ಮತೋತ್ಸವದಲ್ಲಿ ವಿಶಿಷ್ಟವಾಗಿ ಭಾಗಿಯಾದ ಗೂಗಲ್
ನವದೆಹಲಿ, ಏ.11: ದೇಶದ ಒಟ್ಟು 19 ರಾಜ್ಯ 91 ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭಾ ಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಗೂಗಲ್ ಡೂಡಲ್‌ನಲ್ಲಿ ಮತದಾನ ಪ್ರಕ್ರಿಯೆ ಹಾಗೂ ಏಳು ಹಂತಗಳನ್ನು ವಿವರಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ತೋರು ಬೆರಳಿಗೆ ಶಾಯಿ ಹಚ್ಚಿದ ಚಿತ್ರವನ್ನು ಗೂಗಲ್ ಡೂಡಲ್ ತೋರಿಸಿದೆ. ಮತದಾನ ಮಾಡಿದ ಬೆರಳಿಗೆ ಶಾಯಿ ಹಚ್ಚಿದ ಚಿತ್ರದ ಮೇಲೆ ಕ್ಲಿಕ್ ಮಾಡಿದರೆ ಅಲ್ಲಿ ಮತದಾನದ ಪ್ರಕ್ರಿಯೆಗಳ ವಿವರಣೆ ಇದೆ. ಅಷ್ಟೇ ಅಲ್ಲದೆ, ಇದೇ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಅಗತ್ಯ ಮಾಹಿತಿಗಳನ್ನೂ ಗೂಗಲ್ ಡೂಡಲ್ ನೀಡಿದೆ.
ಒಟ್ಟು ಏಳು ಹಂತದಲ್ಲಿ ನಡೆಯಲಿರುವ ಚುನಾವಣೆಯ ಮೊದಲ ಹಂತ ಇಂದು ಪ್ರಾರಂಭವಾಗಿದ್ದು, ಏಪ್ರಿಲ್ 18, 23, 29, ಮೇ 6, ಮೇ 12 ಮತ್ತು ಮೇ 19ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.

ಒಂದೇ ಹಂತದಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಆಂಧ್ರ, ಅರುಣಾಚಲ, ಗೋವಾ, ಗುಜರಾತ್, ಹರ್ಯಾಣ, ಹಿಮಾಚಲ ಪ್ರದೇಶ, ಕೇರಳ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ಸಿಕ್ಕಿಂ, ತೆಲಂಗಾಣ, ತಮಿಳುನಾಡು, ಉತ್ತರಾಖಂಡ್, ಅಂಡಮಾನ್- ನಿಕೋಬಾರ್, ದಾದ್ರಾ ನಗರ್‌ಹವೇಲಿ, ದಮನ್ ಅಂಡ್ ದಿಯು, ಲಕ್ಷದ್ವೀಪ, ದಿಲ್ಲಿ, ಪುದುಚೇರಿ, ಚಂಡೀಗಢ.
ಎರಡು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಕರ್ನಾಟಕ, ಮಣಿಪುರ, ರಾಜಸ್ಥಾನ, ತ್ರಿಪುರಾ. ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಅಸ್ಸಾಂ, ಛತ್ತೀಸ್‌ಗಢ , ನಾಲ್ಕುಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ , ಐದು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಜಮ್ಮು ಮತ್ತು ಕಾಶ್ಮೀರ ಏಳು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತದಾನ ನಡೆಯಲಿದೆ.











Click it and Unblock the Notifications