ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27 ರಷ್ಟು ಮೀಸಲಾತಿ: ಕೇಂದ್ರ

|
Google Oneindia Kannada News

ನವದೆಹಲಿ, ಜುಲೈ 29: ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ ಘೋಷಿಸಿದೆ. ಇದರಲ್ಲಿ ಪ್ರಮುಖಾಗಿ ಒಬಿಸಿ ವಿಭಾಗಕ್ಕೆ ಶೇ. 27 ಹಾಗೂ ಆರ್ಥಿಕ ದುರ್ಬಲರಿಗೆ ಶೇ. 10 ರಷ್ಟು ಮೀಸಲಾತಿ ನೀಡಲಾಗಿದೆ.

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಲೈಂಗಿಕ ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಲೈಂಗಿಕ ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!

ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ ಇದೀಗ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.

Government Announces Reservation For OBC, EWS In Medical Education

ಈ ಮೀಸಲಾತಿ ಎಂಬಿಬಿಎಸ್ ಮತ್ತು ಬಿಡಿಎಸ್​ಗೂ ಅನ್ವಯವಾಗಲಿದೆ. ಹಾಗೇ, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಓಬಿಸಿ ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.

1986ರಲ್ಲಿ ಅಖಿಲ ಭಾರತ ಕೋಟಾ(AIQ)ಯೋಜನೆಯನ್ನು ಪರಿಚಯಿಸಲಾಯಿತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಈ ಯೋಜನೆಗೆ ಜಾರಿಗೊಳಿಸಲಾಯಿತು. ಈ ಯೋಜನೆಯಲ್ಲಿ ಯಾವುದೇ ರಾಜ್ಯದ ವಿದ್ಯಾರ್ಥಿಗಳಿಗೆ ಬೇರೆ ರಾಜ್ಯದಲ್ಲಿರುವ ಉತ್ತಮ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಆಕಾಂಕ್ಷಿ ಮುಕ್ತ ಅರ್ಹತೆ ಆಧಾರಿತ ಅವಕಾಶಗಳನ್ನು ಒದಗಿಸುತ್ತದೆ.

ಅಖಿಲ ಭಾರತ ಕೋಟಾ ಒಟ್ಟು ಯುಜಿ ಸೀಟುಗಳಲ್ಲಿ ಶೇ.15 ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಒಟ್ಟು ಪಿಜಿ ಸೀಟುಗಳಲ್ಲಿ ಶೇ.50 ಅನ್ನು ಒಳಗೊಂಡಿದೆ.

1986 ರಿಂದ 2007ರ ವರೆಗೆ AIQ ಕೋಟಾದಲ್ಲಿ ಯಾವುದೇ ಮೀಸಲು ಇರಲಿಲ್ಲ. 2007ರಲ್ಲಿ ಸುಪ್ರೀಂ ಕೋರ್ಟ್, ಎಸ್‌ಸಿ ವಿಭಾಗಕ್ಕೆ ಶೇ. 15 ಹಾಗೂ ಎಸ್‌ಟಿ ವಿಭಾಗಕ್ಕೆ ಶೇ. 7.5 ರಷ್ಟು ಮೀಸಲಾತಿ ನೀಡಲಾಗಿತ್ತು.

ಪ್ರಸಕ್ತ ಶೈಕ್ಷಣಿಗೆ ವರ್ಷ 2021-22 ರಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ಕೋರ್ಸ್((ಎಂಬಿಬಿಎಸ್ / ಎಂಡಿ / ಎಂಎಸ್ / ಡಿಪ್ಲೊಮಾ / ಬಿಡಿಎಸ್ / ಎಂಡಿಎಸ್) ಕೋರ್ಸ್‌ಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ.

ಕೇಂದ್ರದ ಈ ನಿರ್ಧಾರದಿಂದ ಪ್ರತಿ ವರ್ಷ ಎಂಬಿಬಿಎಸ್‌ನಲ್ಲಿ ಸುಮಾರು 1500 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿಯಲ್ಲಿ 2500 ಒಬಿಸಿ ವಿದ್ಯಾರ್ಥಿಗಳಿಗೆ, ಸುಮಾರು 550 ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವೀಧರರಲ್ಲಿ ಸುಮಾರು 1000 ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಇದು ಸಹಾಯವಾಗಲಿದೆ.

English summary
In a landmark decision the union government has decided to give 27% reservation to other backward class (OBC) category and 10% reservation to economically weaker section (EWS) in medical education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X