ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್‌ 18ರಿಂದ ಸರಕು ಸಾಗಣೆ ವಾಹನಗಳ ಅನಿರ್ಧಿಷ್ಟಾವಧಿ ಮುಷ್ಕರ

By Nayana
|
Google Oneindia Kannada News

ಬೆಂಗಳೂರು, ಮೇ 26: ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದನ್ನು ವಿರೋಧಿಸಿ ಜೂ18ರಿಂದ ದೇಶಾದ್ಯಂತ ಎಲ್ಲ ಸರಕುವಾಹನಗಳ ಸೇವೆಯನ್ನು ಅನಿರ್ದಿಷ್ಟ ಕಾಲ ಸ್ಥಗಿತಗೊಳಿಸಲು ಆಲ್‌ಇಂಡಿಯಾ ಕಾನ್‌ಫೆಡರೇಷನ್ ಆಫ್ ಗೂಡ್ಸ್ ವೆಹಿಕಲ್ ಓನರ್ಸ್‌ ಅಸೋಸಿಯೇಷನ್ ನಿರ್ಧರಿಸಿದೆ.

ಕೇಂದ್ರ ಸರ್ಕಾರದ ಹೊಸ ನಿರ್ಧಾರಗಳಿಂದ ಲಾರಿ ಮಾಲೀಕರು ಪ್ರತಿ ತಿಂಗಳು ನಷ್ಟ ಅನುಭವಿಸುತ್ತಿದ್ದಾರೆ. ರಾ್ಯದಲ್ಲಿ ಕಳೆದ ಐದು ವರ್ಷಗಳಿಂದ ಡೀಸೆಲ್, ಪೆಟ್ರೋಲ್ ಇಂಧನ ಬೆಲೆ ಏರುತ್ತಲೇ ಇದೆ. ವಾಹನಗಳ ಥರ್ಡ್ ಪಾರ್ಟಿ ಪ್ರೀಮಿಯಂ 2002ರಿಂದಲೂ ನಿರಂತರವಾಗಿ ಏರಿಕೆ ಮಾಡಿಕೊಂಡು ಬಂದಿದ್ದು, ಈವರೆಗೆ ಶೇ.1117ರಷ್ಟು ಏರಿಕೆ ಕಂಡಿದೆ. ಪ್ರತಿ ನಿತ್ಯ ರಾಜ್ಯ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಭರಿಸಬೇಕಾಗುತ್ತದೆ. ಪ್ರತಿ ವರ್ಷ ಟೋಲ್ ಏರಿಕೆ ಮಾಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಬಿ. ಚೆನ್ನಾರೆಡ್ಡಿ ತಿಳಿಸಿದ್ದಾರೆ.

Goods vehicles owners will go indefinite strike from June 18

ಗರಿಷ್ಠ ಮಟ್ಟಕ್ಕೆ ತಲುಪಿದ ಪೆಟ್ರೋಲ್, ಡೀಸೆಲ್ ಬೆಲೆಗರಿಷ್ಠ ಮಟ್ಟಕ್ಕೆ ತಲುಪಿದ ಪೆಟ್ರೋಲ್, ಡೀಸೆಲ್ ಬೆಲೆ

ಅನಿರ್ದಿಷ್ಟಕಾಲ ಸೇವೆ ಸ್ಥಗಿತಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ., ಇಂಧನಕ್ಕೆ ವೆಚ್ಚ ಮಾಡುವ ಹಣವನ್ನು ಬಾಡಿಗೆಯಲ್ಲಿ ಪಡೆಯಲು ಆಗುತ್ತಿಲ್ಲ. ಎಲ್ಲ ಖರ್ಚು-ವೆಚ್ಚಗಳನ್ನು ನಿರ್ವಹಿಸಿಕೊಂಡು ಲಾರಿಗಳಿಗೆ ಕಟ್ಟಬೇಕಾದ ಮಾಸಿಕ ಕಂತುಗಳ ಹಣ ಕಟ್ಟಾಲಾಗುತ್ತಿಲ್ಲ. ಇದರಿಂದ ಬಹಳಷ್ಟು ಮಾಲೀಕರು ಲಾರಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಹಲವಾರು ಕಾರ್ಮಿಕರು ಉದ್ಯೋಗ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ವಾಹನ ಮಾಲೀಕರ ಸಮಸ್ಯೆಗಳನ್ನು ಲಿಖಿತವಾಗಿ ಕೇಂದ್ರ ಸರ್ಕಾರ, ಐಆರ್‌ಡಿಎ ಅಧ್ಯಕ್ಷರಿಗೆ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಮುಷ್ಕರ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಪ್ರೀಮಿಯಂ ದರ ಹೆಚ್ಚಳ ಕಡಿಮೆ ಮಾಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೂ.18ರಂದು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

English summary
Opposing the fuel price hike and premium hike in third party insurance, All India Goods Vehicles owners association will go for indefinite strike from June 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X