ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಮನೋಹರ್ ಪರಿಕ್ಕರ್
ಗೋವಾ, ಫೆಬ್ರವರಿ 26: ಕಳೆದ ಗುರುವಾರ(ಫೆ.22) ದಂದು ಮುಂಬೈಯ ಲೀಲಾವತಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ, ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿನ್ನೆ(ಫೆ.25)ರ ಸಂಜೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಿಬ್ಬೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ನಿನ್ನೆ ರಾತ್ರಿ ಗೋವಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. 'ಅವರು ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ, ಮತ್ತು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ' ಎಂದು ವೈದ್ಯರು ತಿಳಿಸಿದ್ದಾರೆ.
#Goa Chief Minister Manohar Parrikar re-admitted to GMC hospital with complaints of dehydration & blood pressure; he was discharged from a Mumbai Hospital on Thursday (File pic) pic.twitter.com/c5NBJ4jnLG
— ANI (@ANI) February 25, 2018
62 ವರ್ಷದ ಪರಿಕ್ಕರ್ ಫೆ.15 ರಂದು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಪ್ಯಾನ್ಕ್ರಿಯಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಕುರಿತು ಯಾವುದೇ ನಿಖರ ಮಾಹಿತಿ ಲಭ್ಯವಿಲ್ಲ.











Click it and Unblock the Notifications