Get Updates
Get notified of breaking news, exclusive insights, and must-see stories!

Goa Fire Tragedy: ಧಗಧಗಿಸಿದ ಗೋವಾದ ನೈಟ್ ಕ್ಲಬ್‌: ಭೀಕರ ಅಗ್ನಿ ದುರಂತದಲ್ಲಿ 23 ಜನ ಸಾವು

Goa Fire Tragedy: ಗೋವಾದ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾದ್ರೆ ದುರಂತ ಸಂಭವಿಸಿದ್ದು ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈ ಘಟನೆ ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲನ್‌ನಲ್ಲಿ ಘಟನೆ ನಡೆದಿದೆ. ಶನಿವಾರ (ಡಿಸೆಂಬರ್ 6) ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್‌ ಕ್ಲಬ್‌ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

Goa Nightclub Fire Tragedy Cylinder Blast Claims 23 Lives in Arpora

ಕ್ಲಬ್‌ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕ್ಲಬ್ ಸಿಬ್ಬಂದಿ, ಅಲ್ಲಿ ಉಳಿದುಕೊಂಡಿದ್ದ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಸಿಲಿಂಡರ್ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಭಾನುವಾರ ಬೆಳಗಿನ ಜಾವದವರೆಗೂ ಈ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಅಷ್ಟರ ಮಟ್ಟಿಗೆ ಬೆಂಕಿ ಆವರಿಸಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಲ್ಲಿ ಕಟ್ಟಡದಿಂದ ದಟ್ಟ ಹೊಗೆ ಆವರಿಸಿದೆ. ರಕ್ಷಣಾ ಸಿಬ್ಬಂದಿಯು ಗಾಯಗೊಂಡವರನ್ನು ತುರ್ತು ವಾಹನಗಳಿಗೆ ಸಾಗಿಸುತ್ತಿರುವುದನ್ನು ಸಹ ಇದರಲ್ಲಿ ಕಾಣಬಹುದಾಗಿದೆ. ಮೃತರಲ್ಲಿ ಹೆಚ್ಚಿನವರು ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

ಹೆಚ್ಚಿನ ಶವಗಳು ನೆಲ ಮಹಡಿಯಲ್ಲಿರುವ ಅಡುಗೆಮನೆಲ್ಲಿ ಪತ್ತೆಯಾಗಿವೆ. ಮೆಟ್ಟಿಲುಗಳ ಮೇಲೆ ಇನ್ನೂ ಎರಡು ಶವಗಳು ಪತ್ತೆ ಆಗಿವೆ. ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಸಂಭವಿಸಿದೆ ಎಂದು ಗೋವಾ ಡಿಜಿಪಿ ಅಲೋಕ್ ಕುಮಾರ್ ದೃಢಪಡಿಸಿದ್ದಾರೆ. ಇನ್ನೂ ಮೃತರಲ್ಲಿ ಹೆಚ್ಚಿನವರು ಅಡುಗೆ ಸಿಬ್ಬಂದಿಯ ಸದಸ್ಯರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಘಟನೆಯ ಸ್ಥಳಕ್ಕೆ ಭೇಟಿ ನೀಡಿದ ಅವರು, "ಮೃತರಲ್ಲಿ ಮೂರರಿಂದ ನಾಲ್ಕು ಪ್ರವಾಸಿಗರು ಕೂಡ ಇದ್ದಾರೆ. ಗೋವಾದಲ್ಲಿ ನಮಗೆಲ್ಲರಿಗೂ ತುಂಬಾ ನೋವಿನ ದಿನ ಇದು. ಇದಕ್ಕೆ ನಿಖರವಾದ ಕಾರಣವನ್ನು ತಿಳಿಯಲು ಅಗ್ನಿ ಸುರಕ್ಷತೆ ಮತ್ತು ಕಟ್ಟಡ ನಿಯಮಗಳನ್ನು ಪಾಲಿಸಲಾಗಿದೆಯೇ ಎಂದು ತನಿಖೆಗೆ ಆದೇಶಿಸಲಾಗಿದೆ. ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ," ಎಂದು ಹೇಳಿದ್ದಾರೆ.

"ಅರ್ಪೋರಾದಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ 23 ಜನರು ಸಾವನ್ನಪ್ಪಿದ್ದಾರೆ. ಊಹಿಸಲಾಗದ ನಷ್ಟದ ಈ ಗಂಟೆಯಲ್ಲಿ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ಎಲ್ಲಾ ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದೇನೆ. ಇದಕ್ಕೆ ನಿಖರವಾದ ಕಾರಣ ಮತ್ತು ಅಗ್ನಿ ಸುರಕ್ಷತಾ ನಿಯಮಗಳು ಮತ್ತು ಕಟ್ಟಡ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ತನಿಖೆಯು ಪರಿಶೀಲಿಸುತ್ತದೆ. ಹೊಣೆಗಾರರು ಕಂಡುಬಂದರೆ ಅವರ ವಿರುದ್ಧ ಸೂಕ್ತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು," ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+