ಬಾಲಕಿ ಮೇಲೆ ಅತ್ಯಾಚಾರವೆಸಗಿ, ಸುಟ್ಟ ದುಷ್ಕರ್ಮಿಗಳು

rape
ಲಕ್ನೋ, ಅ, 24 : ಉತ್ತರ ಪ್ರದೇಶದಲ್ಲಿ ಮೂವರು ಕಾಮುಕರು ಪೈಶಾಚಿಕ ಕೃತ್ಯ ಎಸಗಿದ್ದಾರೆ. ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯನ್ನು ಸುಟ್ಟು ಹಾಕಿದ್ದಾರೆ. ಶೇ 80 ರಷ್ಟು ಸುಟ್ಟಗಾಯಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ, ಬಾಲಕಿ ಸಾವನ್ನಪ್ಪಿದ್ದಾಳೆ.

ಉತ್ತರ ಪ್ರದೇಶದ ಜಲೂನ್ ಜಿಲ್ಲೆಯ ಓರಾಯ್ ಪ್ರದೇಶದ ನಿವಾಸಿಯಾಗಿದ್ದ ಬಾಲಕಿ 8ನೇತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಸಹೋದರಿಯೊಂದಿಗೆ ಬಾಲಕಿ ಮಂಗಳವಾರ ರಾತ್ರಿ ಹೊಲಕ್ಕೆ ತೆರಳಿ ವಾಪಾಸುತ್ತಿದ್ದಾಗ ಈ ಘಟನೆ ನಡೆದಿದೆ.

ಗ್ರಾಮದ ರಾಮ್ ಬಹದ್ದೂರ್ ಎಂಬ ಯುವಕ ಬಾಲಕಿಯನ್ನು ಅಪಹರಿಸಿ, ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿ ಕುಟುಂಬದವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅತ್ಯಾಚಾರದ ವಿಷಯ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಆದರೆ, ಬಾಲಕಿ ಮತ್ತು ಆಕೆಯ ಸಹೋದರಿ ಕುಟುಂಬದವರಿಗೆ ವಿಷಯ ತಿಳಿಸುತ್ತೇವೆ ಎಂದಾಗ, ರಾಮ್ ಬಹದ್ದೂರ್ ಮತ್ತು ಆತನ ಸ್ನೇಹಿತರು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಸಹೋದರಿ ಗ್ರಾಮಕ್ಕೆ ತೆರಳಿ ಕುಟುಂಬದವರಿಗೆ ವಿಷಯ ತಿಳಿಸಿ, ಅವರು ಸ್ಥಳಕ್ಕೆ ಆಗಮಿಸುವ ವೇಳೆಗೆ ಬಾಲಕಿ ಶೇ 80ರಷ್ಟು ಸುಟ್ಟು ಹೋಗಿದ್ದಳು.

ತಕ್ಷಣ ಆಕೆಯನ್ನು ಪೋಷಕರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ, ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾಳೆ. ಕುಟುಂಬದವರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+