GBA: ಜಿಬಿಎ ಚುನಾವಣೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೊಸ ಗಡುವು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ - ಐದು ಪಾಲಿಕೆಗಳ ಚುನಾವಣೆಯನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಈ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ - ಹಾಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ನಡೆಸಿ, ಸುದೀರ್ಘ ಆರು ವರ್ಷಗಳೇ ಕಳೆದಿವೆ. ಇದೀಗ ಬೆಂಗಳೂರು ಆಡಳಿತವನ್ನು ಜಿಬಿಎ - ಐದು ಪಾಲಿಕೆಗಳಾಗಿ ವಿಭಜನೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ಬೆಂಗಳೂರು ಪಾಲಿಕೆಗಳ ಚುನಾವಣೆಯನ್ನು ಮುಂದೂಡುತ್ತಲ್ಲೇ ಇತ್ತು. ಇದೀಗ ಜಿಬಿಎ ಚುನಾವಣೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೊಸ ಗಡುವು ನೀಡಿದೆ. ಬೆಂಗಳೂರಿನ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಆಗಸ್ಟ್ 31 ರವರೆಗೆ ಸುಪ್ರೀಂ ಕೋರ್ಟ್ ಬುಧವಾರ ಹೆಚ್ಚುವರಿ ಸಮಯ ನೀಡಿದೆ.
ರಾಜ್ಯ ಸರ್ಕಾರದ ಮತ್ತು ರಾಜ್ಯ ಚುನಾವಣಾ ಆಯೋಗ (SEC)ದ ಸಿಬ್ಬಂದಿ ಜನಗಣತಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತರಗತಿ ಪರೀಕ್ಷೆಗಳ ಕಾರ್ಯಗಳಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಮೂರು ತಿಂಗಳ ಹೆಚ್ಚುವರಿ ಅವಧಿ ನೀಡುವಂತೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಜೂನ್ 30ರೊಳಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ನಿರ್ದೇಶಿಸಿದ್ದ ಸುಪ್ರೀಂ ಕೋರ್ಟ್‌ನ ಜನವರಿ 12ರ ಆದೇಶವನ್ನು ತಿದ್ದುಪಡಿ ಮಾಡುವಂತೆ ಅಥವಾ ವಿಸ್ತರಿಸುವಂತೆ ಮನವಿ ಮಾಡಲಾಗಿತ್ತು.

ಜನವರಿ 12 ರಂದು, ಗ್ರೇಟರ್ ಬೆಂಗಳೂರು ಪ್ರದೇಶದ ಐದು ಪಾಲಿಕೆಗಳ ಚುನಾವಣೆಯನ್ನು ಜೂನ್ 30ರ ಒಳಗೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅವಧಿ ಸೆಪ್ಟೆಂಬರ್ 10, 2020 ರಂದು ಮುಕ್ತಾಯವಾಗಿತ್ತು.












Click it and Unblock the Notifications