ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಪಾಕಿಸ್ತಾನಕ್ಕಿಂತಲೂ ಕೆಳಗಿದೆ ಭಾರತ

|
Google Oneindia Kannada News

ನವದೆಹಲಿ, ಅಕ್ಟೋಬರ್ 17: ಈ ಬಾರಿ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು ನೇಪಾಳ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಕೆಳಸ್ಥಾನದಲ್ಲಿದೆ.

ಕೊವಿಡ್ -19 ಸಾಂಕ್ರಾಮಿಕವು ಅನೇಕರ ಆಹಾರ ಮತ್ತು ಪೌಷ್ಠಿಕಾಂಶದ ಸುರಕ್ಷತೆಯನ್ನು ದುರ್ಬಲಗೊಳಿಸಿದೆ ಮತ್ತು ಇದರ ಪರಿಣಾಮಗಳು ಭವಿಷ್ಯದಲ್ಲಿ ಏರಿಳಿತ ಉಂಟುಮಾಡಬಹುದೆಂದು ಎಂದು ವರದಿ ತಿಳಿಸಿದೆ.

ಎಫ್‌ಎಒದ 75ನೇ ವಾರ್ಷಿಕೋತ್ಸವ: 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಮೋದಿ ಎಫ್‌ಎಒದ 75ನೇ ವಾರ್ಷಿಕೋತ್ಸವ: 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಮೋದಿ

107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94ನೇ ಸ್ಥಾನದಲ್ಲಿದೆ.ಆದರೆ, ನೆರೆಯ ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನಕ್ಕಿಂಲೂ ಭಾರತ ಕೆಳಸ್ಥಾನದಲ್ಲಿದೆ.

Global Hunger Index 2020: India Ranks 94 Out Of 107 Countries

ವಿಶ್ವದಾದ್ಯಂತ ಹಸಿವಿನ ಮಟ್ಟ ಮತ್ತು ಅಪೌಷ್ಟಿಕತೆ ಲೆಕ್ಕಹಾಕುವ ಸೂಚ್ಯಂಕವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ನೇಪಾಳ ಮತ್ತು ಬಾಂಗ್ಲಾದೇಶ ಕ್ರಮವಾಗಿ 73 ಮತ್ತು 75 ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ 88 ನೇ ಸ್ಥಾನದಲ್ಲಿದೆ.

ವೆಲ್ತುಂಗರ್ಹಿಲ್ಫ್ ಮತ್ತು ಕನ್ಸರ್ನ್ ವರ್ಲ್ಡ್ ವೈಡ್ ಜಂಟಿಯಾಗಿ ಬಿಡುಗಡೆ ಮಾಡಿರುವ ವರದಿ ಪ್ರಕಾರ ಭಾರತ ಹಸಿವಿನ ಮಟ್ಟ 27.2 ರೊಂದಿಗೆ ಗಂಭೀರವಾಗಿದೆ.

ವರದಿಯು ವಸ್ತುಸ್ಥಿತಿಯನ್ನು ತೋರಿಸುತ್ತಿದೆ, ದೇಶದಲ್ಲಿನ ಹಸಿವಿನ ಮಟ್ಟವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಹಾರ ಭದ್ರತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹೋರಾಟಗಾರರು ಕೂಗಿ ಹೇಳಿದ್ದಾರೆ.

English summary
Former US president Barack Obama will campaign for Democratic party presidential candidate Joe Biden in Pennsylvania next week, the Biden campaign has said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X