ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋರಖನಾಥ ದೇಗುಲ ದಾಳಿ: ಆರೋಪಿ ಮುರ್ತಾಜಾ ಅಬ್ಬಾಸಿಗೆ ಮರಣದಂಡನೆ!

2022ರ ಏಪ್ರಿಲ್‌ನಲ್ಲಿ ಉತ್ತರ ಪ್ರದೇಶದ ಗೋರಖನಾಥ ದೇವಸ್ಥಾನದಲ್ಲಿ ಬೀಡುಬಿಟ್ಟಿದ್ದ ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ ಆರೋಪಿ ಅಹ್ಮದ್ ಮುರ್ತಾಜಾ ಅಬ್ಬಾಸಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ.

|
Google Oneindia Kannada News

ಕಳೆದ ವರ್ಷ ಏಪ್ರಿಲ್‌ನಲ್ಲಿ ಯುಪಿಯ ಗೋರಖ್‌ನಾಥ್ ದೇವಸ್ಥಾನದಲ್ಲಿ ಬೀಡುಬಿಟ್ಟಿದ್ದ ಭದ್ರತಾ ಸಿಬ್ಬಂದಿಯ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಬಂಧಿತ ಅಹ್ಮದ್ ಮುರ್ತಾಜಾ ಅಬ್ಬಾಸಿಗೆ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ಮರಣದಂಡನೆ ವಿಧಿಸಿದೆ.

ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾನ್ ಕುಮಾರ್, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121 ರ ಅಡಿಯಲ್ಲಿ ಆರೋಪಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ಹೇಳಿದರು. ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪಿಗೆ ಸೆಕ್ಷನ್ 307 ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Naba Kishore Das : ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವುNaba Kishore Das : ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು

ಆರೋಪಿಗಳು ಗೋರಖ್ ಪುರದ ಗೋರಖ್ ನಾಥ್ ದೇವಸ್ಥಾನದಲ್ಲಿ ಬೀಡುಬಿಟ್ಟಿದ್ದ ಉತ್ತರ ಪ್ರದೇಶ ಪ್ರಾಂತೀಯ ಸಶಸ್ತ್ರ ಕಾನ್ಸ್ ಟೆಬ್ಯುಲರಿ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದರು. ಘಟನೆ ನಡೆದ ಬಳಿಕ ಕೆಮಿಕಲ್ ಇಂಜಿನಿಯರ್ ಆಗಿದ್ದ ಅಹ್ಮದ್ ಮುರ್ತಾಜಾ ಅಬ್ಬಾಸಿಯನ್ನು ಬಂಧಿಸಲಾಯಿತು.

Gorakhnath Temple attack: Accused Murtaza Abbasi sentenced to death

ಅಹ್ಮದ್ ಮುರ್ತಾಜಾ ಅಬ್ಬಾಸಿಯ ವಿಚಾರಣೆಯಿಂದ ಆರೋಪಿಗೆ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಜೊತೆಗಿನ ಸಂಪರ್ಕ ಬಹಿರಂಗವಾಗಿತ್ತು. ಯುಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಕಾರ, ಮುರ್ತಾಜಾ ಅಬ್ಬಾಸಿ ಐಎಸ್‌ಗಾಗಿ ಹೋರಾಡುವ ಪ್ರಮಾಣ ವಚನ ಸ್ವೀಕರಿಸಿದ್ದರು ಮತ್ತು ಉಗ್ರಗಾಮಿ ಸಂಘಟನೆಯ ಬೆಂಬಲಿಗರಿಗೆ ಹಣಕಾಸಿನ ನೆರವು ನೀಡುತ್ತಿದ್ದರು.

ಅಹ್ಮದ್ ಮುರ್ತಾಜಾ ಅಬ್ಬಾಸಿ ಬಗ್ಗೆ-

2022ರ ಏಪ್ರಿಲ್‌ನಲ್ಲಿ ಉತ್ತರ ಪ್ರದೇಶದ ಗೋರಖನಾಥ ದೇವಸ್ಥಾನದಲ್ಲಿ ಬೀಡುಬಿಟ್ಟಿದ್ದ ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಲಾಗಿತ್ತು. ಗೋರಖ್‌ಪುರದ ಸಿವಿಲ್ ಲೈನ್ಸ್ ಪ್ರದೇಶದ ನಿವಾಸಿ ಅಹ್ಮದ್ ಮುರ್ತಾಜಾ ಅಬ್ಬಾಸಿ ಅವರು 2015 ರಲ್ಲಿ ಐಐಟಿ-ಮುಂಬೈನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಮುಗಿಸಿದ್ದರು. ನಂತರ ಅವರು ಎರಡು ಪ್ರಮುಖ ಕಂಪನಿಗಳಲ್ಲಿ ಕೆಲಸ ಮಾಡಿದರು.

Gorakhnath Temple attack: Accused Murtaza Abbasi sentenced to death

ಅಬ್ಬಾಸಿ ಅವರ ಕುಟುಂಬ ಸದಸ್ಯರು 2017ರಲ್ಲಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರು ಕುಟುಂಬ ಸದಸ್ಯರಿಗೆ ಹಲವಾರು ವೈದ್ಯರಿಂದ ಚಿಕಿತ್ಸೆ ಕೂಡ ಕೊಡಿಸಿರುವುದಾಗಿ ಹೇಳಿಕೊಂಡಿದ್ದಾರೆ. ಈ ಸಮಸ್ಯೆಗಳು ಅವನ ಹೆಂಡತಿಯೊಂದಿಗಿನ ಸಂಬಂಧವನ್ನು ಸಹ ಹದಗೆಡಿಸಿದವು, ಇದು ಅವರ ಪ್ರತ್ಯೇಕತೆಗೆ ಕಾರಣವಾಯಿತು.

English summary
A special NIA court on Monday awarded death sentence to Ahmed Murtaza Abbasi, who was arrested in connection with the attack on security guards stationed at the Gorakhnath temple in UP in April last year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X