Good News: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌

SSLC Good News: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಆ ನಿರ್ಧಾರ ಏನು ಎನ್ನುವ ಬಗ್ಗೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಒತ್ತಡ ಕಡಿಮೆ ಮಾಡುವ ಉದ್ದಶದಿಂದ ಎರಡು ಹಂತದ ಪಠ್ಯ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಂಬರುವ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಪರೀಕ್ಷೆ ತೆಗೆದುಕೊಳ್ಳಲು ಹೊಸ ಆಯ್ಕೆಯನ್ನು ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

Good News for CBSE SSLC Students Know details

ಈ ಹೊಸ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ಪರೀಕ್ಷೆಯ ಕಷ್ಟದ ಮಟ್ಟವನ್ನು ಆಯ್ಕೆ ಮಾಡಲು ಸಾಧ್ಯ ಆಗುತ್ತದೆ. ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ 2026-27ನೇ ಸಾಲಿನಿಂದ 2 ಹಂತದ ಪಠ್ಯದ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ.

ಈಗಾಗಲೇ 10ನೇ ತರಗತಿ ವಿದ್ಯಾರ್ಥಿಗಳು ಗಣಿತ ಶಾಸ್ತ್ರ ವಿಷಯದಲ್ಲಿ ಸ್ಟಾಂಡರ್ಡ್ ಅಥವಾ ಮೂಲ ಗಣಿತ ವಿಷಯ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸ ವ್ಯವಸ್ಥೆಯಲ್ಲಿ ಮಕ್ಕಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಆಗಲಿದ್ದು, ಜೊತೆಗೆ ವಿಭಿನ್ನ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ನೆರವಾಗುತ್ತದೆ ಎಂದು ತಿಳಿಸಿದೆ.

ಈ ಹಂತವನ್ನು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ. ಇದರಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಎರಡು ಹಂತಗಳಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಗಣಿತದಲ್ಲಿ ಪ್ಯಾಟರ್ನ್ ಅನ್ನು ಈಗಾಗಲೇ ಅಳವಡಿಸಲಾಗಿದೆ. ಪ್ರಸ್ತುತ, ಈ ಹೊಸ ಪರೀಕ್ಷಾ ಮಾದರಿಯನ್ನ ಈಗಾಗಲೇ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯ ಭಾಗ ಆಗಿರುವ ಗಣಿತ ವಿಷಯದಲ್ಲಿ ಅಳವಡಿಕೆ ಮಾಡಲಾಗಿದೆ.

ಸಿಬಿಎಸ್‌ಇ ಮೂಲಗಳ ಪ್ರಕಾರ, ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಒದಗಿಸುವ ಉದ್ದೇಶದಿಂದ ಈ ಉಪಕ್ರಮವನ್ನು ಪ್ರಾರಂಭಿಸಲಾಗುತ್ತಿದೆ. ಇದರಿಂದಾಗಿ ಅವರ ನಿಜವಾದ ಸಾಮರ್ಥ್ಯವನ್ನು ಸರಿಯಾಗಿ ಅಳೆಯಬಹುದಾಗಿದೆ. ಈ ಮಾದರಿಯು ವಿಜ್ಞಾನ ಮತ್ತು ಸಮಾಜ ವಿಜ್ಞಾನಕ್ಕೂ ಅನ್ವಯಿ ಆಗುತ್ತದೆ. ಈಗ, ವಿಜ್ಞಾನ ಮತ್ತು ಸಮಾಜ ವಿಜ್ಞಾನದಂತಹ ಇತರ ಪ್ರಮುಖ ವಿಷಯಗಳಲ್ಲಿಯೂ ಈ ಮಾದರಿಯನ್ನು ಜಾರಿಗೆ ತರಲು ಯೋಜನೆ ನಡೆಸುತ್ತಿದೆ.

ಈ ಬದಲಾವಣೆಯ ಉದ್ದೇಶವು ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶವನ್ನು ನೀಡುವುದು, ಇದರಿಂದ ಅವರು ತಮ್ಮ ವಿಷಯಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು. ಎನ್‌ಸಿಇಆರ್‌ಟಿ ಪಠ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡಲಿದೆ. ಆದರೆ ಇದನ್ನು ಜಾರಿಗೆ ತರಲು ಮತ್ತೊಂದು ಸವಾಲು ಎದುರಾಗಲಿದ್ದು, ಎರಡು ಹಂತದ ಪರೀಕ್ಷೆಯ ಪಠ್ಯಕ್ರಮವನ್ನೂ ಬದಲಾವಣೆ ಮಾಡಬೇಕಾಗುತ್ತದೆ. ಈ ಕೆಲಸವನ್ನು ಎನ್‌ಸಿಇಆರ್‌ಟಿ ಮಾಡಲಿದೆ ಎನ್ನಲಾಗುತ್ತಿದೆ.

ಎನ್‌ಸಿಇಆರ್‌ಟಿಯು ಪಠ್ಯಪುಸ್ತಕಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಇದರಿಂದ ಎರಡೂ ಹಂತಗಳಿಗೆ ಸೂಕ್ತವಾದ ವಿಷಯಗಳನ್ನು ಆಯ್ಕೆ ಮಾಡಬಹುದು. ಈಗ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಆಯ್ಕೆ ಮಾಡುವ ಅವಕಾಶವನ್ನು ಪಡೆಯುತ್ತಾರೆ, ಇದು ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಅವರ ನಿಜವಾದ ಸಾಮರ್ಥ್ಯಗಳನ್ನು ಉತ್ತಮವಾಗಿ ಪ್ರದರ್ಶಿಸಲು ಸಹಾಯ ಮಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+