ಗೋರಖಪುರ ದುರಂತ: ಯುಪಿ ಸರಕಾರಕ್ಕೆ ಮಾನವ ಹಕ್ಕು ಆಯೋಗದಿಂದ ನೋಟಿಸ್
ನವದೆಹಲಿ, ಆಗಸ್ಟ್ 14: ಗೋರಖಪುರ ಆಸ್ಪತ್ರೆಯಲ್ಲಿ ಹಸುಳೆಗಳ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಉತ್ತರ ಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ಆಕ್ಸಿಜನ್ ಕೊರತೆಯಿಂದ ಕಳೆದ 7 ದಿನಗಳಲ್ಲಿ 60ಕ್ಕೂ ಹೆಚ್ಚು ಮಕ್ಕಳು ಗೋರಖಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಸುನೀಗಿದ್ದರು.

ಪ್ರಕರಣದಲ್ಲಿ 'ಜೀವಿಸುವ ಹಕ್ಕಿನ ಉಲ್ಲಂಘನೆಯಾಗಿದೆ' ಎಂಬ ಆಧಾರದಲ್ಲಿ ಮಾಧ್ಯಮ ವರದಿಗಳನ್ನಾಧರಿಸಿ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ನೀಡಿದೆ.
ಇದಲ್ಲದೆ ಸಂತ್ರಸ್ತರಿಗೆ ನೀಡಿದ ಪರಿಹಾರ ಹಾಗೂ ಅಧಿಕಾರಿಗಳ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ 4 ವಾರಗಳ ಒಳಗೆ ವರದಿ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.












Click it and Unblock the Notifications