EPFO Interest: 2022-23ರ ವರ್ಷದ ಇಪಿಎಫ್ ಬಡ್ಡಿದರ ಪ್ರಕಟಿಸಿದ ಸರ್ಕಾರ
6 ಕೋಟಿ ಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2022-23ರ ಆರ್ಥಿಕ ವರ್ಷದಲ್ಲಿ ಶೇಕಡಾ 8.15 ರಷ್ಟು ಇಪಿಎಫ್ ಬಡ್ಡಿದರ ನೀಡುವುದಾಗಿ ಹೇಳಿದೆ. ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ಕೇಂದ್ರೀಯ ಟ್ರಸ್ಟಿಗಳ ಮಂಡಳಿಯು ಶಿಫಾರಸು ಮಾಡಿರುವ ಶೇಕಡಾ 8.15 ರ ಬಡ್ಡಿ ದರವನ್ನು ಸರ್ಕಾರ ಅನುಮೋದಿಸಿದೆ.
ಸೋಮವಾರ ಹೊರಡಿಸಿದ ಸುತ್ತೋಲೆಯಲ್ಲಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇಪಿಎಫ್ ಬಡ್ಡಿದರವನ್ನು ಸದಸ್ಯರ ಖಾತೆಗಳಿಗೆ ಜಮಾ ಮಾಡಲು ಕೇಂದ್ರ ಸರ್ಕಾರದ ಅನುಮೋದನೆಯನ್ನು ರವಾನಿಸಿದೆ ಎಂದು ಇಪಿಎಫ್‌ಒ ತಿಳಿಸಿದೆ.

ಒಪ್ಪಂದದ ಪ್ರಕಾರ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬಡ್ಡಿ ದರದ ಶಿಫಾರಸನ್ನು ಅನುಮೋದನೆಗಾಗಿ ಹಣಕಾಸು ಸಚಿವಾಲಯಕ್ಕೆ ಕಳುಹಿಸಿದೆ. ಬಡ್ಡಿ ದರಕ್ಕೆ ಸರ್ಕಾರದ ಒಪ್ಪಿಗೆಯ ನಂತರ, ಇಪಿಎಫ್‌ಒ ಈಗ ಇಪಿಎಫ್ ಚಂದಾದಾರರಿಗೆ ಹಿಂದಿನ ಹಣಕಾಸಿನ ಬಡ್ಡಿದರವನ್ನು ಖಾತೆಗೆ ಹಾಕಲಿದೆ.
ಕಾರ್ಮಿಕ ಸಚಿವಾಲಯ ಹೇಳಿದ್ದೇನು?
"ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು, 1952 ರ ಉದ್ಯೋಗಿಗಳ ಭವಿಷ್ಯ ನಿಧಿ ಯೋಜನೆ, 1952 ರ ಪ್ಯಾರಾ 60 (1) ರ ಅಡಿಯಲ್ಲಿ ಇಪಿಎಫ್ ಸ್ಕೀಮ್, 1952 ರ ಇಪಿಎಫ್ ಸ್ಕೀಮ್‌ನ ಪ್ಯಾರಾ 60 ರ ಅಡಿಯಲ್ಲಿ ಇಪಿಎಫ್ ಯೋಜನೆ ನಿಬಂಧನೆಗಳ ಪ್ರಕಾರ 2022-23 ರ ಸಾಲಿನಲ್ಲಿ 8.15% ಬಡ್ಡಿದರವನ್ನು ಇಪಿಎಫ್ ಯೋಜನೆಯ ಪ್ರತಿ ಸದಸ್ಯರ ಖಾತೆಗೆ ಹಾಕುವಂತೆ ಅನುಮೋದನೆ ನೀಡಿದೆ" ಎಂದು ಸಚಿವಾಲಯ ಹೇಳಿದೆ.
2023ರ ಮಾರ್ಚ್‌ನಲ್ಲಿ, ಇಪಿಎಫ್‌ಒ ದ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯು (CBT) ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 6 ಕೋಟಿಗೂ ಹೆಚ್ಚು ಚಂದಾದಾರರಿಗೆ ಶೇಕಡಾ 8.15 ರ ಬಡ್ಡಿದರವನ್ನು ಶಿಫಾರಸು ಮಾಡಿದೆ. ಕಳೆದ ವರ್ಷ 8.1 ಪ್ರತಿಶತ ಬಡ್ಡಿದರ ನೀಡಲಾಗಿತ್ತು.
8.15 ರಷ್ಟು ಬಡ್ಡಿ ಪಾವತಿಯ ನಂತರ, ನಿವೃತ್ತಿ ನಿಧಿ ಸಂಸ್ಥೆಯು 663.91 ಕೋಟಿ ರೂಪಾಯಿಗಳ ಹೆಚ್ಚುವರಿ ಹೊರೆಯಾಗಲಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇಪಿಎಫ್ ಅಡಿಯಲ್ಲಿ ನಿಗದಿಗಿಂದ ಹೆಚ್ಚಿನ ಮೊತ್ತದ ಪಿಂಚಣಿ ನೀಡಬೇಕು ಎಂದು ಅರ್ಜಿ ಸಲ್ಲಿಸಲು ನೀಡಿದ್ದ ಗಡುವನ್ನು ಇಪಿಎಫ್‌ಒ ವಿಸ್ತರಿಸಿತ್ತು. ಈ ಮೊದಲು ಅರ್ಜಿ ಸಲ್ಲಿಸಲು ಜೂನ್ 26 ಕೊನೆಯ ದಿನವಾಗಿತ್ತು. ನಂತರ ಗಡುವನ್ನು ಜುಲೂ 11ರ ತನಕ ವಿಸ್ತರಿಸಲಾಗಿತ್ತು. ಈ ಗಡುವು ಅಧಿಕ ಪಿಂಚಣಿಗೆ ಅರ್ಜಿ ಸಲ್ಲಿಸುವ ಉದ್ಯೋಗಿಗಳಿಗೆ ಮಾತ್ರ ಅನ್ವಯಿಸುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications