Gautam Gambhir: ಪಾಲಿಟಿಕ್ಸ್‌ನಿಂದ ಗೌತಮ್ ಗಂಭೀರ್ ಔಟ್, ಬಿಜೆಪಿಯಿಂದ ಹೊರಬರಲು ನಿರ್ಧಾರ
ನವದೆಹಲಿ, ಮಾರ್ಚ್, 02: ಇದೀಗ ದೇಶದೆಲ್ಲೆಡೆ ಲೋಕಸಭೆ ಚುನಾವಣೆ ಗೆಲ್ಲಲ್ಲು ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಅದರಲ್ಲೂ ಬಿಜೆಪಿ-ಕಾಂಗ್ರೆಸ್ ನಡುವೆ ಪ್ರಚಾರದ ವಿಚಾರದಲ್ಲು ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆಯೇ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ತಮ್ಮ ಟ್ವೀಟ್ ಮೂಲಕ ತಿಳಿಸಿದ್ದಾರೆ. ಹಾಗಾದರೆ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
I have requested Hon’ble Party President @JPNadda ji to relieve me of my political duties so that I can focus on my upcoming cricket commitments. I sincerely thank Hon’ble PM @narendramodi ji and Hon’ble HM @AmitShah ji for giving me the opportunity to serve the people. Jai Hind!
— Gautam Gambhir (@GautamGambhir) March 2, 2024
ಪೂರ್ವ ನದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ಗಂಭೀರ್ ಅವರು ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರೊಂದಿಗೆ ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಗಾದರೆ ತಮ್ಮ ರಾಜಕೀನ ನಿವೃತ್ತಿ ಬಗ್ಗೆ ಯಾರಿಗೆಲ್ಲ ತಿಳಿಸಿದ್ದಾರೆ ಎಂದು ಇಲ್ಲಿ ತಿಳಿಯಿರಿ.

ಗೌತಮ್ ಗಂಭೀರ್ ಅವರು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಉತ್ಸಾಹದಿಂದ ಆಡಿದ ಕ್ರೀಡೆಯತ್ತ ಮತ್ತೆ ತಮ್ಮ ಗಮನವನ್ನು ಹರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಅಗತ್ಯವನ್ನು ಉಲ್ಲೇಖಿಸಿ ಅವರು ತಮ್ಮ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೇನೆಲ್ಲ ಹೇಳಿದ್ದಾರೆ ಗೊತ್ತಾ?
"ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಜೈ. ಹಿಂದ್," ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರಾಜಕೀಯ ಜೀವನ: ಇನ್ನು ಗೌತಮ್ ಗಂಭೀರ್ ಅವರು, ಮಾರ್ಚ್ 2019ರಲ್ಲಿ ಬಿಜೆಪಿಗೆ ಸೇರಿದ್ದು, ಅಂದಿನಿಂದ ನವದೆಹಲಿಯಲ್ಲಿ ಪಕ್ಷದ ಪ್ರಮುಖರಾಗಿದ್ದಾರೆ. ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿ ಸ್ಥಾನಕ್ಕೆ ಸ್ಪರ್ಧಿಸಿ 6,95,109 ಮತಗಳ ಗಣನೀಯ ಅಂತರದಿಂದ ಗೆಲುವು ಸಾಧಿಸಿದ್ದರು. ಮೂಲಕಗಳ ಪ್ರಕಾರ ಮುಂಬರುವ 2024ರ ಚುನಾವಣೆಗೆ ಗಂಭೀರ್‌ಗೆ ಟಿಕೆಟ್ ಸಿಗುವುದಿಲ್ಲ ಎಂಬ ಮಾಹಿತಿಗಳ ನಡುವೆ ರಾಜಕೀಯ ತ್ಯಜಿಸುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications