15 ದಿನದಲ್ಲಿ ಗುಲಾಂ ನಬಿ ಅಜಾದ್‌ರಿಂದ ಹೊಸ ಪಕ್ಷ, ಮೊದಲ ಘಟಕ ಎಲ್ಲಿ ಗೊತ್ತಾ?
ನವದೆಹಲಿ, ಆಗಸ್ಟ್ 27: ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ತಮ್ಮದೇ ಆದ ಪಕ್ಷವನ್ನು ಪ್ರಾರಂಭಿಸಲು ಸಿದ್ಧರಾಗಿದ್ದು, ಅದರ ಮೊದಲ ಘಟಕವು ಹದಿನೈದು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅವರ ನಿಕಟವರ್ತಿ ಜಿಎಂ ಸರೂರಿ ಹೇಳಿದ್ದಾರೆ.
ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ಮೂಲ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾದ ಮಾಜಿ ಸಚಿವ ಸರೂರಿ ಅವರು ತಮ್ಮ ನಾಯಕ ಸೈದ್ಧಾಂತಿಕವಾಗಿ ಜಾತ್ಯತೀತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ 2019 ರ ಆಗಸ್ಟ್ 5ರ ಪೂರ್ವದ ಸ್ಥಿತಿಯನ್ನು ಮರುಸ್ಥಾಪಿಸುವುದು ಪಕ್ಷದ ಪ್ರಣಾಳಿಕೆಯ ಭಾಗವಾಗಿರುತ್ತದೆ. ಅವರು ಬಿಜೆಪಿ ಅವರ ಆಜ್ಞೆಯ ಮೇರೆಗೆ ಕೆಲಸ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಗುಲಾಂ ನಬಿ ಆಜಾದ್ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ನೊಂದಿಗೆ ಐದು ದಶಕಗಳ ಕಾಲದ ಸಂಬಂಧವನ್ನು ಕೊನೆಗೊಳಿಸಿದ ನಂತರ ನೂರಾರು ಹಿರಿಯ ಕಾಂಗ್ರೆಸ್ ನಾಯಕರು, ಪಂಚಾಯತ್ ರಾಜ್ ಸಂಸ್ಥೆಯ ಸದಸ್ಯರು ಮತ್ತು ಪ್ರಮುಖ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ನಮ್ಮ ಹೊಸ ಪಕ್ಷವನ್ನು ಪ್ರಾರಂಭಿಸುವ ಮೊದಲು ತಮ್ಮ ಹಿತೈಷಿಗಳೊಂದಿಗೆ ಸಮಾಲೋಚನೆ ನಡೆಸಲು ಆಜಾದ್ ಸೆಪ್ಟೆಂಬರ್ 4 ರಂದು ಜಮ್ಮುವಿಗೆ ಬರುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಜಮ್ಮು ಮತ್ತು ಕಾಶ್ಮೀರ ಘಟಕದ ಮಾಜಿ ಉಪಾಧ್ಯಕ್ಷರೂ ಆಗಿರುವ ಸರೂರಿ ತಿಳಿಸಿದ್ದಾರೆ.
ಶುಕ್ರವಾರ ರಾಜೀನಾಮೆ ನೀಡಿದ ನಂತರ ಆಜಾದ್ ಅವರು ಶೀಘ್ರದಲ್ಲೇ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಮತ್ತು ಅದರ ಮೊದಲ ಘಟಕವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಾಪಿಸಲಾಗುವುದು ಎನ್ನಲಾಗಿತ್ತು. ಬಳಿಕ ಆಜಾದ್ ನಾನು ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸಲು ಸದ್ಯಕ್ಕೆ ಯಾವುದೇ ಚಿಂತನೆ ಇಲ್ಲ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವ ಚುನಾವಣೆ ಗಮನದಲ್ಲಿಟ್ಟುಕೊಂಡು ಶೀಘ್ರದಲ್ಲೇ ಅಲ್ಲಿ ಪಕ್ಷದ ಘಟಕವನ್ನು ಪ್ರಾರಂಭಿಸಲು ನಾನು ನಿರ್ಧರಿಸಿದ್ದೇನೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ತಮ್ಮ ಬೆಂಬಲವನ್ನು ನೀಡಲು ಹಲವಾರು ಮಾಜಿ ಶಾಸಕರೊಂದಿಗೆ ಶುಕ್ರವಾರ ಆಜಾದ್ ಅವರನ್ನು ಭೇಟಿಯಾದ ಸರೂರಿ, ಅಜಾದ್ ಮುಂದಿನ ಹದಿನೈದು ದಿನಗಳಲ್ಲಿ ಸ್ವಂತ ಪಕ್ಷದ ಪ್ರಾರಂಭವನ್ನು ಘೋಷಿಸಲಿದ್ದಾರೆ. ಅವರು ಮುಖ್ಯಮಂತ್ರಿಯಾಗಿ (ನವೆಂಬರ್ 2, 2005 ರಿಂದ ಜುಲೈ 11, 2008 ರವರೆಗೆ) ಸೇವೆ ಸಲ್ಲಿಸಿದ ಜಮ್ಮು ಮತ್ತು ಕಾಶ್ಮೀರಕ್ಕೆ ಹಿಂದಿರುಗುತ್ತಿದ್ದಾರೆ ಎಂದು ನಮಗೆ ಸಂತೋಷವಾಗಿದೆ. ಜನರು ಅವರ ಆಡಳಿತವನ್ನು ಸುವರ್ಣ ಯುಗವೆಂದು ನೋಡುತ್ತಾರೆ. ಅವರ ಬೆಂಬಲದ ನೆಲೆಯು ಜಮ್ಮು ಮತ್ತು ಕಾಶ್ಮೀರದಾದ್ಯಂತ ಹರಡಿದೆ ಎಂದರು.
