• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗೋವಾ ಸಿಎಂ ಮನೋಹರ್ ಸ್ಥಾನಕ್ಕೆ ಮುರ್ನಾಲ್ಕು ಮಂದಿಯಿಂದ ಲಾಬಿ!

|

ಪಣಜಿ, ಅಕ್ಟೋಬರ್ 28: ಮುಖ್ಯಮಂತ್ರಿ ಮನೋಹರ್​ಪರಿಕ್ಕರ್​ಅವರು ಅನಾರೋಗ್ಯಪೀಡಿತರಾಗಿದ್ದು, ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಹೊಸಬರನ್ನು ಆ ಸ್ಥಾನಕ್ಕೆ ಕೂರಿಸಲು ಬಿಜೆಪಿ ಹೈಕಮಾಂಡ್ ಯೋಚಿಸುತ್ತಿದೆ ಎಂಬ ಸುದ್ದಿ ಕಳೆದ ಹದಿನೈದು ದಿನಗಳಿಂದ ಗಿರಕಿ ಹೊಡೆಯುತ್ತಲೇ ಇದೆ.

ಗೋವಾದಲ್ಲಿ ಮನೋಹರ್ ಪರಿಕ್ಕರ್ ನೇತೃತ್ವದ ಸರ್ಕಾರದ ಆಡಳಿತ ಯಂತ್ರ ಕುಸಿದಿದೆ ಎಂದು ಆರೋಪಿಸಿ, ಸರ್ಕಾರ ರಚನೆಗೆ ವಿಫಲ ಯತ್ನ ನಡೆಸಿದ್ದ ಕಾಂಗ್ರೆಸ್ಸಿಗೆ ಭಾರಿ ಮುಖಭಂಗವಾಗಿದೆ.

ಗೋವಾದಲ್ಲಿ ಕಾಂಗ್ರೆಸ್ ನಿರ್ನಾಮಕ್ಕೆ ಮುಂದಾದ ಬಿಜೆಪಿ

ಕಾಂಗ್ರೆಸ್ಸಿನಿಂದ ಇಬ್ಬರು ಶಾಸಕರನ್ನು ಬಿಜೆಪಿಗೆ ಸೇರಿದ ಬಳಿಕ ಕಾಂಗ್ರೆಸ್ ಬಲ ಸಂಪೂರ್ಣ ಕುಸಿದಿದೆ. ಆದರೆ, ಬಿಜೆಪಿ ಸರ್ಕಾರದ ಸಂಪುಟ ಪುನರ್ ರಚನೆ ಸರ್ಕಸ್ ಜೋರಾಗಿದ್ದು, ಮುಖ್ಯಮಂತ್ರಿ ಸ್ಥಾನವಲ್ಲದೆ ಹಲವು ಪ್ರಮುಖ ಖಾತೆಗಳ ಬದಲಾವಣೆಯಾಗಲಿದೆ.

ಮನೋಹರ್ ಪರಿಕ್ಕಾರ್ ಅವರು ವಿದೇಶಕ್ಕೆ ಚಿಕಿತ್ಸೆಗಾಗಿ ತೆರಳಿದ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಗೋವಾದಲ್ಲಿ ನಾಯಕತ್ವ ಬದಲಿ ಮಾಡಲು ಚರ್ಚೆ ನಡೆಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸ್ಥಾನ ತೊರೆಯಲು ಮನೋಹರ್ ಪರಿಕ್ಕರ್ ಮುಂದಾಗಿ, ತಮ್ಮ ಇಚ್ಛೆಯನ್ನು ಹೈಕಮಾಂಡ್ ಗೆ ತಿಳಿಸಿದ್ದರು.

ಗೋವಾದಲ್ಲಿ ಮನೋಹರ್ ಬದಲಿಗೆ ಹೊಸ ಸಿಎಂ ಯಾರಾಗಬಹುದು?

ಆದರೆ, ಅವರ ಮನವಿಯನ್ನು ಪುರಸ್ಕರಿಸಿಲ್ಲ. ಆದರೆ, ಈಗ ಮನೋಹರ್ ಅವರಿಗೆ ಪ್ಯಾಂಕ್ರಿಯಾಸ್ ಕ್ಯಾನ್ಸರ್ ಇದ್ದು, ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಸಚಿವ ಸಂಪುಟದ ಸದಸ್ಯರೇ ಪಕ್ಷದ ಗುಟ್ಟು ವ್ಯಾಧಿ ರಟ್ಟು ಮಾಡಿ, ಅನಿವಾರ್ಯ ಪರಿಸ್ಥಿತಿ ನಿರ್ಮಿಸಿದ್ದಾರೆ.

ಗೋವಾ ವಿಧಾನಸಭೆ ಸಂಖ್ಯಾಬಲ

ಗೋವಾ ವಿಧಾನಸಭೆ ಸಂಖ್ಯಾಬಲ

ಗೋವಾ ವಿಧಾನಸಭೆಯಲ್ಲಿ 16 ಶಾಸಕರನ್ನು ಹೊಂದಿದ್ದ ಕಾಂಗ್ರೆಸ್​, ತನ್ನ ಇಬ್ಬರು ಶಾಸಕರನ್ನು ಕಳೆದುಕೊಳ್ಳುವ ಮೂಲಕ 14ಕ್ಕೆ ಕುಸಿದಿದೆ. ಈ ಮೂಲಕ ಸರ್ಕಾರ ರಚಿಸುವ ಅವಕಾಶದಿಂದ ಬಹುದೂರ ಉಳಿದಿದೆ. 40 ಮಂದಿ ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ 2 ಶಾಸಕರನ್ನು ಸೇರಿಸಿಕೊಂಡು ಬಿಜೆಪಿ 16 ಮಂದಿ ಶಾಸಕರನ್ನು ಹೊಂದಿದೆ. ಗೋವಾ ಫಾರ್ವರ್ಡ್ ಪಕ್ಷ ಹಾಗೂ ಎಂಜಿಪಿಯ ತಲಾ ಮೂವರು ಹಾಗೂ 3 ಪಕ್ಷೇತರರು ಬೆಂಬಲ ಸೂಚಿಸಿದ್ದಾರೆ. ಹೀಗಾಗಿ 25 ಸಂಖ್ಯಾ ಬಲ ಪಡೆದು ಮನೋಹರ್ ಪರಿಕ್ಕಾರ್ ಅವರು ಸರ್ಕಾರ ಸುಭದ್ರವಾಗಿದೆ.

ಮನೋಹರ್ ಬಗ್ಗೆ ಬಿಜೆಪಿಗೆ ಭಯ

ಮನೋಹರ್ ಬಗ್ಗೆ ಬಿಜೆಪಿಗೆ ಭಯ

ಮನೋಹರ್ ಬಗ್ಗೆ ಬಿಜೆಪಿಗೆ ಭಯ: ಮನೋಹರ್ ಪರಿಕ್ಕಾರ್ ಅವರನ್ನು ಗೋವಾ ಸಿಎಂ ಸ್ಥಾನದಿಂದ ಕೆಳಗಿಸಿದರೆ, ಬಿಜೆಪಿಗೆ ಇಲ್ಲಿನ ಸರ್ಕಾರ ಕುಸಿಯುವ ಭೀತಿ ಇದೆ. ಅಲ್ಲದೆ, ಆನಂತರ ಮನೋಹರ್ ಅವರು ರಫೆಲ್ ಒಪ್ಪಂದ ಬಗ್ಗೆ ತಮಗೆ ಗೊತ್ತಿರುವ ಮಾಹಿತಿಯನ್ನು ಹೊರ ಹಾಕಬಹುದು. ಇದೆಲ್ಲವೂ ಬಿಜೆಪಿಗೆ ಭಾರಿ ಹಿನ್ನಡೆಯಾಗಲಿದೆ. ಹೀಗಾಗಿ, ಅವರೇ ಕೇಳಿಕೊಂಡರೂ ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರೆಸಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಗೋವಾ ಕಾಂಗ್ರೆಸ್​ನ ಹಿರಿಯ ನಾಯಕ, ನಾಲ್ಕು ಬಾರಿ ಗೋವಾದ ಸಿಎಂ ಆಗಿದ್ದ ಪ್ರತಾಪ್​ ಸಿಂಗ್​ರಾವ್ ರಾಣೆ ಅವರ ಪುತ್ರ ವಿಶ್ವಜಿತ್ ರಾಣೆ. ಮನೋಹರ್ ಅವರ ಸಚಿವ ಸಂಪುಟದಲ್ಲಿ ಮಹಿಳಾ ಕಲ್ಯಾಣ ಮತ್ತು ಆರೋಗ್ಯ ಸಚಿವರಾಗಿದ್ದಾರೆ.

