ಗೋಧ್ರಾ ಹತ್ಯಾಕಾಂಡ, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್, ಅಕ್ಟೋಬರ್ 09 : 2002ರ ಗೋಧ್ರಾ ಹತ್ಯಾಕಾಂಡದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗುಜರಾತ್ ಹೈಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತನೆ ಮಾಡಿ ಆದೇಶ ನೀಡಿದೆ.

ಪ್ರಕರಣದ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಿದೆ. ಹತ್ಯಾಕಾಂಡದಲ್ಲಿ ಸಜೀವವಾಗಿ ದಹನವಾದ ಕರ ಸೇವಕರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಗುಜರಾತ್ ಸರ್ಕಾರಕ್ಕೆ ಸೂಚನೆ ನೀಡಿದೆ.

Godhra train burning case : HC commutes death sentence to 11 convicts into life imprisonment

2002ರ ಫೆ.27ರಂದು ನಡೆದ ಗೋಧ್ರಾ ಹತ್ಯಾಕಾಂಡದಲ್ಲಿ 59 ಕರ ಸೇವಕರು ಸಜೀವವಾಗಿ ದಹನವಾಗಿದ್ದರು. ಘಟನೆ ಬಳಿಕ ರಾಜ್ಯದಲ್ಲಿ ಕೋಮುಗಲಭೆ ನಡೆದಿತ್ತು. ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ಗುಜರಾತ್ ರಾಜ್ಯ ಸರ್ಕಾರ ವಿಫಲವಾಗಿತ್ತು. ಸರ್ಕಾರದ ಕಾರ್ಯವೈಖರಿ ಬಗ್ಗೆಯೂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಹತ್ಯಾಕಾಂಡದ ಬಗ್ಗೆ ಮೊದಲು ವಿಚಾರಣೆ ನಡೆಸಿದ್ದ ಎಸ್‌ಐಟಿ ನ್ಯಾಯಾಲಯ 31 ಜನರನ್ನು ದೋಷಿಗಳು ಎಂದು ಹೇಳಿತ್ತು. 63 ಜನರನ್ನು ಖುಲಾಸೆಗೊಳಿಸಿತ್ತು. ದೋಷಿಗಳಾದವರ ಪೈಕಿ 11 ಜನರಿಗೆ ಮರಣದಂಡನೆ, 20 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಸದ್ಯ 11 ಜನರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+