ಹೊಸ ಪಕ್ಷವು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಹಾಗೂ ಸಮಾಜದ ಎಲ್ಲಾ ವರ್ಗಗಳ ನಡುವೆ ಒಗ್ಗಟ್ಟನ್ನು ಕೇಂದ್ರೀಕರಿಸುತ್ತದೆ ಮತ್ತು ಆಗಸ್ಟ್ 5, 2019 ರ ಹಿಂದಿನ ಸ್ಥಾನವನ್ನು ಮರುಸ್ಥಾಪಿಸಲು ಹೋರಾಡುತ್ತದೆ. ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರವು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.

ಕಾಂಗ್ರೆಸ್‌ಗೆ ನೂರಾರು ರಾಜೀನಾಮೆ ಪತ್ರ
ಆಜಾದ್ ಅವರ ನಿರ್ಗಮನದೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಬಹುತೇಕ ಕೊನೆಗೊಂಡಿದೆ. ಗುಲಾಂ ನಬಿ ಆಜಾದ್ ಅವರನ್ನು ಭೇಟಿ ಮಾಡಲು ಜಮ್ಮು ಮತ್ತು ಕಾಶ್ಮೀರದಿಂದ ನಾಯಕರು ತಮ್ಮ ಬೆಂಬಲವನ್ನು ನೀಡಲು ಬರುತ್ತಿದ್ದಾರೆ. ಜಿಲ್ಲಾ ಮತ್ತು ಬ್ಲಾಕ್ ಡೆವಲಪ್‌ಮೆಂಟ್ ಕೌನ್ಸಿಲ್ ಸದಸ್ಯರು ಮತ್ತು ಹಲವಾರು ಪುರಸಭೆಯ ಕಾರ್ಪೊರೇಟರ್‌ಗಳು ಸೇರಿದಂತೆ ಪಿಆರ್‌ಐ ಸದಸ್ಯರು ಕಾಂಗ್ರೆಸ್‌ಗೆ ಸಲ್ಲಿಸಲು ಹಿಡಿದಿರುವ ನೂರಾರು ರಾಜೀನಾಮೆ ಪತ್ರಗಳನ್ನು ನಾವು ನೋಡಿದ್ದೇವೆ ಎಂದು ಅವರು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ತಾರಾಚಂದ್ ಭೇಟಿ
ಹಲವಾರು ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ ಹನ್ನೆರಡು ನಾಯಕರು ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್‌ನ ಮೂಲ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಅವರಂತಹ ಅನೇಕರು ಇಂದು ನವದೆಹಲಿಯಲ್ಲಿ ಆಜಾದ್ ಅವರನ್ನು ಭೇಟಿಯಾದ ನಂತರ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ನೆಲದ ವಾಸ್ತವಗಳಿಗೆ ವಿರುದ್ಧವಾಗಿದ್ದಾರೆ
ರಾಜೀನಾಮೆ ನೀಡಿದ ನಂತರ ಆಜಾದ್ ಅವರು ಬಿಜೆಪಿಯೊಂದಿಗೆ ಸಹಭಾಗಿತ್ವ ಹೊಂದಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಹೇಳಿಕೆಯನ್ನು ಉಲ್ಲೇಖಿಸಿ ಸರೂರಿ, ಅಜಾದ್ ಅವರನ್ನು ಟೀಕಿಸುವವರು ಈ ನೆಲದ ವಾಸ್ತವಗಳಿಗೆ ವಿರುದ್ಧವಾಗಿದ್ದಾರೆ. ಅಲ್ಲದೆ ಅವರ ಪಾದದ ಕೆಳಗಿನ ಭೂಮಿ ಜಾರಿಬೀಳುವುದನ್ನು ಕಂಡುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಪಕ್ಷಕ್ಕೆ ನಾವೆಲ್ಲರೂ ನಮ್ಮ ರಕ್ತ ಮತ್ತು ಬೆವರು ನೀಡಿದ್ದೇವೆ
ಅವರು ಕಳೆದ ಐದು ದಶಕಗಳಲ್ಲಿ ಕಾಂಗ್ರೆಸ್ ಅನ್ನು ಬಲಪಡಿಸಲು ಶ್ರಮಿಸಿದ ಜಾತ್ಯತೀತ ನಾಯಕ. ವಾಸ್ತವವಾಗಿ ಕಾಂಗ್ರೆಸ್ ಪಕ್ಷಕ್ಕೆ ನಾವೆಲ್ಲರೂ ನಮ್ಮ ರಕ್ತ ಮತ್ತು ಬೆವರು ನೀಡಿದ್ದೇವೆ. ಆದರೆ ಅಂತಹ ದೊಡ್ಡ ನಾಯಕ ಅಜಾದ್ ಅವರನ್ನು ಅವಮಾನಿಸುವ ಪಕ್ಷದಲ್ಲಿ ನೀವು ಹೇಗೆ ಇರಲಾಗುತ್ತದೆ. ಇಂತಹ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡರು,
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications