ಆಗಿದ್ದರು. ಅವರಿಗೆ 2011 ರಲ್ಲಿ ಟಿಕೆಟ್ ನಿರಾಕರಿಸಿದ ನಂತರ, ಅವರು ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದರು. 2018ರಲ್ಲಿ ಕಚ್ಚಾ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಅವರನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು. ಗೌರಿ ಹತ್ಯೆ ಪ್ರಕರಣ ಪ್ರಮುಖ ಆರೋಪಿಯು ಅವರಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+