"ಪರಿಕ್ಕರ್ ರಾಜೀನಾಮೆಗೆ ಬಿಜೆಪಿ ಅನಗತ್ಯ ಒತ್ತಡ ಹೇರುತ್ತಿದೆ"

ವಲಸೆ ಬಂದವರಿಂದ ಒತ್ತಡ

ವಲಸೆ ಬಂದವರಿಂದ ಒತ್ತಡ

ದಯಾನಂದ ಸೊಪ್ಟೆ ಗೋವಾ ಕಾಂಗ್ರೆಸ್ಸಿನ ಪ್ರಮುಖ ನಾಯಕರಲ್ಲಿ ಒಬ್ಬರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರನ್ನು ದಯಾನಂದ್ ಸೋಲಿಸಿದ್ದರು. ಗೋವಾದ ಮಂಡ್ರೆಮ್ ಕ್ಷೇತ್ರವನ್ನು ಇವರು ಪ್ರತಿನಿಧಿಸುತ್ತಿದ್ದರು. ಗೋವಾದ ಶಿರೋಡಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸುಭಾಶ್ ಸಹ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿದ್ದವರು.

ಸ್ಪೀಕರ್ ಪ್ರಮೋದ್ ಸಾವಂತ್ ಹೆಸರು

ಸ್ಪೀಕರ್ ಪ್ರಮೋದ್ ಸಾವಂತ್ ಹೆಸರು

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗೋವಾ ಸ್ಪೀಕರ್ ಡಾ. ಪ್ರಮೋದ್ ಸಾವಂತ್ ರನ್ನು ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಎರಡು ಬಾರಿ ಶಾಸಕರಾದವರು ಹಾಗು ಈಗ ಗೋವಾದ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾವಂತ್ ಗೆ ಆರೆಸ್ಸೆಸ್ ಬೆಂಬಲವೂ ಇದೆ. ಇತ್ತೀಚೆಗಷ್ಟೇ ಸಾವಂತ್ ಆರೆಸ್ಸೆಸ್ ನಾಯಕ ಮೋಹನ್ ಭಾಗವತ್ ರನ್ನು ಭೇಟಿಯಾಗಿ ಬಂದ ಬಳಿಕ, ಈ ಬೆಳವಣಿಗೆ ನಡೆದಿದೆ.

ವೃತ್ತಿಯಿಂದ ಆಯುರ್ವೇದ ವೈದ್ಯರಾಗಿದ್ದಾರೆ. ಇವರ ಪತ್ನಿ ಸುಲಕ್ಷಣಾ ಅವರು ಕೆಮಿಸ್ಟ್ರಿ ಟೀಚರ್ ಆಗಿದ್ದು, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿದ್ದಾರೆ.

ಗೋವಾ: ಬಿಜೆಪಿ ಸೇರಲಿರುವ ಕಾಂಗ್ರೆಸ್ ನ ಇಬ್ಬರು ಶಾಸಕರು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP is considering health minister Vishwajit Rane, assembly speaker Pramod Sawant and state president Vinay Tendulkar as possible successors to Parrikar. Sawant called on RSS chief Mohan Bhagwat on October 22 to make a pitch for himself. And Rane is keen on poaching more MLAs from his former party, the Congress, who can vouch for him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more