ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಕ್ಕರ್ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ್ದ ವ್ಯಕ್ತಿ ಬಂಧನ

|
Google Oneindia Kannada News

ಪಣಜಿ, ಏಪ್ರಿಲ್ 19: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ್ದ ವ್ಯಕ್ತಿಯೊಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿರುವ ಮನೋಹರ್ ಪರಿಕ್ಕರ್ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿರುವ ಮನೋಹರ್ ಪರಿಕ್ಕರ್

ಪ್ಯಾನ್ ಕ್ರಿಯಾಟಿಕ್ ಸಮಸ್ಯೆಯಿಂದ ಸದ್ಯಕ್ಕೆ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪರಿಕ್ಕರ್ ಅವರ ಕುರಿತು ವ್ಯಕ್ತಿಯೊಬ್ಬರು ಸುಳ್ಳು ಸುದ್ದಿ ಹಬ್ಬಿಸಿದ್ದರು.

Goa Police Crime Branch arrested a man for spreading fake news on Parrikars health

ಫೆ.15 ರಂದು ಅನಾರೋಗ್ಯದ ಕಾರಣ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಮನೋಹರ್ ಪರಿಕ್ಕರ್ ಅವರನ್ನು ಫೆ.22 ರಂದು ಡಿಸ್ಚಾರ್ಜ್ ಮಾಡಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ನೇರವಾಗಿ ವಿಧಾನಸಭೆಗೆ ಆಗಮಿಸಿ ಪರಿಕ್ಕರ್ ಬಜೆಟ್ ಸಹ ಮಂಡಿಸಿದ್ದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಆದರೆ ಕೆಲ ದಿನಗಳಲ್ಲಿ ಮತ್ತೆ ಅನಾರೋಗ್ಯಕ್ಕೆ ತುತ್ತಾದ ಅವರು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದರು. ಈಗಲೂ ಅವರು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಕುರಿತು ಬಿಜೆಪಿ ಯಾವುದೇ ಸುದ್ದಿಯನ್ನೂ ನೀಡುತ್ತಿಲ್ಲ ಎಂದು ಕಾಂಗ್ರೆಸ್ಸಿಗರು ದೂರಿದ ಹಿನ್ನೆಲೆಯಲ್ಲಿ ಮೊನ್ನೆ ಬಿಜೆಪಿ ಪ್ರಕಟಣೆಯೊಂದನ್ನು ಹೊರಡಿಸಿ ಪರಿಕ್ಕರ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಿತ್ತು.

ಇಷ್ಟಾದರೂ ವ್ಯಕ್ತಿಯೊಬ್ಬ ಅವರ ಆರೋಗ್ಯದ ಬಗ್ಗೆ ಸುಳ್ಳುಸುದ್ದಿ ಹಬ್ಬಿದ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ.

English summary
Goa Police Crime Branch arrested a man for spreading fake news on the health condition of Chief Minister Manohar Parrikar, who is undergoing treatment in the United States.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X