ಗೋವಾದ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಜನ ಸಾವು- ಅನೇಕರಿಗೆ ಗಾಯ

ಪಣಜಿ ಮೇ 3: ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ ಭೀಕರ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಈ ಘಟನೆಯಲ್ಲಿ ಹಲವರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಕುಟುಂಬಸ್ಥರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಶಿರ್ಗಾವೊ ಗ್ರಾಮದ ಶ್ರೀ ಲೈರೈ ದೇವಿ ದೇವಸ್ಥಾನದಲ್ಲಿ ಇಂದು ಬೆಳಗಿನ ಜಾವ ಉತ್ಸವ ನಡೆದಿತ್ತು. ಈ ಉತ್ಸವಕ್ಕಾಗಿ ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಸಾವಿರಾರು ಭಕ್ತರು ದೇವಾಲಯದಲ್ಲಿ ಜಮಾಯಿಸಿದ್ದರು. ಏಕಾಏಕಿ ಜನ ಓಡಲು ಆರಂಭಿಸಿದ್ದರಿಂದ ಕಾಲ್ತುಳಿತ ಉಂಟಾಗಿದೆ. ಆದರೆ ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆಯ ನಂತರವಷ್ಟೇ ಕಾರಣ ಗೊತ್ತಾಗಲಿದೆ.

Goa s Lairai Devi temple Stamped Six killed many injured

ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಎಂಟು ಜನರ ಸ್ಥಿತಿ ಗಂಭೀರವಾಗಿದ್ದು ಇಬ್ಬರನ್ನು ಬಂಬೋಲಿಮ್‌ನ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಜನರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಪುಸಾದ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನೂ ಎಂಟು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, 10 ಜನರಿಗೆ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು.

ಇನ್ನೂ ಪರಿಸ್ಥಿತಿಯನ್ನು ನಿರ್ವಹಿಸಲು ಆರೋಗ್ಯ ಇಲಾಖೆ ತಕ್ಷಣದ ಕ್ರಮಗಳನ್ನು ತೆಗೆದುಕೊಂಡಿದೆ. ಘಟನೆಯ ನಂತರ 108 ಆಂಬ್ಯುಲೆನ್ಸ್ ಸೇವೆಗೆ ನಾವು ಕರೆ ಮಾಡಿದೆವು. ಐದು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಇನ್ನೂ ಮೂರು ಆಂಬ್ಯುಲೆನ್ಸ್‌ಗಳನ್ನು ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಯಲ್ಲಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದ್ದು ಸಮಗ್ರ ಆರೈಕೆಯನ್ನು ಒದಗಿಸಲು ವೆಂಟಿಲೇಟರ್‌ಗಳೊಂದಿಗೆ ಮೀಸಲಾದ ಐಸಿಯು ಅನ್ನು ಸ್ಥಾಪಿಸಲಾಗಿದೆ. ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು ನಾವು ಪ್ರತಿ ರೋಗಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ರಾಣೆ ಹೇಳಿದರು.

ಅಲ್ಲದೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+