ಸಾಮಾಜಿಕ ಮಾಧ್ಯಮ ನಿಯಂತ್ರಣಕ್ಕೆ ಸರ್ಕಾರದಿಂದ ನೀತಿ ಸಂಹಿತೆ, ಕರಡು ನಿಯಮ ಸಿದ್ಧ
ನವದೆಹಲಿ, ಫೆಬ್ರವರಿ 11: ಕೆಲವು ಖಾತೆಗಳನ್ನು ನಿರ್ಬಂಧಿಸಬೇಕೆಂಬ ಕೇಂದ್ರ ಸರ್ಕಾರದ ಆದೇಶವನ್ನು ಟ್ವಿಟ್ಟರ್ ಪಾಲಿಸದ ಕಾರಣ ಸರ್ಕಾರ ಮತ್ತು ಸಾಮಾಜಿಕ ಜಾಲತಾಣ ದಿಗ್ಗಜ ಸಂಸ್ಥೆಗಳ ನಡುವಿನ ಸಂಘರ್ಷ ತಿವ್ರಗೊಳ್ಳುತ್ತಿದೆ. ಈ ನಡುವೆ ಕೇಂದ್ರ ಸರ್ಕಾರವು ಎಲ್ಲ ಸಾಮಾಜಿಕ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್ ಮತ್ತು ಸುದ್ದಿ ಸಂಬಂಧಿ ವೆಬ್‌ಸೈಟ್‌ಗಳನ್ನು ನಿಯಂತ್ರಿಸುವ ನಿಯಮಗಳ ಕರಡನ್ನು ಸಿದ್ಧಪಡಿಸಿದೆ.
ಕಠಿಣ ನೀತಿ ಸಂಹಿತೆ ಮತ್ತು ದೈನಂದಿನ ಅನುಸರಣೆಯ ವರದಿ ನೀಡುವುದು ಸೇರಿದಂತೆ ಸ್ವಯಂ ನಿಯಂತ್ರಣಾ ವ್ಯವಸ್ಥೆಯನ್ನು ಈ ನಿಯಮಗಳು ರೂಪಿಸಲಿವೆ ಎಂದು ವರದಿ ತಿಳಿಸಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಲು ಮತ್ತು ಕಾನೂನು ಜಾರಿ ಸಂಸ್ಥೆಗಳಿಂದ ಬರುವ ದೂರುಗಳಿಗೆ ಸ್ಪಂದಿಸಲು ಮುಖ್ಯ ಅನುಸರಣಾ ಅಧಿಕಾರಿಯನ್ನು ನೇಮಿಸಲು ಕೇಂದ್ರ ಸರ್ಕಾರ ಆಲೋಚಿಸುತ್ತಿದೆ. ಈ ಅಧಿಕಾರಿಯು ನಿಯಮ ಅನುಸರಣೆಯ ಕುರಿತು ಸಾಮಾನ್ಯ ವರದಿ ಸಹ ಸಲ್ಲಿಸಲಿದ್ದಾರೆ. ಕುಂದುಕೊರತೆ ವಿಚಾರಣೆಯ ಸ್ವಯಂಚಾಲಿತ ಪೋರ್ಟಲ್ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ಕೂಡ ಇರಲಿದೆ.

ಮೇಲ್ವಿಚಾರಣಾ ವ್ಯವಸ್ಥೆಯನ್ನು ಸರ್ಕಾರವೇ ಅಭಿವೃದ್ಧಿಪಡಿಸಲಿದೆ. ಇದು ಕಂಪೆನಿಗಳು ಮತ್ತು ಸ್ವಯಂ ನಿಯಂತ್ರಣ ಸಂಸ್ಥೆಗಳು ನೀತಿ ಸಂಹಿತೆಯ ಪಾಲನೆಗೆ ಬದ್ಧವಾಗಿರುವಂತೆ ಸಂಯೋಜನೆ ನಡೆಸಲಿದೆ ಎಂದು ವರದಿ ತಿಳಿಸಿದೆ.
ನಿಯಮ ಪಾಲಿಸದವರಿಗೆ ಶಿಕ್ಷೆ ವಿಧಿಸುವುದರ ಬಗ್ಗೆ ಕರಡಿನಲ್ಲಿ ಉಲ್ಲೇಖಿಸಿಲ್ಲ. ಆದರೆ ಆಕ್ಷೇಪಾರ್ಹ ಅಂಶಗಳನ್ನು 36 ಗಂಟೆಗಳ ಒಳಗೆ ತೆಗೆದುಹಾಕಬೇಕು ಎಂದು ಸೂಚಿಸಲಾಗಿದೆ. ತುರ್ತು ಸಂದರ್ಭವಿದ್ದರೆ ಕ್ರಮ ತೆಗೆದುಕೊಳ್ಳುವ ಅಧಿಕಾರ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಗೆ ಇರಲಿದೆ. ಅವರು ಸಮಿತಿ ಎದುರು 48 ಗಂಟೆಯೊಳಗೆ ಸಲ್ಲಿಸಬಹುದು ಎಂದು ಹೇಳಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications