ಶಿಕ್ಷಕರ ದಿನಾಚರಣೆ: ಎಲ್ಲಾ ಶಿಕ್ಷಕರಿಗೆ ಗೂಗಲ್ ಡೂಡಲ್ ಗೌರವ
ನವದೆಹಲಿ, ಸೆಪ್ಟೆಂಬರ್ 05: ಶಿಕ್ಷಕರ ದಿನಾಚರಣೆ ಅಂಗವಾಗಿ ಗೂಗಲ್ ಡೂಡಲ್ ದೇಶದ ಎಲ್ಲಾ ಶಿಕ್ಷಕರಿಗೆ ಗೌರವ ಸಲ್ಲಿಸಿದೆ.
ಪ್ರಸ್ತುತ ಕೊವಿಡ್ ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಪ್ರತಿಯೊಬ್ಬ ಶಿಕ್ಷಕ ಕೂಡ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿರಿಕೊಂಡು, ಅವರ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ.
ತಮಗೆ ತಿಳಿಯದಿದ್ದರೂ ಕಲಿತುಕೊಂಡು ಆನ್ಲೈನ್ ತರಗತಿಗಳ ಮೂಲಕವೇ ಮಕ್ಕಳ ಶಿಕ್ಷಣ ಕುಂಠಿತವಾಗದಂತೆ ಶ್ರಮಿಸುತ್ತಿದ್ದಾರೆ.

ಶಿಕ್ಷಕರ ಶ್ರಮಕ್ಕೆ ಗೂಗಲ್ ಇಂದು ಗೌರವ ಸಲ್ಲಿಸುವ ಕೆಲಸ ಮಾಡಿದೆ. ಕೊರೊನಾ ಸಮಯದಲ್ಲಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿಶ್ರಮಿಸುತ್ತಿರುವ ಹೀರೋಗಳಿಗೆ ಡೂಡಲ್ ಮೂಲಕ ಗೂಗಲ್ ಗೌರವ ಸಲ್ಲಿಸಿದೆ. ಅನಿಮೇಟೆಡ್ ಡೂಡಲ್ ಇದಾಗಿದೆ.
ಪ್ರತಿ ವರ್ಷವೂ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.
ಆದರೆ ಈ ಬಾರಿ ಕೊರೊನಾದಿಂದಾಗಿ ಶಾಲಾ-ಕಾಲೇಜುಗಳು ಮುಚ್ಚಿವೆ. ಹೀಗಾಗಿ ಈ ಬಾರಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಕಡಿಮೆಯಾಗಿದೆ. ಆದರೂ ಸಹ ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹಿಂಜರಿಯದೇ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ದೇಶದ ಎಲ್ಲಾ ಶಿಕ್ಷಕರಿಗೆ ಗೂಗಲ್ ವಿಶೇಷ ಕೃತಜ್ಞತೆ ಸಲ್ಲಿಸಿದೆ.
1962ರಿಂದಲೂ ಪ್ರತಿವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.
ಅವರು 1888ರ ಸೆಪ್ಟೆಂಬರ್ 5ರಂದು ತಮಿಳುನಾಡಿನ ತಿರುತನಿಯಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ರಾಧಾಕೃಷ್ಣ ಅವರು ಉತ್ತಮ ವಿದ್ಯಾರ್ಥಿಯಾಗಿದ್ದು, ಬಾಲ್ಯದಲ್ಲೇ ಓದಿನಲ್ಲಿ ಮುಂದೆ ಇದ್ದರು. ಬಳಿಕ ಮದ್ರಾಸ್ನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಫಿಲಾಸಪಿ(ತತ್ವಶಾಸ್ತ್ರ)ಯಲ್ಲಿ ಎಂ.ಎ ಮಾಡಿದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications